ETV Bharat / state

ಭಾರತ ಚುನಾವಣಾ ಆಯೋಗದಿಂದ ಕರ್ನಾಟಕ ರಾಜ್ಯಕ್ಕೆ ಎರಡು ಪ್ರತಿಷ್ಠಿತ ಪ್ರಶಸ್ತಿ ಘೋಷಣೆ - ಭಾರತ ಚುನಾವಣಾ ಆಯೋಗ

ಭಾರತ ಚುನಾವಣಾ ಆಯೋಗದಿಂದ ಕರ್ನಾಟಕ ರಾಜ್ಯದ ಇಬ್ಬರು ಅಧಿಕಾರಿಗಳಿಗೆ ಪ್ರತಿಷ್ಠಿತ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.

ದಿವ್ಯಾ ಪ್ರಭು ಹಾಗೂ ಶಿಖಾ ಸಿ
ದಿವ್ಯಾ ಪ್ರಭು ಹಾಗೂ ಶಿಖಾ ಸಿ
author img

By ETV Bharat Karnataka Team

Published : Jan 17, 2024, 10:50 PM IST

ಬೆಂಗಳೂರು : ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ನೀಡುತ್ತದೆ. ಇದಕ್ಕೆ ನಮ್ಮ ರಾಜ್ಯದ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.

2023ನೇ ಸಾಲಿನ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಸಾಮಾನ್ಯ ಪ್ರಶಸ್ತಿ ವರ್ಗದಡಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಾ ಪ್ರಭು ಹಾಗೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಶಿಖಾ ಸಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದಿವ್ಯಾ ಅವರು ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ವಿಶೇಷ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಅವರು ಚುನಾವಣೆಯಲ್ಲಿ ನಿರ್ವಹಿಸಿದ ಕಾರ್ಯಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮರಾಗಿ ಗುರುತಿಸಿಕೊಂಡಿದ್ದನ್ನು ಆಯೋಗ ಪ್ರಶಸ್ತಿಗೆ ಪರಿಗಣಿಸಿದೆ.

ಶಿಖಾ ಸಿ ಅವರು ಕಳೆದ 2023 ರ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಆಯುಕ್ತರಾಗಿ ಇಲಾಖೆಯ ಮೂಲಕ ಮತದಾರರಲ್ಲಿ ಉಚಿತ ಉಡುಗೊರೆಗಳ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ, ವಾಣಿಜ್ಯ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತಿ ಪಾಲನೆ ಸೇರಿದಂತೆ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಆಯೋಗ ಅವರನ್ನು ಹಾಗೂ ಇಲಾಖೆಯನ್ನು ಈ ಪ್ರಶಸ್ತಿಗೆ ಪರಿಗಣಿಸಿದೆ.

ಆಯೋಗವು ಚುನಾವಣೆಗಳಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಹಾಗೂ ಅವರನ್ನು ಅಭಿನಂದಿಸಲು ಪ್ರತಿ ವರ್ಷ ಸಾಮಾನ್ಯ ವರ್ಗ, ವಿಶೇಷ ವರ್ಗ, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳು ಹಾಗೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ರಾಜ್ಯ ಎಂದು ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. ಆಯೋಗ ಪ್ರತಿ ವರ್ಷ ನವದೆಹಲಿಯಲ್ಲಿ ಜನವರಿ 25 ರಂದು ಹಮ್ಮಿಕೊಳ್ಳುವ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕ ಸಂಘಕ್ಕೆ ರಾಜೋತ್ಸವ ಪ್ರಶಸ್ತಿ ಗರಿ (ಪ್ರತ್ಯೇಕ ಸುದ್ದಿ) : ಮಲೆನಾಡಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕೇಂದ್ರವಾಗಿ ಕರ್ನಾಟಕ ಸಂಘ ಕಳೆದ 94 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಾ ಬರುತ್ತಿದೆ. ಸಂಘದ ನಿರಂತರ ಕನ್ನಡ ಸೇವಾ ಚಟುವಟಿಕೆಗಳನ್ನು ಗುರುತಿಸಿ ರಾಜ್ಯ ಸರ್ಕಾರವು ಸಂಘ-ಸಂಸ್ಥೆಗಳಿಗೆ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ (ನವೆಂಬರ್ -3-23) ಗೌರವಿಸಿತ್ತು. ಕರ್ನಾಟಕ ಸಂಘಕ್ಕೆ ಪ್ರಶಸ್ತಿ ನೀಡುವ ಮೂಲಕ ರಾಜ್ಯ ಸರ್ಕಾರ ಕನ್ನಡವನ್ನು ಉಳಿಸಿ ಬೆಳೆಸಲು ಪ್ರೋತ್ಸಾಹ ನೀಡಿದಂತಾಗಿತ್ತು.

ಇದನ್ನೂ ಓದಿ: ಶಿವಮೊಗ್ಗ: ಮಲೆನಾಡ ಸಾಹಿತ್ಯ, ಸಾಂಸ್ಕೃತಿಕ ಕೇಂದ್ರವಾದ ಕರ್ನಾಟಕ ಸಂಘಕ್ಕೆ ರಾಜೋತ್ಸವ ಪ್ರಶಸ್ತಿ ಗರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.