ಬೆಂಗಳೂರು: ಗಂಡ-ಹೆಂಡತಿ ಮಧ್ಯೆ ಮನೆ ಮುರಿಯೋ ಕೆಲಸ ಮಾಡಬೇಡಿ ಅಂತಾ ಸಂಸದೆ ಸುಮಲತಾ ಖಡಕ್ ಆಗಿ ಹೇಳಿದ್ದಾರೆ. ದರ್ಶನ್ ಹಾಗೂ ವಿಜಯಲಕ್ಷ್ಮಿ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಧ್ಯಸ್ಥಿಕೆ ವಹಿಸಿದ್ದೇನೆ ಎಂಬುದು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದರ್ಶನ್ ಹಾಗೂ ವಿಜಯಲಕ್ಷ್ಮಿ ಗಲಾಟೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರಿಗೆ ಸುಮಲತಾ ಗರಂ ಆಗಿ ಚಾಟಿ ಬೀಸಿದರು. ಅಂಬರೀಶ್ ಅವರ 9ನೇ ತಿಂಗಳ ಪುಣ್ಯತಿಥಿ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಮಲತಾ ಅಂಬರೀಶ್, ದರ್ಶನ್ ಸಂಸಾರದ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದವರಿಗೆ ಮಾತಿನಲ್ಲೇ ಗುಡುಗಿದರು.