ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ನಗರದ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಕಾಂಗ್ರೆಸ್ ಭವನದವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಹೊರಟು ಆನಂದರಾವ್ ವೃತ್ತದ ಮೂಲಕ ಸಾಗಿ ಕಾಂಗ್ರೆಸ್ ಭವನ ತಲುಪಿದರು.
ಇದನ್ನೂ ಓದಿ: ಕೇರಳದ ಹೈವೇಯಲ್ಲಿ ದರೋಡೆ: ಆರೋಪಿಯೊಂದಿಗೆ ಕಡಬ ತಾಲೂಕಿಗೆ ಬಂದ ಕೇರಳ ಪೊಲೀಸರು
ಮಾರ್ಗದುದ್ದಕ್ಕೂ ಕಾರ್ಯಕರ್ತರು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರ ಸಚಿವರು ಹಾಗೂ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.