ETV Bharat / state

ನಮ್ಮ ಮನೆ, ಕಟ್ಟಡಗಳು ಸುಂದರವಾಗಿರಲು ಕಾರ್ಮಿಕರ ಪರಿಶ್ರಮ ಇದೆ : ಡಿಸಿಎಂ ಡಿ ಕೆ ಶಿವಕುಮಾರ್ - ಮಕ್ಕಳಿಗೆ ಕಲ್ಯಾಣ ನಿಧಿ

ಕಾರ್ಮಿಕ ಇಲಾಖೆ ಆಶ್ರಯದಲ್ಲಿ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ನಡೆಯಿತು.

DCM Sivakumar released the grant.
ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯವನ್ನು ಡಿಸಿಎಂ ಶಿವಕುಮಾರ್ ಬಿಡುಗಡೆ ಮಾಡಿದರು.
author img

By ETV Bharat Karnataka Team

Published : Nov 9, 2023, 5:43 PM IST

Updated : Nov 9, 2023, 10:47 PM IST

ಡಿಸಿಎಂ ಡಿ ಕೆ ಶಿವಕುಮಾರ್ ಕಾಯಕ್ರಮದಲ್ಲಿ ಮಾತನಾಡಿದರು.

ಬೆಂಗಳೂರು: ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರನ್ನು ಕೇವಲ ಕಾರ್ಮಿಕರು ಎನ್ನುವುದಕ್ಕೆ ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ. ನನ್ನ ಪ್ರಕಾರ ನೀವೆಲ್ಲರೂ ದೇಶದ ನಿರ್ಮಾತೃಗಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣ್ಣಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಇಂದು ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಮ್ಮ ಮನೆ, ಈ ಕಟ್ಟಡಗಳು ಇಷ್ಟು ಸುಂದರವಾಗಿ ಕಾಣಲು ನೂರಾರು ಕಾರ್ಮಿಕರ ಪರಿಶ್ರಮ ಇರುತ್ತದೆ. ಈ ದೇಶ ಎಷ್ಟೇ ಬೆಳೆದರೂ ನಿಮ್ಮ ಶ್ರಮ ಹಾಗೂ ಬೆವರಿಗೆ ನಾವು ಬೆಲೆ ಕಟ್ಟಲು ಆಗುವುದಿಲ್ಲ. ಮಹಾತ್ಮ ಗಾಂಧೀಜಿ ಅವರು ಒಂದು ಮಾತು ಹೇಳಿದ್ದಾರೆ. “I learned the value of hard work by working hard.” ಎಂದು. ಅಂದರೆ, “ಕಷ್ಟಪಟ್ಟು ದುಡಿಯುವುದರ ಮೂಲಕ ದುಡಿಮೆಯ ಮೌಲ್ಯ ಅರಿತೆ” ಎಂದರ್ಥ. ಹೀಗಾಗಿ ನಿಮ್ಮನ್ನು ಗೌರವದಿಂದ ಕಾಣಬೇಕು ಎಂದರು.

ಈ ಪ್ರಜಾಪ್ರಭುತ್ವ ದೇಶದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಪತ್ರಿಕಾರಂಗ ನಾಲ್ಕು ಆಧಾರ ಸ್ತಂಭಗಳು. ಅದೇ ರೀತಿ ಒಂದು ಸಮಾಜ ಸುಭದ್ರವಾಗಿ ಇರಬೇಕಾದರೆ ಕೃಷಿಕ, ಸೈನಿಕ, ಶಿಕ್ಷಕ, ಕಾರ್ಮಿಕ ಬಹಳ ಮುಖ್ಯ. ನಿಮ್ಮನ್ನು ರಕ್ಷಣೆ ಮಾಡಲು ನರಸಿಂಹರಾವ್ ಅವರ ಕಾಲದಲ್ಲಿ ಕಾರ್ಮಿಕ ಕಾನೂನು ತರಲಾಯಿತು. ರಾಷ್ಟ್ರಮಟ್ಟ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕರ ರಕ್ಷಣೆಗೆ ಕಾನೂನುಗಳನ್ನು ರೂಪಿಸಲಾಗಿದೆ. ನೀವು ಬಲಿಷ್ಠವಾಗಿದ್ದರೆ ಮಾನಸಿಕವಾಗಿ ಗಟ್ಟಿಯಾಗಿದ್ದರೆ ಈ ದೇಶ ಕೂಡ ಪ್ರತಿ ಹಂತದಲ್ಲಿ ಬಲಿಷ್ಠವಾಗಲಿದೆ ಎಂದು ತಿಳಿಸಿದರು.

ನಿಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಕಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಸಚಿವರು ವಿವರಿಸಿದ್ದಾರೆ. ನೀವು ನಿಮ್ಮ ಸಲಹೆಗಳನ್ನು ಸಚಿವರುಗಳಿಗೆ ನೀಡಿ. ನಿಮ್ಮ ಸಲಹೆ ಸ್ವೀಕಾರ ಮಾಡಿ ಅದಕ್ಕೆ ತಕ್ಕಂತೆ ಕಾರ್ಯಕ್ರಮ ರೂಪಿಸಲಾಗುವುದು. ನಿಮ್ಮ ಮಕ್ಕಳು ದೇಶದ ಆಸ್ತಿ. ಅವರ ಭವಿಷ್ಯ ದೇಶದ ಆಸ್ತಿ. ಅಧಿಕಾರವಂತರು, ಶ್ರೀಮಂತರ ಮಕ್ಕಳು ದೊಡ್ಡವರಾಗುವುದಕ್ಕಿಂತ ನಿಮ್ಮ ಮಕ್ಕಳು ದೊಡ್ಡವರಾಗಿ ಬೆಳೆಯಬೇಕು. ಆಗ ಸಮಾಜ ಬೆಳೆಯುತ್ತದೆ ಎಂದು ನಮ್ಮ ಸರ್ಕಾರ ನಂಬಿಕೆ ಇಟ್ಟುಕೊಂಡಿದೆ ಎಂದರು.

ಸಚಿವ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಈ ಕಾರ್ಮಿಕ ಇಲಾಖೆ ಸಮರ್ಥವಾಗಿ ಸಾಗಲಿದೆ. ನಾವು ಕೂಡ ಈ ಇಲಾಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಹೇಳಿದರು.

9,60,000 ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಬಿಡುಗಡೆ; ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಜಾತಿ-ಧರ್ಮದ ಹೆಸರಿನಲ್ಲಿ ಸಮಾಜ ಒಡೆಯವವರ ವಿರುದ್ಧ ಸಮಾಜ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು. ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ ಆಗಿದೆ ಎಂದು ಹೇಳಿದರು.

ಇದನ್ನೂಓದಿ:ಆಡಳಿತ ವೈಫಲ್ಯ ಖಂಡಿಸಿ ಸರ್ಕಾರದ ವಿರುದ್ಧ 3 ದಿನ ಧರಣಿ: ಬಿ ಎಸ್​ ಯಡಿಯೂರಪ್ಪ

Last Updated : Nov 9, 2023, 10:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.