ETV Bharat / state

ವಿಶ್ವ ಮಹಿಳಾ ದಿನಾಚರಣೆ ವಿಶೇಷ: ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣ.. ಮಯೂರ ಹೊಟೇಲ್​ಗಳಲ್ಲಿ ಶೇ 50 ರಿಯಾಯಿತಿ - ಮಹಿಳಾ ದಿನಾಚರಣೆ

ವಿಶ್ವದೆಲ್ಲೆಡೆ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿಶೇಷವಾಗಿ ಉಚಿತ ಕೊಡುಗೆಗಳನ್ನು ಸರ್ಕಾರ ನೀಡುತ್ತಿದೆ.

World Womens Day: Free Travel on BMTC Buses
ವಿಶ್ವ ಮಹಿಳಾ ದಿನಾಚರಣೆ ವಿಶೇಷ: ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣ
author img

By

Published : Mar 4, 2023, 5:34 PM IST

ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆ ಮಾರ್ಚ್ 8 ರಂದು ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರು ಒಂದು ದಿನದ ಮಟ್ಟಿಗೆ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಸಾರಿಗೆ ಸಂಸ್ಥೆ ಅವಕಾಶ ಕಲ್ಪಿಸಲಿದೆ. ಉಚಿತ ಪ್ರಯಾಣದ ಕುರಿತು ಈಗಾಗಲೇ ರಾಜ್ಯ ಸರ್ಕಾರಕ್ಕೆ ಬಿಎಂಟಿಸಿ ಸಾರಿಗೆ ಸಂಸ್ಥೆ ಪ್ರಸ್ತಾವನೆ ಸಲ್ಲಿಸಿದ್ದು, ಅಧಿಕೃತ ಆದೇಶ ಹೊರ ಬೀಳಬೇಕಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ 40 ಲಕ್ಷಕ್ಕೂ ಹೆಚ್ಚು ಮಹಿಳೆಯರಿದ್ದು, ಅದರಲ್ಲಿ ಪ್ರತಿದಿನ 10 ಲಕ್ಷಕ್ಕೂ ಹೆಚ್ಚು ಮಂದಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುವವರಿದ್ದಾರೆ ಎಂದು ಅಂದಾಜಿಸಲಾಗಿದೆ. ಮಾರ್ಚ್ 8 ರಂದು ಮಹಿಳಾ ದಿನವಾದ್ದರಿಂದ ಉಚಿತ ಬಸ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ಮುಂದಿನ ದಿನಗಳಲ್ಲಿ ಬಿಎಂಟಿಸಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾರಿಗೆ ಸಂಸ್ಥೆಗೆ ಅನುಕೂಲ: ಈ ಕ್ರಮದಿಂದ ಮಹಿಳೆಯರು ಇನ್ನಷ್ಟು ಸಂಖ್ಯೆಯಲ್ಲಿ ಬಸ್‌ನಲ್ಲಿ ಸಂಚರಿಸಲು ಅನುಕೂಲವಾಗಲಿದೆ ಎಂದು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸತ್ಯವತಿ ಹೇಳಿದ್ದಾರೆ.

8.17 ಕೋಟಿ ಖರ್ಚು: ಸಿಲಿಕಾನ್ ಸಿಟಿಯಲ್ಲಿ 40,86,580 ಮಹಿಳೆಯರಿದ್ದು, ಅದರಲ್ಲಿ ನಿತ್ಯ 10,21,645 ಮಂದಿ ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುತ್ತಾರೆ ಎಂದು ಅಂದಾಜಿಸಲಾಗಿದೆ. ಮಹಿಳಾ ದಿನವಾದ ಮಾರ್ಚ್ 8 ರಂದು ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರೆ ಅಂದಾಜು 20.44 ಲಕ್ಷ ಮಹಿಳೆಯರು ಪ್ರಯಾಣಿಸುವ ಸಾಧ್ಯತೆ ಇದೆ. ಇದರಿಂದ ಬಿಎಂಟಿಸಿಗೆ ಸುಮಾರು 8.17 ಕೋಟಿ ಖರ್ಚಾಗುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.

ಮಯೂರ ಹೊಟೇಲ್​ಗಳಲ್ಲಿ ಮಹಿಳೆಯರಿಗೆ ಶೇ 50 ರಿಯಾಯಿತಿ ಕೊಡುಗೆ: ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಯಮಕ್ಕೆ ಸೇರಿದ ಹೋಟೆಲ್​ಗಳಲ್ಲಿ ಕೊಠಡಿ ಬುಕ್ಕಿಂಗ್ ಮೇಲೆ ಮಹಿಳೆಯರಿಗೆ 50 ಶೇ ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದೆ.

‌ಮಾರ್ಚ್ 8 ರಂದು ಆಚರಿಸಲಾಗುತ್ತಿರುವ 48ನೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಪ್ರವಾಸಿಗರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಾದ್ಯಂತ ನಿರ್ವಹಣೆ ಮಾಡುತ್ತಿರುವ ಮಯೂರ ಗ್ರೂಪ್ ಹೋಟೆಲ್​ಗಳಲ್ಲಿ ಈ ರಿಯಾಯಿತಿ ನೀಡಲಾಗಿದೆ. ಕೊಠಡಿ ಬುಕ್ಕಿಂಗ್ ಮೇಲೆ 50 ಶೇ ಹಾಗೂ ಊಟೋಪಹಾರದ ಮೇಲೆ 20 ಶೇ ರಿಯಾಯಿತಿಯ ವಿಶೇಷ ಕೊಡುಗೆ ನೀಡಲಾಗಿದೆ.

ಈ ವಿಶೇಷ ಕೊಡುಗೆ ಮಾ. 6 ರಿಂದ ಮಾ. 10 ರವರೆಗೆ ಅನ್ವಯಿಸಲಿದೆ. ನಿಗಮದ ಹೋಟೆಲ್​ಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸುವ ಒಬ್ಬ ಮಹಿಳೆ ಅಥವಾ ಕುಟುಂಬ ಅಥವಾ ಮಹಿಳೆಯರ ಗುಂಪು, ಪ್ರವಾಸ ಕೈಗೊಳ್ಳುವ ಮಹಿಳಾ ಪ್ರವಾಸಿಗರಿಗೆ 50 ಶೇ ರಿಯಾಯಿತಿ ಘೋಷಿಸಿದೆ. ಮಹಿಳಾ ಪ್ರವಾಸಿಗರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ನಿಗಮದ ಎಂಡಿ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಒಟ್ಟು 14 ಮಯೂರ ಹೋಟೆಲ್​ಗಳಿವೆ. ಈ ಎಲ್ಲ ಹೋಟೆಲ್​ಗಳಲ್ಲಿ ಮಹಿಳಾ ಪ್ರವಾಸಿಗರಿಗೆ ರಿಯಾಯಿತಿ ನೀಡಲಾಗುತ್ತದೆ.

ಇದನ್ನೂ ಓದಿ: ಮಹಿಳೆಯರಿಗಾಗಿ ರಾಮೋಜಿ ಫಿಲ್ಮ್ ಸಿಟಿಯಿಂದ ವಿಶೇಷ ಕೊಡುಗೆ: ಮಾಹಿತಿ ಇಲ್ಲಿದೆ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.