ETV Bharat / state

ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳು ಪುನರಾರಂಭ: ಸಿಎಂ ಸಿದ್ದರಾಮಯ್ಯ ಭರವಸೆ

ಅಲ್ಪಸಂಖ್ಯಾತರ ನಿಯೋಗ ಸೇರಿದಂತೆ ಹಲವು ನಿಯೋಗಗಳು ಸಲ್ಲಿಸಿದ್ದ ಬೇಡಿಕೆಗಳಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.

Delegation of the Central Council of Minority Muslim Thinkers' Chavadi
ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗ
author img

By

Published : Jun 30, 2023, 7:44 PM IST

ಬೆಂಗಳೂರು: ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಂದು ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗದ ಭೇಟಿ ವೇಳೆ ಮಾತನಾಡಿದ ಅವರು, ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಸಿಎಂ ತಿಳಿಸಿದರು.

ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ವಿದ್ಯಾರ್ಥಿ ಹಾಗೂ ದಲಿತ ಚಳವಳಿಗಳು ಹಾಗೂ ಜನಪರವಾದ ಇತರೆ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿ ಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಕುರಿತು ಬೇಡಿಕೆಗಳನ್ನು ಸಲ್ಲಿಸಲಾಯಿತು.

ಕ್ರೈಸ್ತರೂ ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ- ಸಿಎಂ: ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಅಭಯ ನೀಡಿದರು. ಗೃಹಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಸಿಎಂ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತ ಚರ್ಚಿಸಿದರು. ಮತಾಂತರ ನಿಷೇಧ ಕಾಯ್ದೆಗೆ ತರಲಾಗಿದ್ದ ಸಂವಿಧಾನ ವಿರೋಧಿ ತಿದ್ದುಪಡಿಯನ್ನು ರದ್ದುಮಾಡಲು ನಿರ್ಧರಿಸಲಾಗಿದೆ. ಮತಾಂತರ ನಿಷೇಧ ಕಾಯ್ದೆಯಡಿ ಪಾದ್ರಿಗಳ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

1 ಕೋಟಿ ರೂಪಾಯಿ ವಿಶೇಷ ಅನುದಾನದ ಬೇಡಿಕೆ: ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ ಕಾರ್ಯ ಚಟುವಟಿಕೆಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಸಂಘದ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು. ಸಂಘದ ಅಧ್ಯಕ್ಷೆ ಹೆಚ್.ಎಲ್.ಪುಷ್ಪ ಅವರ ನೇತೃತ್ವದ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಭೇಟಿಯಾಗಿ ಹಲವು ಮಹತ್ವದ ಸಂಗತಿಗಳನ್ನು ಚರ್ಚಿಸಿ ತಮ್ಮ ಬೇಡಿಕೆಗಳನ್ನು ಮಂಡಿಸಿತು. ವಿಶೇಷ ಅನುದಾನದ ಜತೆಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅರ್ಹ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು, "ನನ್ನ ಕವಿತೆ-ನನ್ನ ಹಾಡು" ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸೂಚಿಸಬೇಕು ಎನ್ನುವುದೂ ಸೇರಿ ಹಲವು ಹಕ್ಕೊತ್ತಾಯಗಳನ್ನು ಮಂಡಿಸಿದರು. ನಿಯೋಗದಲ್ಲಿ ವಸುಂಧರಾ ಭೂಪತಿ, ಎಂ.ಎಸ್.ಆಶಾದೇವಿ, ಬಿ.ಟಿ. ಲಲಿತಾ ನಾಯಕ್ ಸೇರಿ ಹಲವು ಲೇಖಕಿಯರಿದ್ದರು.

The delegation led by Manjunath H., President of Peenya Industrial Association
ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮಂಜುನಾಥ್ ಹೆಚ್ ಅವರ ನೇತೃತ್ವದ ನಿಯೋಗ

ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ: ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮಂಜುನಾಥ್ ಹೆಚ್ ಅವರ ನೇತೃತ್ವದ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಈ ಭರವಸೆ ನೀಡಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೆ.ಇ.ಆರ್.ಸಿ ವಿದ್ಯುತ್ ದರ ಹೆಚ್ಚಳ ಮಾಡಿತ್ತು. ಹೀಗಾಗಿ ಅವರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಪೀಣ್ಯಾ ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ಸ್ಥಾಪನೆ, ಕೆಐಎಡಿಬಿ ಕೈಗಾರಿಕಾ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಪರಿಶೀಲಿಸಿದ ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ಆಶ್ವಾಸನೆ ನೀಡಿದರು. ಸಂಘದ ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಹೆಚ್.ಕೆ. ಮಲ್ಲೇಶ್ ಗೌಡ, ಖಜಾಂಚಿ ತಿಪ್ಪೇಶಪ್ಪ ಬಿ.ಸಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕರ್ನಾಟಕದ ನೀರಾವರಿ ಯೋಜನೆಗಳಿಗೆ ತ್ವರಿತ ಮಂಜೂರಾತಿ ನೀಡಲು ಕೇಂದ್ರಕ್ಕೆ ಮನವಿ: ಡಿಸಿಎಂ ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.