ETV Bharat / state

ಬೆಂಗಳೂರು: ಬಹುಮಹಡಿ ಕಟ್ಟಡದಲ್ಲಿ ವಿದ್ಯುತ್​ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸಾವು - Death by electrocution

ಬೆಂಗಳೂರಿನಲ್ಲಿ ವಿದ್ಯುತ್​ ಅವಘಡ ಸಂಭವಿಸಿದೆ. ಬಹುಮಹಡಿ ಕಟ್ಟಡದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

workers died due to electrocution
ವಿದ್ಯುತ್​ ತಗುಲಿ ಸಾವು
author img

By

Published : Feb 5, 2023, 11:01 AM IST

ಬೆಂಗಳೂರು: ಕರೆಂಟ್ ಶಾಕ್ ತಗುಲಿ ಕಾರ್ಮಿಕರಿಬ್ಬರು ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ಬೆಂಗಳೂರಿನ ಕೋಣನಕುಂಟೆಯ ಬಹುಮಹಡಿ ಕಟ್ಟಡವೊಂದರಲ್ಲಿ ನಡೆದಿದೆ. ಅಸ್ಸಾಂ ಮೂಲದ ದಿಲೀಪ್ ಹಾಗೂ ತುಮಕೂರು ಜಿಲ್ಲೆಯ ಮಧುಗಿರಿಯ ರಘು ಮೃತಪಟ್ಟ ಕಾರ್ಮಿಕರು ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿ ರಾತ್ರಿ ವೇಳೆ ಎಸ್​ಟಿಪಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿದೆ. ಇದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಶಾರ್ಕ್​ ದಾಳಿಗೆ ಬಾಲಕಿ ಬಲಿ: 1960 ಬಳಿಕ ಇದೇ ಮೊದಲ ಪ್ರಕರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.