ಬೆಂಗಳೂರು: ಮುಂಬೈನಲ್ಲಿ ನಡೆಯುತ್ತಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ಅಧಿವೇಶನ ಹಾಗೂ ವಿಶ್ವ ಬಂಟರ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂಬೈಗೆ ತೆರಳಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ಪ್ರಯಾಣ ಬೆಳೆಸಿರುವ ಸಿಎಂ, ಸಂಜೆ 7 ಗಂಟೆಗೆ ಮುಂಬೈ ತಲುಪಲಿದ್ದಾರೆ. ಸಂಜೆ 7.30ಕ್ಕೆ ಹುರ್ಬದಲ್ಲಿರುವ ಬಂಟರ ಭವನದಲ್ಲಿ ನಡೆಯಲಿರುವ ಬಂಟರ ಸಮ್ಮಿಲನ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮ ಮುಗಿದ ನಂತರ ಇಂದು ರಾತ್ರಿ ಮುಂಬೈನಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ ಬಸವರಾಜ ಬೊಮ್ಮಾಯಿ, ಸೋಮವಾರ ಬೆಳಗ್ಗೆ 8 ಗಂಟೆಗೆ ಮುಂಬೈನಿಂದ ಹೊರಟು 9.45ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. 10.30ರಿಂದ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪಗಳು ನಡೆಯಲಿದ್ದು, ಕಲಾಪದಲ್ಲಿ ಸಿಎಂ ಭಾಗವಹಿಸಲಿದ್ದಾರೆ.
(ಇದನ್ನೂ ಓದಿ: ಹೈದರಾಬಾದ್ನಲ್ಲಿ ವೆಲ್ ಕಮ್ ಟು 40 ಪರ್ಸೆಂಟ್ ಸಿಎಂ ಬ್ಯಾನರ್ ಅಳವಡಿಕೆ ವ್ಯವಸ್ಥಿತ ಷಡ್ಯಂತ್ರ: ಸಿಎಂ ಬೊಮ್ಮಾಯಿ)