ಬೆಂಗಳೂರು: ಕೋವಿಡ್ 2ನೇ ಅಲೆ ತಡೆಗೆ ಲಾಕ್ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಹಲವು ವರ್ಗಗಳಿಗೆ ಪರಿಹಾರ ಧನವನ್ನು ಘೋಷಣೆ ಮಾಡಿದೆ. ಅದರಂತೆ, ಆಟೋ-ರಿಕ್ಷಾ, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರಿಗೆ (ಲೈಸೆನ್ಸ್ ಹೊಂದಿದ ಹಾಗೂ ನೋಂದಣಿ ಮಾಡಿಸಿದ) ಒಂದು ಬಾರಿ ಪರಿಹಾರವಾಗಿ 3,000 ರೂಪಾಯಿ ನೀಡಲು ನಿರ್ಧರಿಸಿದೆ.
ಸದ್ಯ ಪರಿಹಾರ ಧನ ನೀಡಲು ಅರ್ಜಿಗಳನ್ನು ಆನ್ಲೈನ್ನಲ್ಲಿ "ಸೇವಾಸಿಂಧು" ವೆಬ್ ಪೋರ್ಟಲ್ ಮೂಲಕ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ವ್ಯವಸ್ಥೆಯು ಕಾರ್ಯರೂಪಕ್ಕೆ ಬಂದೊಡನೆಯೇ ಮಾಹಿತಿ ನೀಡಲಾಗುವುದು. ಆ ನಂತರ ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು ಸೇವಾ ಸಿಂಧು ವೆಬ್ ಪೋರ್ಟಲ್ ಮುಖಾಂತರ ಸಲ್ಲಿಸಬೇಕಾಗಿ ಆರ್ಟಿಒ ಕೋರಿದೆ.
ಇದನ್ನೂ ಓದಿ: ಭಯೋತ್ಪಾದನಾ ವಿರೋಧಿ ದಿನ; ಸಿಎಂ ಕಚೇರಿಯಲ್ಲಿ ಪ್ರತಿಜ್ಞಾ ವಚನ ಬೋಧನೆ
ಇನ್ನು ಆಟೋರಿಕ್ಷಾ, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರುಗಳು ಪರಿಹಾರ ಧನ ಕೋರಿ ಅರ್ಜಿಗಳನ್ನು ಅನ್ಯ ಮಾರ್ಗದಲ್ಲಿ ಸಲ್ಲಿಸಲು ಅನವಶ್ಯಕವಾಗಿ ಪರಿಶ್ರಮ ಪಡುವ ಅವಶ್ಯಕತೆ ಇಲ್ಲವೆಂದು ಈ ಮೂಲಕ ತಿಳಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಎಲ್ಲ ಅರ್ಹ ಚಾಲಕರುಗಳಿಗೆ ಪರಿಹಾರ ಧನವನ್ನು ಅವರ ಖಾತೆಗೆ ನೇರವಾಗಿ ಡಿ.ಬಿ.ಟಿ. ಮೂಲಕ ವರ್ಗಾಯಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.