ETV Bharat / state

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ದೌಡಾಯಿಸಿದ ಗೆದ್ದ ಅಭ್ಯರ್ಥಿಗಳು: ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆ - Winning candidates visits

ಪರಿಷತ್ ಹಾಗೂ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಯಗಳಿಸಿದ ಪಕ್ಷದ ಅಭ್ಯರ್ಥಿಗಳು ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಇದೇ ವೇಳೆ ಚುನಾವಣೆಯಲ್ಲಿ ಸಾಥ್​ ನೀಡಿದ ನಾಯಕರಿಗೆ, ಕಾರ್ಯಾಲಯ ಸಿಬ್ಬಂದಿಗೆ ಧನ್ಯವಾದ ಸಹ ಸಲ್ಲಿಸಿದರು.

Winning candidates visits BJP office
ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಗೆದ್ದ ಅಭ್ಯರ್ಥಿಗಳು
author img

By

Published : Nov 11, 2020, 10:12 PM IST

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆ ಮತ್ತು ನಾಲ್ಕು ಕ್ಷೇತ್ರಗಳ ಪರಿಷತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಬಿಜೆಪಿ ಕಚೇರಿಗೆ ಭೇಟಿ ನೀಡಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಯಗಳಿಸಿದ ಮುನಿರತ್ನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಪಕ್ಷದ ನಾಯಕರ ಜೊತೆ ಕೆಲಕಾಲ ಮಾತುಕತೆ ನಡೆಸಿದರು.

Winning candidates visits BJP office
ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಗೆದ್ದ ಅಭ್ಯರ್ಥಿಗಳು

ಚುನಾವಣೆಯಲ್ಲಿ ಸಾಥ್​ ನೀಡಿದ ನಾಯಕರಿಗೆ, ಕಾರ್ಯಾಲಯ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿದರು.

ನಂತರ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಯಗಳಿಸಿದ ಡಾ. ರಾಜೇಶ್‌ ಗೌಡ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.‌ ರವಿಕುಮಾರ್‌ ಮತ್ತು ಮಹೇಶ್‌ ಟೆಂಗಿನಕಾಯಿ, ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ತುಮಕೂರು ಜಿಲ್ಲಾಧ್ಯಕ್ಷ ಎಸ್.‌ ಸುರೇಶ್‌ ಗೌಡ ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು.

ವಿಧಾನ ಪರಿಷತ್‌ ಚುನಾವಣೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜಯಗಳಿಸಿದ ಪುಟ್ಟಣ್ಣ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಉಳಿದ ಅಭ್ಯರ್ಥಿಗಳು ನಾಳೆ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.