ಬೆಂಗಳೂರು: ಕನ್ನಡ ಭಾಷೆಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
-
ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ.#Kannada
— CM of Karnataka (@CMofKarnataka) September 16, 2019 " class="align-text-top noRightClick twitterSection" data="
">ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ.#Kannada
— CM of Karnataka (@CMofKarnataka) September 16, 2019ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ.#Kannada
— CM of Karnataka (@CMofKarnataka) September 16, 2019
ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಈ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸುವ ವಿಷಯದಲ್ಲಿ ನಾವು ಬದ್ದವಾಗಿದ್ದೇವೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಹಿಂದಿ ಹೇರಿಕೆ ವಿರುದ್ಧ ತಮ್ಮದೇ ಪಕ್ಷದ ಹೈಕಮಾಂಡ್ಗೆ ಸೆಡ್ಡು ಹೊಡೆದಿದ್ದಾರೆ. ಈಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ರಾಷ್ಟ್ರೀಯ ಭಾಷೆಯಾಗಬೇಕು ಎಂದು ಪ್ರತಿಪಾದಿಸಿದ್ದು, ದೇಶಾದ್ಯಂತ ಭಾರಿ ಚರ್ಚೆಗೆ ಎಡೆ ಮಾಡಿಕೊಟ್ಟಿತ್ತು. ಬಿಜೆಪಿ ಆಡಳಿತವಿರುವ ರಾಜ್ಯ ಸರ್ಕಾರದಲ್ಲಿ ಈ ಕುರಿತು ಯಾವ ನಿಲುವು ತೆಗೆದುಕೊಳ್ಳಲಾಗುತ್ತದೆ ಎಂಬ ಕುರಿತು ಹಲವರಿಗೆ ಕುತೂಹಲವಿತ್ತು.