ETV Bharat / state

ಮಹಿಳಾ KAS ಅಧಿಕಾರಿಗೆ ಸಹೋದರನಿಂದಲೇ ಜೀವ ಬೆದರಿಕೆ: ಪ್ರಕರಣ ದಾಖಲು - Jayanagar Police Station

ಬ್ಯುಸಿನೆಸ್​ಗೆ ಹಣ ನೀಡಲು ನಿರಾಕರಿಸಿದ್ದಕ್ಕೆ ಮಹಿಳಾ ಕೆಎಎಸ್ ಅಧಿಕಾರಿಗೆ ಸ್ವಂತ ಸಹೋದರನೇ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

Life threatening
ಜೀವ ಬೆದರಿಕೆ
author img

By

Published : May 26, 2023, 1:31 PM IST

Updated : May 26, 2023, 2:29 PM IST

ಬೆಂಗಳೂರು : ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಮಹಿಳಾ ಅಧಿಕಾರಿಗೆ ಸ್ವಂತ ಸಹೋದರನೇ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್​​​ ಅಧಿಕಾರಿ ಡಾ. ಮೈತ್ರಿ ನೀಡಿರುವ ದೂರಿನನ್ವಯ ಅವರ ಸಹೋದರ ಡಾ.ಸಂಜಯ್ ವಿರುದ್ಧ ಹಲ್ಲೆ, ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಜಯನಗರದಲ್ಲಿ ತಮ್ಮ ಕುಟುಂಬದೊಂದಿಗೆ ಡಾ. ಮೈತ್ರಿ ವಾಸವಿದ್ದು, ಸಹೋದರ ಡಾ. ಸಂಜಯ್ ಪ್ರತ್ಯೇಕವಾಗಿ ವಾಸವಿದ್ದರು. ಎರಡು ವರ್ಷಗಳಿಂದ ತಾನು ಹೊಸದಾಗಿ ಬ್ಯುಸಿನೆಸ್ ಮಾಡುತ್ತಿದ್ದೇನೆ, ಅದಕ್ಕಾಗಿ ಎರಡು-ಮೂರು ಕೋಟಿ ರೂ ಕೊಡು ಎಂದು ಕೇಳುತ್ತಿದ್ದ. ಆದರೆ ಹಣ ನೀಡಲು ಮೈತ್ರಿ ನಿರಾಕರಿಸಿದ್ದರಂತೆ. ಮೇ 11 ರಂದು ಕರ್ತವ್ಯ ಮುಗಿಸಿಕೊಂಡು ಮೈತ್ರಿಯವರು ಮನೆಗೆ ಬರುವ ಸಮಯಕ್ಕೆ ಸರಿಯಾಗಿ ಮನೆಗೆ ಬಂದಿದ್ದ ಸಂಜಯ್, ಮೈತ್ರಿ ಮೇಲೆ ಮಕ್ಕಳ ಮುಂದೆಯೇ ಹಲ್ಲೆ ಮಾಡಿದ್ದಾನೆ. ಅಲ್ಲದೇ ಹಣ ನೀಡದಿದ್ದಲ್ಲಿ ನಿನ್ನ ಮೇಲೆ ಭಾನಾಮತಿ ಮಾಡಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಡಾ.ಮೈತ್ರಿ ನೀಡಿರುವ ದೂರಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಡಾ. ಸಂಜಯ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಕಡಬ: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಯುವತಿಗೆ ಬೆದರಿಕೆ ಹಾಕಿದ್ದ ಯುವಕ ಸಾವು: ಪ್ರಕರಣವೊಂದರಲ್ಲಿ ಬಂಧಿಸಲು ಸ್ಥಳಕ್ಕೆ ಆಗಮಿಸಿದ್ದ ಪೊಲೀಸರನ್ನು ಕಂಡ ಯುವಕನೊಬ್ಬ ತಪ್ಪಿಸಿಕೊಳ್ಳುವ ಭರದಲ್ಲಿ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮೇ 24ರಂದು ನಡೆದಿದೆ. ಮೊಹಮ್ಮದ್ ಹುಸೇನ್ (31) ಮೃತ ಯುವಕ ಎಂದು ಗುರುತಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ನಡೆದಿದ್ದೇನು?: ಸ್ಥಳೀಯ ಯುವತಿಗೆ ಬೆದರಿಕೆ ಹಾಕಿದ ಆರೋಪದಡಿ ಮೊಹಮ್ಮದ್ ಹುಸೇನ್ ವಿರುದ್ಧ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ಸಂಜೆ 7 ಗಂಟೆಯ ಸುಮಾರಿಗೆ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿರುವ ಮನೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸ್ ಸಿಬ್ಬಂದಿ ತೆರಳಿದ್ದರು. ಪೊಲೀಸರನ್ನು ಕಂಡ ಮೊಹಮ್ಮದ್ ಹುಸೇನ್, ಮನೆಯ ನಾಲ್ಕನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ.

ಹಿಂಡಲಗಾ ಜೈಲಿನ ಕೈದಿ ವಿರುದ್ಧ ಎಫ್ಐಆರ್: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎನ್‌ಐಎ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ. ಜಯೇಶ್ ಪೂಜಾರಿ ಎಂಬ ಆರೋಪಿ ಕೊಲೆ ಪ್ರಕರಣವೊಂದರಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಬಂಧಿಯಾಗಿದ್ದ. ಮೊದಲಿಗೆ ಜ.14ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕುವುದರ ಜೊತೆಗೆ 10 ಕೋಟಿ ರೂ. ಹಣಕ್ಕೆ ಬೇಡಿಕೆ ಹಾಕಿದ್ದ. ಇದಾದ ಬಳಿಕ ಮಾರ್ಚ್​ 21ರಂದು ಮತ್ತೆ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿಯವರಿಗೆ ಜೀವ ಬೆದರಿಕೆ ಹಾಕಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದಾಗ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯು ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿದ್ದು ಬಹಿರಂಗವಾಗಿತ್ತು. ಹೀಗಾಗಿ ಆರೋಪಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

Last Updated : May 26, 2023, 2:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.