ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಪರಿಷತ್ ಸದಸ್ಯರು ಕಲಾಪದಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ವಿಪ್ ಜಾರಿ ಮಾಡಲಾಗಿದೆ.
ವಿಧಾನಸಭೆ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕರಿಂದ ಈಗಾಗಲೇ ವಿಪ್ ಜಾರಿಗೊಳಿಸಲಾಗಿದೆ. ವಿಧಾನಸಭೆ ಪ್ರತಿಪಕ್ಷ ಕಾಂಗ್ರೆಸ್ ಮುಖ್ಯ ಸಚೇತಕ ಅಜಯ್ ಸಿಂಗ್ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ಕಾಂಗ್ರೆಸ್ ಮುಖ್ಯ ಸಚೇತಕ ನಾರಾಯಣಸ್ವಾಮಿ ಪಕ್ಷದ ಶಾಸಕರಿಗೆ ವಿಪ್ ಜಾರಿಗೊಳಿಸಿ ಇಂದು ಕಲಾಪದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದ್ದಾರೆ.
ಇನ್ನು ವಿಪ್ ಪ್ರತಿಗಳು ನಿನ್ನೆಯೇ ಎಲ್ಲಾ ಶಾಸಕರಿಗೂ ತಲುಪಿದೆ ಎಂಬ ಮಾಹಿತಿ ಇದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ವಿಧೇಯಕ ಮಂಡನೆ ಜತೆಗೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ಇರುವ ಕಾರಣ ಶಾಸಕರ ಕಡ್ಡಾಯ ಹಾಜರಿಗೆ ಸೂಚಿಸಲಾಗಿದೆ.