ETV Bharat / state

ನಿರ್ಮಾಣ ಹಂತದ ಕಟ್ಟಡದ 5ನೇ ಮಹಡಿಯಿಂದ ಬಿದ್ದು ಕಾರ್ಮಿಕ ದುರ್ಮರಣ - ಅಂಬೇಡ್ಕರ್ ಆಸ್ಪತ್ರೆ

ನಗರದ ಡಿ ಜೆ ಹಳ್ಳಿ ಠಾಣಾ ವ್ಯಾಪ್ತಿಯ ವಹಬ್ ಗಾರ್ಡನ್​ನಲ್ಲಿ ವಾಸವಾಗಿದ್ದರು. ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಜೆ ಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

worker-died-by-fell-down-from-5th-floor-of-under-construction-building
ನಿರ್ಮಾಣ ಹಂತದ ಕಟ್ಟಡದ 5ನೇ ಮಹಡಿಯಿಂದ ಬಿದ್ದು ಕಾರ್ಮಿಕ ದುರ್ಮರಣ
author img

By

Published : Sep 10, 2021, 7:28 PM IST

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಕಾಮಗಾರಿ ನಡೆಸುವ ವೇಳೆ 5ನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತಪಟ್ಟಿದ್ದಾನೆ. ಜೆ ಸಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಕಟ್ಟಡ ನಿರ್ಮಾಣ ಕಾರ್ಯ ವೇಳೆ ಲಿಫ್ಟ್ ಕ್ರೇನ್ ಚಲಾವಣೆ ಮಾಡುತ್ತಿದ್ದ ಕಾರ್ಮಿಕ 5ನೇ ಮಹಡಿಯಿಂದ ಬಿದ್ದು ಅಸುನೀಗಿದ್ದಾನೆ.

ದಿನಗೂಲಿ ಕಾರ್ಮಿಕ ವೆಂಕಟಸ್ವಾಮಿ (46) ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಬೋರ್ ಬ್ಯಾಂಕ್ ರೋಡ್ ಬಳಿ 10 ದಿನಗಳಿಂದ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದರು.

ನಗರದ ಡಿ ಜೆ ಹಳ್ಳಿ ಠಾಣಾ ವ್ಯಾಪ್ತಿಯ ವಹಬ್ ಗಾರ್ಡನ್​ನಲ್ಲಿ ವಾಸವಾಗಿದ್ದರು. ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಜೆ ಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ : ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.