ಬೆಂಗಳೂರು : ರಾಷ್ಟ್ರದ ರೈತ ನಾಯಕ ರಾಜೇಶ್ ಟಿಕಾಯತ್ಗೆ ಮಸಿ ಬಳಿದ ಪ್ರಕರಣದಲ್ಲಿ ಮಹಿಳಾ ಸಂಘಟನೆಯೊಂದರ ಅಧ್ಯಕ್ಷೆ ಉಮಾದೇವಿಯನ್ನು ಹೈಗ್ರೌಂಡ್ ಪೊಲೀಸರು ಇಂದು ಬಂಧಿಸಿದ್ದಾರೆ. ಈ ಹಿಂದೆ ಆರೋಪಿಗಳಾದ ಭರತ್ ಶೆಟ್ಟಿ, ಪ್ರದೀಪ್ ಮತ್ತು ಶಿವಕುಮಾರ್ನ ವಿಚಾರಣೆಗೆ ಒಳಪಡಿಸಿದ್ದರು.
ಓದಿ: ಮೋದಿ ಡೌನ್ ಡೌನ್ ಎಂದ ಬಾಡಿಗೆ ಮಹಿಳಾ ಕಾರ್ಯಕರ್ತೆ ಎಡವಟ್ಟು.. ಭರತ್ ಶೆಟ್ಟಿ ನಗೆಪಾಟಲಿಗೀಡು..
ತನಿಖೆ ವೇಳೆ ಉಮಾದೇವಿ ಕೈವಾಡ ಕಂಡು ಬಂದಿದೆ. ಹಾಗಾಗಿ, ಪೊಲೀಸರು ಉಮಾದೇವಿಯನ್ನ ಬಂಧಿಸಿದ್ದಾರೆ. ಘಟನೆ ದಿನ ಉಮಾದೇವಿ ಮುಂದೆ ನಿಂತು ಕೃತ್ಯ ನಡೆಸಿದ್ದರು. ಅಲ್ಲದೆ ಉಮಾದೇವಿ ಮನೆ ಮೇಲೆ ಇಂದು ದಾಳಿ ನಡೆಸಿದಾಗ ಮಾರಾಕಾಸ್ತ್ರಗಳು ಕೂಡ ಪತ್ತೆಯಾಗಿವೆ. ಸದ್ಯ ಉಮಾದೇವಿಯನ್ನ ಪೊಲೀಸ್ ಕಸ್ಟಡಿಗೆ ಪಡೆದು ಘಟನೆಗೆ ಯಾರು ಕುಮ್ಮಕ್ಕು ನೀಡಿದ್ರು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.