ಬೆಂಗಳೂರು: ದಾವೋಸ್ನಲ್ಲಿ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೇ 22ರಂದು ದುಬೈ ಮಾರ್ಗವಾಗಿ ಪ್ರಯಾಣ ಬೆಳೆಸಲಿದ್ದು, ಮೂರು ದಿನಗಳ ಆರ್ಥಿಕ ಶೃಂಗದಲ್ಲಿ ಭಾಗಿಯಾಗಲಿದ್ದಾರೆ.
ಭಾನುವಾರ ಬೆಳಗ್ಗೆ 10.35ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲಿರುವ ಸಿಎಂ, ಮಧ್ಯಾಹ್ನ 3.35ಕ್ಕೆ ದುಬೈನಿಂದ ಜೂರಿಕ್ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವರು. ಅಲ್ಲಿಂದ ರಾತ್ರಿ 9 ಗಂಟೆಗೆ ರಸ್ತೆ ಮಾರ್ಗವಾಗಿ ದಾವೋಸ್ಗೆ ತೆರಳಲಿದ್ದಾರೆ.
ರಾತ್ರಿ ದಾವೋಸ್ನಲ್ಲಿ ವಾಸ್ತವ್ಯ ಹೂಡಲಿದ್ದು, ಮೇ 23, 24 ಮತ್ತು 25ರಂದು ವಿಶ್ವ ಆರ್ಥಿಕ ಶೃಂಗದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಕ್ಕೆ ಹೂಡಿಕೆದಾರರ ಆಕರ್ಷಿಸಲು ಈ ಶೃಂಗ ಮಹತ್ವದ್ದಾಗಿದೆ. ಮೇ 26ರಂದು ರಸ್ತೆ ಮಾರ್ಗವಾಗಿ ದಾವೋಸ್ನಿಂದ ಜೂರಿಕ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ದುಬೈ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಇದನ್ನೂ ಓದಿ: ಮಳೆಗೆ ತತ್ತರಿಸಿದ ಬೆಂಗಳೂರು: ಜಿಲ್ಲಾ ಉಸ್ತುವಾರಿ ಬದಲಾಗುತ್ತಾ, ಸಿಎಂ ಪ್ಲಾನ್ ಏನು?