ETV Bharat / state

ಹಿಂದಿ ಹೇರಿಕೆ ಸಮರ್ಥಿಸಿ ಹೇಳಿಕೆ : ಸಾಹಿತಿ ದೊಡ್ಡರಂಗೇಗೌಡರಿಂದ ಕ್ಷಮೆಯಾಚನೆ - ಸಾಹಿತಿ ದೊಡ್ಡರಂಗೇಗೌಡ ಹೇಳಿಕೆ

'ನಾನೇನೂ ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ' ಎಂದು ಸಾಹಿತಿ ದೊಡ್ಡರಂಗೇಗೌಡ ತಿಳಿಸಿದ್ದಾರೆ.

writer-doddarange-gowda-apology-to-kannadigas
ದೊಡ್ಡರಂಗೇಗೌಡರು
author img

By

Published : Jan 28, 2021, 1:43 AM IST

ಬೆಂಗಳೂರು : ಹಿಂದಿ ಹೇರಿಕೆ ಸಮರ್ಥಿಸಿ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ನಾಡಿನ ಹಿರಿಯ ಸಾಹಿತಿ ಹಾಗೂ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದೊಡ್ಡರಂಗೇಗೌಡರು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ.

ಹಿಂದಿ ಭಾಷೆ ಬಗ್ಗೆ ತಿರಸ್ಕಾರ ಏಕೆ? 250 ವರ್ಷಗಳ ಗುಲಾಮಗಿರಿಯ ಸಂಕೇತವಾಗಿರುವ ಇಂಗ್ಲಿಷನ್ನು ಒಪ್ಪುತ್ತೀರಾದರೆ, ದೇಸಿ ಭಾಷೆ ಬಗ್ಗೆ ವಿರೋಧವೇಕೆ ಎನ್ನುವುದು ನನಗರ್ಥವಾಗದ ಸಂಗತಿ ಎಂದು ಸಾಹಿತಿ ದೊಡ್ಡರಂಗೇಗೌಡರು, ಮಾಧ್ಯಮವೊಂದರ ಸಂದರ್ಶನದಲ್ಲಿ ನೀಡಿದ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚನೆಗೆ ಒತ್ತಾಯಗಳೂ ಕೇಳಿಬಂದಿದ್ದವು.

ಇದನ್ನೂ ಓದಿ:86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ದೊಡ್ಡರಂಗೇಗೌಡ ಆಯ್ಕೆ

ಈ ಬಗ್ಗೆ ಸ್ಪಷ್ಟನೆ ನೀಡಿರುವ ದೊಡ್ಡರಂಗೇಗೌಡರು 'ನಾನೇನೂ ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ' ಎಂದು ತಿಳಿಸಿದ್ದಾರೆ.

writer-doddarange-gowda-apology-to-kannadigas
ಕ್ಷಮೆಯಾಚನೆ

ಅಷ್ಟೇ ಅಲ್ಲದೇ ಕನ್ನಡಿಗರ ಮೇಲೆ ಹಿಂದಿ ಭಾಷೆಯ ಹಾಗೂ ಇಂಗ್ಲಿಷ್ ಹೇರಿಕೆಯ ರೀತಿ ನೀತಿಯನ್ನು ನಾನು ಸಹಿಸುವುದಿಲ್ಲ ಎಂದೂ ನೇರವಾಗಿ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ನನ್ನ ಮಾತುಗಳು ಕನ್ನಡ ಜನರ ಮನಸ್ಸನ್ನು ನೋಯಿಸಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ ಎಂದು ದೊಡ್ಡರಂಗೇಗೌಡರು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.