ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳ ನಿರೂಪಕರು ಮತ್ತು ಗಾಯಕರ ಅವಕಾಶ ವಿಚಾರದಲ್ಲಿ ಸರ್ಕಾರ ಅನುಸರಿಸುತ್ತಿರುವ ಧೋರಣೆಯನ್ನು ಖಂಡಿಸಿ ಮಹಿಳೆಯೊಬ್ಬರು ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಮುಂದೆ ಧರಣಿ ನಡೆಸಿದ್ದು, ಹೊಸಬರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.
ಬೊಮ್ಮಾಯಿ ಅವರ ಆರ್.ಟಿ. ನಗರ ನಿವಾಸದ ಮುಂದೆ ಧರಣಿ ಕುಳಿತ ಮಹಿಳೆ, ಸರ್ಕಾರಿ ಕಾರ್ಯಕ್ರಮಗಳ ನಿರೂಪಕರು ಹಾಗೂ ಗಾಯಕರ ಬದಲಾವಣೆಗೆ ಒತ್ತಾಯಿಸಿದರು. ಸರ್ಕಾರ ಹೊಸಬರಿಗೆ ಅವಕಾಶ ನೀಡಬೇಕು. ಆದರೆ ಕೇವಲ ಹಳೆ ನಿರೂಪಕರು ಹಾಗೂ ಗಾಯಕರಿಗೆ ಮಣೆ ಹಾಕುತ್ತಿದ್ದಾರೆ. ಹತ್ತಾರು ವರ್ಷಗಳಿಂದ ಅದೇ ಗಾಯಕರು ನಿರೂಪಕರು ಇದ್ದಾರೆ. ಹೊಸಬರಿಗೆ ಅವಕಾಶ ನೀಡಿ ಎಂದು ಒತ್ತಾಯಿಸಿ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದರು.
ಮಹಿಳೆ ಪ್ರತಿಭಟನೆಗೆ ಕುಳಿತಿದ್ದನ್ನು ಕಂಡ ಪೊಲೀಸರು ಧರಣಿ ನಿಲ್ಲಿಸುವಂತೆ ಮನವೊಲಿಸಿದರು. ಆದರೆ ಮಹಿಳೆ ಅಲ್ಲಿಂದ ಕದಲಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನ ಬಲವಂತವಾಗಿ ಅಲ್ಲಿಂದ ಕರೆದೊಯ್ಯಲಾಯಿತು.
ಓದಿ: ಕೇರಳ ಅಷ್ಟೇ ಅಲ್ಲ, ತಮಿಳುನಾಡಿನಿಂದ ಬರಲು ಬೇಕು ಕೊರೊನಾ ನೆಗೆಟಿವ್ ರಿಪೋರ್ಟ್