ETV Bharat / state

ಉದ್ಯೋಗಿನಿ, ಆಧಾರ ಯೋಜನೆಗಳಲ್ಲಿ ನಿಗದಿಪಡಿಸಿದ ಭೌತಿಕ ಹಾಗೂ ಆರ್ಥಿಕ ಗುರಿ ಎಷ್ಟು? - ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ನಿರುದ್ಯೋಗಿ ಮಹಿಳೆಯರ ಸಬಲೀಕರಣಕ್ಕಾಗಿ ಉದ್ಯೋಗಿನಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್ ಮೂಲಕ ಸಾಲ ಮತ್ತು ಸಹಾಯಧನವನ್ನು ನೀಡಲಾಗುತ್ತಿದೆ.

ಸಿಎಂ
ಸಿಎಂ
author img

By

Published : Feb 27, 2022, 7:08 AM IST

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಉದ್ಯೋಗಿನಿ ಯೋಜನೆಯಡಿ 2021-22ನೇ ಸಾಲಿನಲ್ಲಿ 1,479 ಭೌತಿಕ ಗುರಿ ಹಾಗೂ 1,500 ಲಕ್ಷ ರೂ.ಗಳ ಆರ್ಥಿಕ ಗುರಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2021-22ನೇ ಸಾಲಿನಲ್ಲಿ 'ಆಧಾರ ಯೋಜನೆಯಡಿ' 400 ಭೌತಿಕ ಗುರಿ ಹಾಗೂ 200 ಲಕ್ಷ ರೂ.ಗಳ ಆರ್ಥಿಕ ಗುರಿ ಹೊಂದಿದೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ನಿರುದ್ಯೋಗಿ ಮಹಿಳೆಯರ ಸಬಲೀಕರಣಕ್ಕಾಗಿ ಉದ್ಯೋಗಿನಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್ ಮೂಲಕ ಸಾಲ ಮತ್ತು ಸಹಾಯಧನವನ್ನು ನೀಡಲಾಗುತ್ತಿದೆ. ಈ ಯೋಜನೆಯಡಿ ವಿಕಲಚೇತನ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಶೇ. 5 ರಷ್ಟು ಗುರಿಯನ್ನು ನಿಗದಿಪಡಿಸಿ, ಮೀಸಲಿರಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್ ಇತ್ತೀಚೆಗೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಂಗವಿಕಲರ ಅಭ್ಯುದಯಕ್ಕಾಗಿ ಇರುವ ಯೋಜನೆಗಳ ವಿವರ ಇಲ್ಲಿದೆ.

ಶೈಕ್ಷಣಿಕ ಯೋಜನೆಗಳು :

ಶ್ರವಣದೋಷವುಳ್ಳ ಮಕ್ಕಳಿಗಾಗಿ ಸರ್ಕಾರದ ವಸತಿಯುತ ಶಾಲೆಗಳು: ಶ್ರವಣದೋಷವುಳ್ಳ ಮಕ್ಕಳಿಗಾಗಿ ಮೈಸೂರು, ಕಲಬುರಗಿ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲಿ 4 ಕಿವುಡು ಮಕ್ಕಳ ವಸತಿ ಶಾಲೆಗಳನ್ನು ಇಲಾಖಾವತಿಯಿಂದ ನಡೆಸಲಾಗುತ್ತಿದೆ. ಈ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ವಸತಿ, ಊಟ ಮತ್ತು ಶಿಕ್ಷಣವನ್ನು ನೀಡಲಾಗುತ್ತಿದೆ. ಈ ಪೈಕಿ ಶ್ರವಣದೋಷವುಳ್ಳ ಹೆಣ್ಣು ಮಕ್ಕಳಿಗಾಗಿ ಬೆಳಗಾವಿಯಲ್ಲಿ ಪ್ರತ್ಯೇಕ ವಸತಿ ಶಾಲೆ ಇರುತ್ತದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಶ್ರವಣದೋಷವುಳ್ಳ ಮಕ್ಕಳ ಶಾಲೆಯನ್ನು ಸರ್ಕಾರದಿಂದ ನಡೆಸಲಾಗುತ್ತಿದೆ.

ಅಂಧ ಮಕ್ಕಳಿಗಾಗಿ ಸರ್ಕಾರದ ವಸತಿಯುತ ಶಾಲೆಗಳು: ಅಂಧ ಮಕ್ಕಳಿಗಾಗಿ ಕಲಬುರಗಿ, ಮೈಸೂರು, ದಾವಣಗೆರೆ ಹಾಗೂ ಹುಬ್ಬಳ್ಳಿಯಲ್ಲಿ ವಿಶೇಷ ಶಾಲೆಗಳನ್ನು ನಡೆಸಲಾಗುತ್ತಿದೆ. ಈ ಶಾಲೆಗಳಲ್ಲಿ ದೃಷ್ಟಿದೋಷವುಳ್ಳ ಮಕ್ಕಳಿಗೆ ಉಚಿತ ಊಟ, ವಸತಿ ಮತ್ತು ಶಿಕ್ಷಣವನ್ನು ನೀಡಲಾಗುತ್ತಿದೆ. ಈ ಪೈಕಿ ದೃಷ್ಟಿದೋಷವುಳ್ಳ ಹೆಣ್ಣು ಮಕ್ಕಳಿಗಾಗಿ ದಾವಣಗೆರೆಯಲ್ಲಿ ಪ್ರತ್ಯೇಕ ವಸತಿ ಶಾಲೆ ಇದೆ.

1982ರ ರಾಜ್ಯ ಅನುದಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳು: 1982ರ ರಾಜ್ಯ ಅನುದಾನ ಸಂಹಿತೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ 34 ವಿಶೇಷ ಶಾಲೆ/ ತರಬೇತಿ ಕೇಂದ್ರಗಳನ್ನು ದೈಹಿಕ, ಅಂಧ ಶ್ರವಣದೋಷ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗಾಗಿ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಅನುದಾನವನ್ನು ಜಿಲ್ಲಾ ಪಂಚಾಯತ್ ಮೂಲಕ ಬಿಡುಗಡೆ ಮಾಡಲಾಗುತ್ತಿದೆ.

ವಿಕಲಚೇತನರಿಗೆ ವೃತ್ತಿ ತರಬೇತಿ ಕೇಂದ್ರಗಳು: ಈ ಯೋಜನೆಯಡಿ ವಿವಿಧ ರೀತಿಯ ವಿಕಲಚೇತನರಿಗೆ ವೃತ್ತಿ ತರಬೇತಿಯನ್ನು ನೀಡುವುದಾಗಿದೆ. 1982ರ ರಾಜ್ಯ ಅನುದಾನ ಸಂಹಿತೆಯಡಿ 5 ವೃತ್ತಿ ತರಬೇತಿ ಕೇಂದ್ರಗಳನ್ನು ರಾಜ್ಯ ಸಹಾಯಾನುದಾನದಡಿ ಬೆಂಗಳೂರಿನಲ್ಲಿ 3 ಮತ್ತು ಮೈಸೂರಿನಲ್ಲಿ 2 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾಕ್ ಶ್ರವಣ ಕೇಂದ್ರವನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದೆ. ವೃತ್ತಿ ತರಬೇತಿ ಕೇಂದ್ರಗಳಲ್ಲಿ ವಿವಿಧ ರೀತಿಯ ವಿಕಲಚೇತನರಿಗೆ ಫಿಟ್ಟರ್, ಟರ್ನರ್, ಸರಳ ಇಂಜಿನಿಯರಿಂಗ್, ಬೆತ್ತ, ಹಗ್ಗ, ಚಾಪೆ ಹೆಣೆಯುವುದು ಹಾಗೂ ಪ್ಲಾಸ್ಟಿಕ್ ಮೌಲ್ಡಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಪ್ರತಿ ತರಬೇತಿ ಕೇಂದ್ರದಲ್ಲಿ ವಾರ್ಷಿಕ 25 ಫಲಾನುಭವಿಗಳು ತರಬೇತಿ ಪಡೆಯಲು ಅವಕಾಶವಿದೆ.

ವಿಕಲಚೇತನ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆ ನಡೆಯುತ್ತಿರುವ ವಿಶೇಷ ಶಾಲೆಗಳು: ಈ ಯೋಜನೆಯಡಿ, ಬುದ್ಧಿಮಾಂದ್ಯ (ಸೆರಬ್ರಲ್ ಪಾಲ್ಸಿ, ಆಟಿಸಂ), ದೃಷ್ಟಿದೋಷ, ಶ್ರವಣದೋಷವುಳ್ಳ ಪಾಕ್ಕಳಿಗಾಗಿ ವಸತಿಯುತ ಹಾಗೂ ವಸತಿರಹಿತ ಶಾಲೆಗಳು ಸೇರಿದಂತೆ ಒಟ್ಟು 141 ವಿಶೇಷ ಶಾಲೆಗಳು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುತ್ತಿವೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶ್ರವಣದೋಷವುಳ್ಳ ಹಾಗೂ ದೃಷ್ಟಿ ದೋಷವುಳ್ಳ ಮಕ್ಕಳ ವಸತಿಯುತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿ ಮಗುವಿನ ನಿರ್ವಹಣೆಗೆ ಮಾಹೆ ತಲಾ 6200 ರೂ. ನಂತೆ ಹಾಗೂ ವಸತಿರಹಿತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿ ಮಗುವಿನ ನಿರ್ವಹಣೆಗೆ ಮಾಹೆ ತಲಾ 5200 ರೂ.ನಂತೆ ಹಾಗೂ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿ ಮಗುವಿನ ನಿರ್ವಹಣೆಗೆ ಮಾಹೆ 6800 ರೂ.ನಂತೆ ಹಾಗೂ ವಸತಿರಹಿತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿ ಮಗುವಿನ ನಿರ್ವಹಣೆಗೆ ಮಾಹೆ ತಲಾ 6000 ರೂ.ನಂತೆ ವರ್ಷದಲ್ಲಿ ಹತ್ತು ತಿಂಗಳ ಅವಧಿಗೆ ಅನುದಾನವನ್ನು ಮಂಜೂರು ಮಾಡಲಾಗುತ್ತಿದೆ. ಈ ಅನುದಾನದಲ್ಲಿ ಶಿಕ್ಷಕರ ಗೌರವಧನ, ಮಕ್ಕಳ ಆಹಾರ ವೆಚ್ಚ, ಕಟ್ಟಡದ ಬಾಡಿಗೆ ಹಾಗೂ ನಿರ್ವಹಣಾ ವೆಚ್ಚ, ಸಮವಸ್ತ್ರ, ವೈದ್ಯಕೀಯ ವೆಚ್ಚ ಒಳಗೊಂಡಿದೆ.

ಕೇಂದ್ರ ಸರ್ಕಾರದ ದೀನ್​ ದಯಾಳ್ ಪುನರ್ವಸತಿ ಯೋಜನೆಯಡಿ 8 ಸ್ವಯಂ ಸೇವಾ ಸಂಸ್ಥೆಗಳ ಮೂಲಕ ವಿಶೇಷ ಶಾಲೆ ಹಾಗೂ ವೃತ್ತಿ ತರಬೇತಿ ಕೇಂದ್ರಗಳು ನಡೆಯುತ್ತಿದ್ದು, ಈ ಶಾಲೆ ಹಾಗೂ ತರಬೇತಿ ಕೇಂದ್ರಗಳಿಗೆ ಕೇಂದ್ರ ಸರ್ಕಾರದಿಂದ ಶೇ.90 ರಷ್ಟು ಅನುದಾನ ಬರುತ್ತದೆ. ಉಳಿದ ಶೇ. 10 ರಷ್ಟು ವೆಚ್ಚವನ್ನು ಸಂಸ್ಥೆಯವರು ಭರಿಸಬೇಕಾಗಿದೆ.

ಅದೇ ರೀತಿ ಸರ್ಕಾರದಿಂದ ಹಲವು ಯೋಜನೆಗಳಿವೆ. ಅಂಗವಿಕಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ವಿಶೇಷ ಶಿಕ್ಷಣ ತರಬೇತಿ ಕೇಂದ್ರ ಯೋಜನೆ ಇದೆ.

ಗ್ರಾಮೀಣ ಪುನರ್ವಸತಿ ಯೋಜನೆಯನ್ನು ರಾಜ್ಯದ ಎಲ್ಲ 30 ಜಿಲ್ಲೆಗಳ 176 ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಪುನರ್​ ವಸತಿ ಕಾರ್ಯಕರ್ತರು ಹಾಗೂ ನಿರ್ದೇಶನಾಲಯದಲ್ಲಿ ರಾಜ್ಯ ಸಂಯೋಜಕರನ್ನು ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಕಾರ್ಯಕರ್ತರ ಮೂಲಕ ವಿಕಲಚೇತನರಿಗೆ ಸೌಲಭ್ಯಗಳನ್ನು ತಲುಪಿಸಲಾಗುತ್ತಿದೆ. ಪ್ರಸ್ತುತ ಗ್ರಾಮೀಣ ಪುನರ್​ ವಸತಿ ಕಾರ್ಯಕರ್ತರು ಹಾಗೂ ನಗರ ಪುನರ್​ ವಸತಿ ಕಾರ್ಯಕರ್ತರುಗಳಿಗೆ ತಿಂಗಳಿಗೆ 6000 ರೂ. ಹಾಗೂ ಗೌರವಧನ ವಿವಿದೊದ್ದೇಶ ಪುನರ್​ ವಸತಿ ಕಾರ್ಯಕರ್ತರುಗಳಿಗೆ ತಿಂಗಳಿಗೆ 12 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ.

ಸಾಧನೆ ಮತ್ತು ಪ್ರತಿಭೆ ಯೋಜನೆ: ವಿಕಲಚೇತನ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ ಧನಸಹಾಯ ನೀಡಲು 'ಸಾಧನೆ' ಎಂಬ ಯೋಜನೆ ಜಾರಿಯಲ್ಲಿದ್ದು, ಕೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ವಿಕಲಚೇತನರಿಗೆ 50,000 ರೂ.ಗಳ ಧನ ಸಹಾಯವನ್ನು ನೀಡಲಾಗುತ್ತಿದೆ.

ವಿಕಲಚೇತನರು ನೀಡುವ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ, ಧನಸಹಾಯ ನೀಡುವ ಸಲುವಾಗಿ 'ಪ್ರತಿಭೆ' ಎಂಬ ಯೋಜನೆ ಜಾರಿಯಲ್ಲಿದ್ದು, ವೈಯಕ್ತಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 2 ಸಾವಿರ ರೂ. ಹಾಗೂ ಸಮೂಹ ಕಾರ್ಯಕ್ರಮಕ್ಕೆ 10,000 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.