ಬೆಂಗಳೂರು: ಬಡ್ಡಿ ವಸೂಲಿ ನೆಪದಲ್ಲಿ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ದುಬಾರಿ ಬಡ್ಡಿ ವಿಧಿಸಿ ಜನರಿಂದ ಸುಲಿಗೆ ಮಾಡುತ್ತಿದ್ದ ಆರೋಪದ ಮೇಲೆ ಬೋರೇಗೌಡ ಎಂಬಾತನ ಮನೆಗೆ ಮಹಿಳೆಯರು ಮುತ್ತಿಗೆ ಹಾಕಿ, ಪ್ರತಿಭಟನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಮರಿಯಪ್ಪನಪಾಳ್ಯದಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಬೋರೇಗೌಡ, ದುಬಾರಿ ಬಡ್ಡಿ ವಿಧಿಸಿ ಜನರಿಂದ ಸುಲಿಗೆ ಮಾಡುತ್ತಿದ್ದ. ಅಸಲು ಕಟ್ಟಿದರೂ ಕೂಡ ವಾರದ ಬಡ್ಡಿ, ಚಕ್ರ ಬಡ್ಡಿ ಎಂದು ಮತ್ತಷ್ಟು ಸುಲಿಗೆ ಮಾಡುತ್ತಿದ್ದ. ಹಣ ನೀಡದಿದ್ದರೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ಕೊಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯರಿಗೆ ತೀರಾ ಕೆಟ್ಟದಾಗಿ ಬೈದು ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಬೋರೇಗೌಡನ ವಿರುದ್ಧ ಕೇಳಿ ಬಂದಿದೆ. ಈ ಹಿನ್ನಲೆ ನಿನ್ನೆ ತಡರಾತ್ರಿ ಆರೋಪಿ ಮನೆಗೆ ಮಹಿಳೆಯರು ಮುತ್ತಿಗೆ ಹಾಕಿದ್ದಾರೆ.
ಆರೋಪಿಯನ್ನು ಬಂಧಿಸಲು ಆಗ್ರಹಿಸಿ ಜನ ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆಯ ತೀವ್ರತೆ ಹೆಚ್ಚಾದ ಕಾರಣ ಆರೋಪಿ ಬೋರೇಗೌಡನನ್ನ ಪೊಲೀಸರು ಠಾಣೆಗೆ ಕರೆ ತಂದಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
ಓದಿ: ದೂರು ದಾಖಲಿಸುವಲ್ಲಿ ಲೋಪ : 12 ಮಂದಿ ವಿರುದ್ಧದ ಗ್ಯಾಂಬ್ಲಿಂಗ್ ಕೇಸ್ ರದ್ದುಪಡಿಸಿದ ಹೈಕೋರ್ಟ್