ETV Bharat / state

ಗ್ರೂಪ್ ಸಿ ಹುದ್ದೆ ನೀಡಿದ್ದಕ್ಕೆ ಪಕ್ಷ, ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಪ್ರವೀಣ್​ ನೆಟ್ಟಾರು ಪತ್ನಿ ನೂತನ ಕುಮಾರಿ - Wife of Praveen Nettaru offered thanked the govt

ಗ್ರೂಪ್ ಸಿ ಹುದ್ದೆ ನೀಡಿದ್ದಕ್ಕೆ ಪ್ರವೀಣ್​ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ಪಕ್ಷ ಹಾಗೂ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದರು.

Praveen Nettaru's wife thanked the government
ಸಿಎಂ ಭೇಟಿಯಾದ ನೆಟ್ಟಾರು ಪತ್ನಿ ನೂತನ ಕುಮಾರಿ
author img

By

Published : Oct 7, 2022, 8:53 PM IST

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ಗ್ರೂಪ್ ಸಿ ಹುದ್ದೆ ನೀಡಿದ್ದಕ್ಕೆ ಪಕ್ಷ ಮತ್ತು ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಅವರು ಇಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಉಪಸ್ಥಿತಿಯಲ್ಲಿ ಅಧಿಕೃತ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು.

Praveen Nettaru's wife thanked the government
ಸಿಎಂ ಭೇಟಿಯಾದ ನೆಟ್ಟಾರು ಪತ್ನಿ ನೂತನ ಕುಮಾರಿ

ಗುತ್ತಿಗೆ ಆಧಾರದಲ್ಲಿ ಸಿ ಗ್ರೂಪ್​​ ಹುದ್ದೆಗೆ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರನ್ನು ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಚಿವಾಲಯದಲ್ಲಿ ಹಿರಿಯ ಸಹಾಯಕ ಹುದ್ದೆಗೆ ನೂತನ ಕುಮಾರಿ ಅವರು ನೇಮಕವಾಗಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಅದರಂಂತೆ ಸೆಪ್ಟೆಂಬರ್ ಅಂತ್ಯದಲ್ಲಿ ಸರ್ಕಾರವು ಗುತ್ತಿಗೆ ಆಧಾರದಲ್ಲಿ ನೂತನ ಅವರನ್ನು ನೇಮಕಾತಿ ಮಾಡಿ ಆದೇಶ ಹೊರಡಿಸಿತ್ತು. ಅದರಂತೆ ಉದ್ಯೋಗಕ್ಕೆ ಹಾಜರಾಗಿರುವ ನೂತನ ಕುಮಾರಿ ಅವಕಾಶಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟರು (32) ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಬಳಿಕ ಕೊಲೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದು, ಸರ್ಕಾರದ ಸಾಧನಾ ಸಮಾವೇಶವನ್ನೇ ಮುಂದೂಡಿಕೆ ಮಾಡಿದ್ದರು.

ಇದನ್ನೂ ಓದಿ: PUCಯಲ್ಲಿ ಟಾಪರ್, ಏರೋನಾಟಿಕಲ್ ಇಂಜಿನಿಯರಿಂಗ್ ಕನಸು: ಕೋಪದಲ್ಲಿ ಅಜ್ಜಿ ಕೊಂದು ಹೋಟೆಲ್ ಸಪ್ಲೈಯರ್ ಆದ ಮೊಮ್ಮಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.