ETV Bharat / state

ರಾಜ್ಯದಲ್ಲಿ ಅಲಂಕಾರಿಕ ಮೀನು ಉತ್ಪಾದನೆ, ಮಾರಾಟ ಚಟುವಟಿಕೆ ಪ್ರವರ್ಧಮಾನಕ್ಕೆ: ಸಿಎಂ

ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್​​ನಲ್ಲಿ ಇಂದು ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೀನುಗಾರಿಕೆ ಕ್ಷೇತ್ರದ ಉತ್ತೇಜನಕ್ಕೆ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​​.ಯಡಿಯೂರಪ್ಪ ಹೇಳಿದರು.

World Fisheries Day
ವಿಶ್ವ ಮೀನುಗಾರಿಕೆ ದಿನಾಚರಣೆ ಸಮಾರಂಭ
author img

By

Published : Nov 21, 2020, 4:02 PM IST

ಬೆಂಗಳೂರು: ರಾಜ್ಯದಲ್ಲಿ ಅಲಂಕಾರಿಕ ಮೀನು ಉತ್ಪಾದನೆ ಹಾಗೂ ಮಾರಾಟ ಚಟುವಟಿಕೆ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬರುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಇಂದು ಆಯೋಜಿಸಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮೀನುಗಾರಿಕೆ ಕ್ಷೇತ್ರದಲ್ಲಿ ವ್ಯಾವಹಾರಿಕ ಶಿಸ್ತು ಹಾಗೂ ರಫ್ತು ವಹಿವಾಟು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರು ಸಮೀಪದ ಹೆಸರುಘಟ್ಟ ಮೀನು ಮರಿ ಉತ್ಪಾದನಾ ಕೇಂದ್ರದಲ್ಲಿ ಒಂದು ಮಾದರಿ, ಸುಸಜ್ಜಿತ ಕ್ವಾರಂಟೈನ್ ಘಟಕವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಶ್ರಮಜೀವಿಗಳಾದ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಉತ್ತಮಪಡಿಸಲು ಮೀನುಗಾರರಿಗಾಗಿ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನೂ ಸಹ ನಮ್ಮ ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮೀನುಗಾರರ ಸುಮಾರು 60.00 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದರು.

ವಿಶ್ವ ಮೀನುಗಾರಿಕೆ ದಿನಾಚರಣೆ ಸಮಾರಂಭ

ಕರ್ನಾಟಕ ರಾಜ್ಯವು 320 ಕಿ.ಮೀ. ಉದ್ದದ ಕರಾವಳಿ ತೀರ ಹಾಗೂ 8 ಸಾವಿರ ಹೆಕ್ಟೇರ್​​​ಗಳಿಗೂ ಹೆಚ್ಚಿನ ಹಿನ್ನೀರು ಪ್ರದೇಶದೊಂದಿಗೆ ದೇಶದ ಮೀನುಗಾರಿಕಾ ವಲಯಕ್ಕೆ ಗಣನೀಯ ಕೊಡುಗೆ ನೀಡುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆಯ ಮೂಲಕ ಮೀನುಗಾರರ ಸುರಕ್ಷತೆ ಹಾಗೂ ಮೀನುಗಾರಿಕೆಯಲ್ಲಿ ಆದಾಯ ಹೆಚ್ಚಳ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. 2020-21ನೇ ಸಾಲಿನ ಆಯವ್ಯಯದಲ್ಲಿ ಮೀನುಗಾರಿಕೆ ಅಭಿವೃದ್ಧಿಗೆ 251.57 ಕೋಟಿ ರೂ.ಗಳನ್ನು ಒದಗಿಸಿ, ಈ ಪೈಕಿ ಕೇಂದ್ರ ಪುರಸ್ಕೃತ ಯೋಜನೆಗಾಗಿ ಒಟ್ಟು 200 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಕರಾವಳಿ ಯಾಂತ್ರೀಕೃತ ಮೀನುಗಾರಿಕೆ ಪ್ರೋತ್ಸಾಹಕ್ಕಾಗಿ ಪ್ರತಿ ವರ್ಷವೂ ಸಹ ಸುಮಾರು 135.00 ಕೋಟಿ ರೂ.ಗಳನ್ನು ಮೀನುಗಾರಿಕೆ ದೋಣಿಗಳು ಬಳಸುವ ಡೀಸೆಲ್‍ಗಾಗಿ ಸಹಾಯಧನವನ್ನಾಗಿ ನೀಡಲಾಗುತ್ತಿದೆ. ಪ್ರಧಾನಮಂತ್ರಿಗಳು ಘೋಷಿಸಿರುವ ಮತ್ಸ್ಯ ಸಂಪದ ಯೋಜನೆಯಡಿ ಪ್ರಸ್ತುತ ರಾಜ್ಯಕ್ಕೆ 137.199 ಕೋಟಿ ರೂ.ಗಳ ಕ್ರಿಯಾ ಯೋಜನೆ ಅನುಮೋದನೆಯಾಗಿದೆ. ಕೇಂದ್ರದ ಪಾಲಿನ ಮೊದಲನೇ ಕಂತಿನ ಅನುದಾನ ರೂ. 21.02 ಕೋಟಿ ಬಿಡುಗಡೆಯಾಗಿದೆ. ರಾಜ್ಯದ 23 ಜಿಲ್ಲೆಗಳ ಕ್ರಿಯಾ ಯೋಜನೆಗಳು ಈಗ ಅನುಷ್ಠಾನದ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.

ಈ ದಿನ ಮೀನುಗಾರಿಕಾ ಕ್ಷೇತ್ರದ ಇತ್ತೀಚಿನ ತಂತ್ರಜ್ಞಾನಗಳನ್ನು ಕ್ಷೇತ್ರದ ಪಾಲುದಾರರಿಗೆ ಹಾಗೂ ಅಧಿಕಾರಿಗಳಿಗೆ ತಿಳಿಸಿಕೊಡುವುದರ ಜೊತೆಗೆ ಮೀನುಗಾರಿಕೆ ಕ್ಷೇತ್ರದ ಔದ್ಯಮಿಕ ಅವಕಾಶಗಳನ್ನು ಸಹ ಪರಿಚಯಿಸಿಕೊಡಲು ಈ ಕಾರ್ಯಾಗಾರವನ್ನು ಆಯೋಜಿಸುತ್ತಿರುವುದು ನನಗೆ ಸಂತಸವನ್ನುಂಟು ಮಾಡಿದೆ. ವಿಶ್ವ ಮೀನುಗಾರಿಕೆ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ಮತ್ಸ್ಯ ಸಂಪದ ಯೋಜನೆಯ ಅನುಷ್ಠಾನ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿರುವುದು ಈ ದಿನಾಚರಣೆಯನ್ನು ಮತ್ತಷ್ಟು ಅರ್ಥಪೂರ್ಣವಾಗಿಸಿದೆ ಎಂದು ಹೇಳಿದರು.

ಆನ್​​ಲೈನ್​​ನಲ್ಲಿ ತಾಜಾ ಮೀನು ಮಾರಾಟ ಎಂದ ಕೋಟಾ ಶ್ರೀನಿವಾಸ್ ಪೂಜಾರಿ:

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮೀನುಗಾರಿಕೆ ಮತ್ತು ಬಂದರು, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಇಂದಿನಿಂದ ಬೆಂಗಳೂರಿನಲ್ಲಿ ಆನ್​​ಲೈನ್ ಮೂಲಕ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ ಮನೆ ಬಾಗಿಲಿಗೆ ತಾಜಾ ಮೀನು ತಲುಪಿಸುವ ಕಾರ್ಯ ಆಗಲಿದೆ ಎಂದರು.

ಇನ್ನು ಮೀನಿನ ಚಿಪ್ಸ್​​ ಸೇರಿದಂತೆ ವಿವಿಧ ಮೀನು ಖಾದ್ಯಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆ ರೈಲ್ವೆ ಇಲಾಖೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಎಂಬ ಮಹತ್ವಕಾಂಕ್ಷೆ ಕಾರ್ಯಕ್ರಮವನ್ನು 20,050 ಕೋಟಿ ರೂ. ಹೂಡಿಕೆಯಲ್ಲಿ ರೂಪಿಸಿದ್ದು, ಇದರಡಿ ವಿವಿಧ ಘಟಕಗಳನ್ನು ಆಯೋಜಿಸಿದೆ. ಈ ಯೋಜನೆಯಡಿ ಮುಂದಿನ ಐದು ವರ್ಷಗಳಿಗೆ ರಾಜ್ಯದಿಂದ ಅಂದಾಜು 4,115 ಕೋಟಿ ರೂ.ಗಳ ಕ್ರಿಯಾ ಯೋಜನೆ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ ಎಂದರು.

ಈ ಕಾರ್ಯಕ್ರಮಕ್ಕೆ 2020-21ನೇ ಸಾಲಿಗೆ ರಾಜ್ಯಕ್ಕೆ 137.2 ಕೋಟಿ ರೂ. ಯೋಜನಾ ವೆಚ್ಚಕ್ಕೆ ಕೇಂದ್ರ ಸರ್ಕಾರ ಪ್ರಸ್ತುತ ಮಂಜೂರಾತಿ ನೀಡಿದೆ. ಈ ಯೋಜನೆಯಡಿ ಕರಾವಳಿ ಹಾಗೂ ಒಳನಾಡು ಮೀನುಗಾರಿಕಾ ಕ್ಷೇತ್ರಗಳಲ್ಲಿ ಇತ್ತೀಚಿನ ತಂತ್ರಜ್ಞಾನಗಳಾದ ಆರ್​​​ಎಎಸ್, ಬಯೋಫ್ಲಾಕ್, ಅಕ್ವಾಫೋನಿಕ್ಸ್, ಕೇಜ್ ಕಲ್ಚರ್ ಮತ್ತಿತರ ಘಟಕಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಿದೆ ಎಂದು ಹೇಳಿದರು.

ಪ್ರಾರ್ಥನೆ ಮಾಡಿದ ಗಾಯಕಿಯನ್ನು ಸನ್ಮಾನಿಸಿದ ಸಿಎಂ:

ಕಾರ್ಯಕ್ರಮ ಆರಂಭವಾಗುತ್ತಿದ್ದಂತೆಯೇ ಪುಷ್ಪಾ ಅವರು ತಮ್ಮ ಸುಮಧುರ ಕಂಠದಿಂದ ಹಾಡಿದ ಪ್ರಾರ್ಥನೆಯನ್ನು ತದೇಕಚಿತ್ತದಿಂದ ಆಲಿಸಿದ ಸಿಎಂ, ಗಾಯಕಿ ಪುಷ್ಪಾ ಅವರನ್ನು ಹೆಸರಿಡಿದು ಕರೆದು ವೇದಿಕೆ ಮೇಲೆ ಶಾಲು ಹೊದಿಸಿ, ಹೂ ಗುಚ್ಛ ನೀಡಿ ಸನ್ಮಾನಿಸಿದರು.

ಇತ್ತೀಚೆಗೆ ಇದೇ ಬ್ಯಾಂಕ್ವಟ್ ಹಾಲ್​ನಲ್ಲಿ ಕ್ರೀಡಾಪಟುಗಳಿಗೆ ಏಕಲವ್ಯ ಮತ್ತಿತರ ಪ್ರಶಸ್ತಿ ನೀಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲೂ ಸಹ ಮಹಿಳಾ ಕ್ರೀಡಾಪಟುವೊಬ್ಬರು ಕೈಗೆ ಹಾಕಿದ ಬಳೆ ನೋಡಿ, ಇದು ಚಿನ್ನದ ಬಳೆಯೇ, ತುಂಬಾ ಚೆನ್ನಾಗಿದೆ ಎಂದು ಸಿಎಂ ವರ್ಣಿಸಿದ್ದರು.

ಇದೇ ಸಂದರ್ಭದಲ್ಲಿ ಸಿಎಂ, ಮತ್ಸ್ಯ ಸಿರಿ ಸಾಗರೋತ್ಪನ್ನ ಖಾದ್ಯ ಬಿಡುಗಡೆ ಮಾಡಿದರು. ಸುವರ್ಣ ತ್ರಿಭುಜ ಮೀನುಗಾರಿಕೆ ದೋಣಿ ಅವಘಡದಲ್ಲಿ ನಾಪತ್ತೆಯಾಗಿರುವ ಏಳು ಮೀನುಗಾರರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ವಿತರಣೆ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.