ಬೆಂಗಳೂರು: ಇತ್ತೀಚೆಗೆ ಆ್ಯಸಿಡ್ ದಾಳಿಗೆ ತುತ್ತಾಗಿದ್ದ ರಂಗಭೂಮಿ ಕಲಾವಿದೆ ದೇವಿ ಎಂಬುವವರು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರಾಜ್ಯ ಮಹಿಳಾ ಆಯೋಗದ ಸದಸ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, 'ವೈಯಕ್ತಿಕ ಕಾರಣಕ್ಕೆ ಮೂವರು ರಂಗಭೂಮಿ ಕಲಾವಿದೆ ದೇವಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ. ಮಾರ್ಚ್ 17 ರಂದು ಬೇಸಿಗೆ ಕಾರಣಕ್ಕೆ ಅವರು ಮನೆ ಬಾಗಿಲು ತೆಗೆದುಕೊಂಡು ವಿಶ್ರಾಂತಿ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ದಿಢೀರ್ ಮನೆಯೊಳಗೆ ನುಗ್ಗಿದ ರಮೇಶ್, ಸ್ವಾತಿ, ಯೋಗೇಶ್ ಎಂಬುವವರು ಟಾಯ್ಲೆಟ್ ಕ್ಲೀನ್ ಮಾಡುವ ಆ್ಯಸಿಡ್ ಎರಚಿ ಪರಾರಿಯಾಗಿದ್ದರು. ಮೊದಲು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ದೇವಿಯವರನ್ನು ನಂತರ ಚಿಕಿತ್ಸೆಗೆ ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ' ಎಂದು ತಿಳಿಸಿದರು.
ಇದನ್ನೂ ಓದಿ: ರಾಜಕಾರಣಿಗಳು, ಶ್ರೀಮಂತರಿಗೆ ಉನ್ನತ ಶಿಕ್ಷಣ ದುಡ್ಡು ಸಂಗ್ರಹಿಸುವ ಹುಂಡಿಯಾಗಿದೆ : ಹೆಚ್ಡಿಕೆ
ಸದ್ಯ ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಗಾಯದ ತೀವ್ರತೆ 10% ರಷ್ಟಿದೆ. ಮುಖ ಹಾಗೂ ಬೆನ್ನಿಗೆ ಗಾಯಗಳಾಗಿದ್ದು ಚಿಕಿತ್ಸೆ ಮುಂದುವರೆದಿದೆ.