ಬೆಂಗಳೂರು: ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಮುಂಜಾನೆ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಸೋನು ಪೂಜಾರಿ ಎಂದು ಗುರುತಿಸಲಾಗಿದೆ. ಈಕೆ ತಾನು ವಾಸವಿದ್ದ ಅಪಾರ್ಟ್ಮೆಂಟಿನ ನಾಲ್ಕನೇ ಮಹಿಡಿಯಿಂದ ಬಿದ್ದು ಮೃತಪಟ್ಟಿದ್ದಾಳೆ.
ಮೃತ ಸೋನು ಪೂಜಾರಿಗೆ ವಿವಾಹವಾಗಿದ್ದು, ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಂಡ ನಿರಂಜನ್ ಜೊತೆ ಸೋನು ವಾಸವಿದ್ದಳು. ಈಕೆಯ ಪತಿ ನಿರಂಜನ್ ಕೆಲಸದ ನಿಮಿತ್ತ ಮುಂಬೈಗೆ ತೆರಳಿದ್ದರು. ಇಂದು ಮುಂಜಾನೆ 8 ಗಂಟೆ ಸುಮಾರಿಗೆ ಅಪಾರ್ಟ್‌ಮೆಂಟಿನ ನಾಲ್ಕನೇ ಮಹಡಿಯಿಂದ ಬಿದ್ದಿದ್ದು ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪೊಲೀಸರು ನಿರಂಜನ್ಅನ್ನು ಸಂಪರ್ಕಿಸಿ ಅವರ ಪತ್ನಿ ಮೃತಪಟ್ಟಿರುವ ಮಾಹಿತಿಯನ್ನು ರವಾನಿಸಿದ್ಧಾರೆ. ಸುದ್ದಿ ತಿಳಿದ ನಿರಂಜನ್ ಮುಂಬೈನಿಂದ ಬೆಂಗಳೂರಿಗೆ ದೌಡಾಯಿಸುತ್ತಿದ್ದಾರೆ.
ಇನ್ನು ಸೋನು ಪೂಜಾರಿ ಮನೆಯಲ್ಲಿ ಒಬ್ಬರೇ ಇದ್ದರು. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪುಟ್ಟೇನಹಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: BWSSB ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಗು ಸಾವು; ಇಂಜಿನಿಯರ್ ಹಾಗೂ ಕಂಟ್ರಾಕ್ಟರ್ ವಿರುದ್ಧ ಪ್ರಕರಣ ದಾಖಲು