ETV Bharat / state

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ: ಪಾಲಿಕೆಯಿಂದ ರಸ್ತೆ ಗುಂಡಿ ಮುಚ್ಚುವ ಪ್ರಕ್ರಿಯೆ ಚುರುಕು - Etv Bharat Kannada

ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿರುವ ಹಿನ್ನೆಲೆ ನಗರದಲ್ಲಿನ ರಸ್ತೆ ಗುಂಡಿಗಳ ಮುಚ್ಚುವ ಕಾರ್ಯವನ್ನು ಬಿಬಿಎಂಪಿ ಚುರುಕುಗೊಳಿಸಿದೆ.

KN_BNG_0
ಪಾಲಿಕೆಯಿಂದ ರಸ್ತೆ ಗುಂಡಿ ಮುಚ್ಚುವ ಪ್ರಕ್ರಿಯೆ
author img

By

Published : Oct 29, 2022, 9:11 PM IST

ಬೆಂಗಳೂರು: ನವಂಬರ್ 2 ರಿಂದ ಎರಡು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಭರದಿಂದ ಸಾಗುತ್ತಿದೆ. ರಸ್ತೆ ಗುಂಡಿ ಪತ್ತೆ ಸಂಖ್ಯೆ ಸುಮಾರು 25 ಸಾವಿರಕ್ಕೆ ಏರಿಕೆಯಾಗಿರುವ ನಡುವೆ ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ರಸ್ತೆ ಗುಂಡಿಗಳನ್ನು ಮುಚ್ಚುವ ಪ್ರಕ್ರಿಯೆಯನ್ನು ಬಿಬಿಎಂಪಿ ಚುರುಕುಗೊಳಿಸಿದೆ.

ಬಿಬಿಎಂಪಿ ಪೂರ್ವ ವಲಯದಲ್ಲಿ ಅತಿ ಹೆಚ್ಚು ರಸ್ತೆ ಗುಂಡಿಗಳು ಪತ್ತೆಯಾಗಿವೆ. ಉಳಿದಂತೆ ಪಶ್ಚಿಮ, ದಕ್ಷಿಣ ಹಾಗೂ ಆರ್‌ಆರ್‌ನಗರ ವಲಯದಲ್ಲಿ 3 ಸಾವಿರಕ್ಕೂ ಅಧಿಕ ರಸ್ತೆ ಗುಂಡಿಗಳು ಪತ್ತೆಯಾಗಿವೆ. ಉಳಿದಂತೆ ದಾಸರಹಳ್ಳಿಯಲ್ಲಿ 2 ಸಾವಿರದಷ್ಟುಗುಂಡಿ ಪತ್ತೆಯಾದರೂ ಕೇವಲ 600 ರಸ್ತೆ ಗುಂಡಿ ಮುಚ್ಚಲಾಗಿದೆ. ದೇಶ ಹಾಗೂ ವಿದೇಶಗಳ ವಿವಿಧ ಕಡೆಗಳಿಂದ ಹೂಡಿಕೆದಾರರು ಬರುತ್ತಿರುವ ಹಿನ್ನೆಲೆಯಲ್ಲಿ ನಗರದ ಸ್ವಚ್ಛತೆ ಹಾಗೂ ಸೌಂದರ್ಯೀಕರಣಕ್ಕೆ ಹೆಚ್ಚಿನ ಒತ್ತು ನೀಡುವಂತೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ವಿವಿಧ ಕಾಮಗಾರಿ ನಡೆಯುತ್ತಿದೆ.

ರಸ್ತೆಗಳ ಡಾಂಬರೀಕರಣ, ರಸ್ತೆ ಗುಂಡಿಗಳನ್ನು ಮುಚ್ಚುವುದು, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ತ್ಯಾಜ್ಯ, ಕಟ್ಟಡ ಭಗ್ನಾವಶೇಷಗಳ ತೆರವು, ರಸ್ತೆ ಬದಿಯಿರುವ ಮರಗಳ ಕೊಂಬೆಗಳ ಕಟಾವು, ಫ್ಲೆಕ್ಸ್‌ ತೆರವು, ಬೀದಿ ದೀಪಗಳನ್ನು ಸರಿಪಡಿಸುವುದು, ಮುಖ್ಯ ಹಾಗೂ ಉಪಮುಖ್ಯ ರಸ್ತೆಗಳಲ್ಲಿ ವಿಭಜಕಗಳ ಅಭಿವೃದ್ಧಿ ಹಾಗೂ ಸುಂದರ ಸಸಿಗಳನ್ನು ನೆಡಲಾಗುತ್ತಿದೆ.

7,645 ಸಾವಿರ ರಸ್ತೆ ಗುಂಡಿ ಮುಚ್ಚುವುದು ಬಾಕಿ: ಮೇ 1ರಿಂದ ಈವರೆಗೆ ನಗರದಲ್ಲಿ 24,967 ರಸ್ತೆ ಗುಂಡಿ ಗುರುತಿಸಲಾಗಿದೆ. ಈ ಪೈಕಿ 17,322 ಸಾವಿರಕ್ಕೂ ಅಧಿಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ಇನ್ನೂ 7,645 ಸಾವಿರಕ್ಕೂ ಅಧಿಕ ರಸ್ತೆ ಗುಂಡಿಗಳನ್ನು ಮುಚ್ಚುವುದು ಬಾಕಿ ಇದೆ ಎಂದು ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ರಸ್ತೆ ಗುಂಡಿ ಮುಚ್ಚುವ ವಿಚಾರ: ಆದೇಶ ಪಾಲನೆಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲ ಎಂದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.