ETV Bharat / state

ಜನವರಿ 26ರ ನಂತರ ಮನೆ ಬಾಗಿಲಿಗೆ ಪಡಿತರ: ಸಿಎಂ ಬೊಮ್ಮಾಯಿ - cm bommai latest news

ಅಧಿಕಾರ ಹೆಪ್ಪುಗಟ್ಟಿ ವಿಧಾನಸಭೆಯಲ್ಲಿ ಕುಳಿತುಕೊಳ್ಳದೆ, ಜೇನುತುಪ್ಪವಾಗಿ ಗ್ರಾಮೀಣ ಪ್ರದೇಶಕ್ಕೆ ಹರಿಯಬೇಕೆನ್ನುವ ಕಲ್ಪನೆ ನಮ್ಮದು. ಕಾಲ ಬದಲಾಗಿದ್ದು, ಜನರು ಜಾಗೃತರಾಗಿದ್ದಾರೆ. ಸ್ಪಂದನಶೀಲ ಸರ್ಕಾರ ಕರ್ನಾಟಕದಲ್ಲಿದೆ. ಸ್ವಚ್ಚ, ದಕ್ಷ, ಜನಪರ ಆಡಳಿತವನ್ನು ನಾವು ಕೊಡುತ್ತೇವೆ. ಅದರ ಲಾಭವನ್ನು ಜನ ಪಡೆಯಬೇಕು ಎಂದು ಸಿಎಂ ತಿಳಿಸಿದರು.

will be providing rations to door steps cm bommai
ಜನವರಿ 26 ರ ನಂತರ ಮನೆ ಬಾಗಿಲಿಗೆ ಪಡಿತರ: ಸಿಎಂ
author img

By

Published : Oct 17, 2021, 1:46 PM IST

ಬೆಂಗಳೂರು: ಜನವರಿ 26 ರ ನಂತರ ಪಡಿತರವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಸಾಮಾಜಿಕ ಭದ್ರತೆ ಮನೆ ಬಾಗಿಲಿಗೆ ಬರಬೇಕು. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಎಲ್ಲ ಸೌಲಭ್ಯಗಳು ದೊರಕಲು ಯೋಜನೆ ರೂಪಿಸಲಾಗಿದೆ. ಪ್ರಾಯೋಗಿಕವಾಗಿ ನವೆಂಬರ್ 1ರಂದು ಜನಸೇವಕ ಕಾರ್ಯಕ್ರಮವನ್ನು ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲ ಸೌಲಭ್ಯಗಳನ್ನು ಮೊಬೈಲ್ ಮೂಲಕ ದೊರಕಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಪಿಂಚಣಿ ಸೌಲಭ್ಯ ಆನ್‌ಲೈನ್‌ನಲ್ಲಿ ಈಗಾಗಲೇ ಲಭ್ಯವಿದೆ. ಇದು ಲಭ್ಯವಾಗುವಲ್ಲಿ ತೊಂದರೆಯಾದರೆ, ತಾಲ್ಲೂಕು ಕಚೇರಿಗೆ ಹೋಗಬೇಕಾಗಿಲ್ಲ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಇರುವ ಕೇಂದ್ರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಜನರ ಸೇವೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಹಿಡಿದು, ಗ್ರಾಮ ಪಂಚಾಯತಿಯ ಅಧಿಕಾರಿಗಳು ಭಾಗವಹಿಸಬೇಕು ಎಂದರು.

ಅಧಿಕಾರ ಹೆಪ್ಪುಗಟ್ಟಿ ವಿಧಾನಸಭೆಯಲ್ಲಿ ಕುಳಿತುಕೊಳ್ಳದೆ, ಜೇನುತುಪ್ಪವಾಗಿ ಗ್ರಾಮೀಣ ಪ್ರದೇಶಕ್ಕೆ ಹರಿಯಬೇಕೆನ್ನುವ ಕಲ್ಪನೆ ನಮ್ಮದು. ಕಾಲ ಬದಲಾಗಿದ್ದು, ಜನರು ಜಾಗೃತರಾಗಿದ್ದಾರೆ. ಸ್ಪಂದನಶೀಲ ಸರ್ಕಾರ ಕರ್ನಾಟಕದಲ್ಲಿದೆ. ಸ್ವಚ್ಚ, ದಕ್ಷ, ಜನಪರ ಆಡಳಿತವನ್ನು ನಾವು ಕೊಡುತ್ತೇವೆ. ಅದರ ಲಾಭವನ್ನು ಜನ ಪಡೆಯಬೇಕು.

ನಮ್ಮ ಸರ್ಕಾರ ಬಡವರಿಗೆ 4 ಲಕ್ಷ ಮನೆಗಳನ್ನು ಕೇವಲ ಒಂದೂವರೆ ವರ್ಷದಲ್ಲಿ ಕಟ್ಟಿದ್ದು, ನಗರಗಳ ಕೊಳಗೇರಿಯಲ್ಲಿರುವವರಿಗೆ 1 ಲಕ್ಷ ಮನೆಗಳನ್ನು ಕಟ್ಟಿ ಕೊಡಲಾಗುತ್ತಿದೆ. ಜಲ್ ಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಲು 2 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ ಅಮೃತ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಸಮಗ್ರ ಅಭಿವೃದ್ಧಿಯ ಕಲ್ಪನೆಯನ್ನು ಸರ್ಕಾರ ಹೊಂದಿದ್ದು, ಉದ್ಯಮ, ಉದ್ಯೋಗಕ್ಕೆ ಸಮಾನ ಮಹತ್ವ ನೀಡಿದೆ. ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಹೇಳಿದರು.

ದಾವಣೆಗೆರೆ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ ಎಂದ ಅವರು, ನ್ಯಾಮತಿಗೆ ಮಿನಿ ವಿಧಾನಸೌಧವನ್ನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.