ETV Bharat / state

ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ?: ಕುಮಾರಸ್ವಾಮಿ ಪ್ರಶ್ನೆ - ಗ್ಯಾರಂಟಿ ಜಾಹೀರಾತು

ಗ್ಯಾರಂಟಿಗಳನ್ನು ಘೋಷಣೆ ಮಾಡುವಾಗ ಇದ್ದ ಉತ್ಸಾಹ ಈಗ ಜಾರಿ ಮಾಡಲು ಯಾಕಿಲ್ಲ ಎಂದು ಕೇಳುತ್ತಿದ್ದಾರೆ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ

Former CM H D Kumaraswamy
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
author img

By

Published : May 30, 2023, 2:42 PM IST

ಬೆಂಗಳೂರು: ಕಾಂಗ್ರೆಸ್​ಗೆ 135 ಸೀಟು ಕೊಟ್ಟ ಜನತೆ ಗ್ಯಾರಂಟಿ ಜಾರಿ ಮಾಡುವಂತೆ ಬೇಡಿಕೆ ಇಟ್ಟಿರುವುದರಲ್ಲಿ ನ್ಯಾಯವಿದೆ. ಚುನಾವಣೆಗೂ ಮುನ್ನ ಪ್ರಚಾರದ ವೇಳೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿ ಮಾಡುವುದು ರಾಜ್ಯ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿಯಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತಿದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ. ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಮೇಷ ಎಂದರೆ ಜನ ಒಪ್ಪುವರೇ? ಎಂದು ಹೇಳಿದ್ದಾರೆ.

ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ ಎಂದು ಟೀಕಿಸಿದ್ದಾರೆ.

ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ 'ಗ್ಯಾರಂಟಿ ಜಾಹೀರಾತು'ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ, ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಎಂದು ಹೇಳಿದ್ದಾರೆ.

ಅದು ಬಿಟ್ಟು ಕೆಲ ಸಚಿವರು, ಶಾಸಕರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ ಎಂದಿದ್ದಾರೆ.

ಕಾಂಗ್ರೆಸ್​ ಪಕ್ಷ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಪಕ್ಷವನ್ನು ಕೆಳಗಿಳಿಸಿ, ತಾವು ಸರ್ಕಾರ ರಚನೆ ಮಾಡಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್​ನ ಪ್ರಮುಖ ನಾಯಕರನ್ನು ಕರೆಸಿ ಪ್ರಚಾರ ಕೈಗೊಳ್ಳುವುದರ ಜೊತೆಗೆ ಐದು ಗ್ಯಾರಂಟಿ ಯೋಜೆನಗಳನ್ನೂ ಘೋಷಣೆ ಮಾಡಿತ್ತು. ಐದೂ ಗ್ಯಾರಂಟಿಗಳನ್ನು ಪಕ್ಷ ಅಧಿಕಾರಕ್ಕೆ ಬಂದ ಮೊದಲ ಅಧಿವೇಶನದಲ್ಲೇ ಜಾರಿಗೆ ತರಲಾಗುವುದು ಎನ್ನುವ ಆಶ್ವಾಸನೆಯನ್ನೂ ನೀಡಿತ್ತು. ಆ ಗ್ಯಾರಂಟಿ ಆಶ್ವಾಸನೆ ಮೇಲೆಯೆ ರಾಜ್ಯದ ಜನರು ಈ ಬಾರಿ ಕಾಂಗ್ರೆಸ್​ ಪಕ್ಷಕ್ಕೆ ಅಭೂತಪೂರ್ವ ಬೆಂಬಲವನ್ನು ಸೂಚಿಸಿ, 135 ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸುವಂತೆ ಮಾಡಿದ್ದರು. ಆದರೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್​ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳನ್ನು ಜಾರಿ ಮಾಡಲು, ಸರ್ವೇ, ಷರತ್ತುಗಳು ಎಂದು ಮೀನಾಮೇಷ ಎನಿಸುತ್ತಿದೆ. ಇದಕ್ಕೆ ರಾಜ್ಯದ ಜನತೆಯ ಜೊತೆಗೆ ವಿರೋಧ ಪಕ್ಷಗಳು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿವೆ.

ಇದನ್ನೂ ಓದಿ: ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಜಾರಿಗೆ ಬೇಕು 50,000 ಕೋಟಿ ರೂಪಾಯಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.