ETV Bharat / state

ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ: ಪವಾಡ ಸದೃಶ್ಯ ರೀತಿಯಲ್ಲಿ‌ 7 ವರ್ಷದ ಬಾಲಕ ಪಾರು - women died in accident in bengaluru

ಲಾರಿ, ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟು, ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

Etv Bharatwomen died in an accident in bengaluru
ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ: ಪವಾಡ ಸದೃಶ ರೀತಿಯಲ್ಲಿ‌ 7 ವರ್ಷದ ಬಾಲಕ ಪಾರು
author img

By

Published : Apr 2, 2023, 5:15 PM IST

Updated : Apr 2, 2023, 5:45 PM IST

ಬೆಂಗಳೂರು: ಸರಕು ಸಾಗಣೆ ಲಾರಿ, ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು, ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ ಬಳಿ ನಡೆದಿದೆ. ಸಿಮೆಂಟ್ ತುಂಬಿದ್ದ ಲಾರಿ ಹರಿದ ಪರಿಣಾಮ ಅನುಷಾ (29) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಸಂಬಂಧಿ ವನಜಾಕ್ಷಿ (50) ಎಂಬುವವರ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ 7 ವರ್ಷದ ಬಾಲಕ ಬದುಕುಳಿದಿದ್ದಾನೆ.

ದೀಪಾಂಜಲಿ ನಗರ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ನಾಯಂಡಹಳ್ಳಿ ಜಂಕ್ಷನ್ ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಲಾರಿ ಅನುಷಾ ತಲೆ ಮೇಲೆ ಹರಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಸಂಬಂಧಿ ವನಜಾಕ್ಷಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪವಾಡ ಸದೃಶ್ಯವೆಂಬಂತೆ ಘಟನೆಯಲ್ಲಿ ಬಾಲಕ ಬಚಾವಾಗಿದ್ದಾನೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಬಳಿಕ ಕೆಎಸ್ಆರ್ಟಿಸಿ ಬಸ್ಸಿಗೆ ಲಾರಿ ಡಿಕ್ಕಿಯಾಗಿದ್ದು, ಬಸ್ ನಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಬಸ್ ಹಾಗೂ ಲಾರಿ ಮೇಲೆ ಕಲ್ಲು ತೂರಿ ಆಕ್ರೋಶ : ಲಾರಿ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಿ ಸ್ಥಳೀಯರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದು, ಬಸ್ ಹಾಗೂ ಲಾರಿ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ‌. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:10 ದಿನಗಳ ಹಿಂದಷ್ಟೇ ದಾಂಪತ್ಯಕ್ಕೆ ಕಾಲಿಟ್ಟ ನವಜೋಡಿ ಅಪಘಾತದಲ್ಲಿ ಸಾವು

Last Updated : Apr 2, 2023, 5:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.