ಬೆಂಗಳೂರು: ಹಿರಿಯ ಸಾಹಿತಿ, ಸಂಶೋಧಕ, ಕನ್ನಡಪರ ಅಗ್ರಗಣ್ಯ ಹೋರಾಟಗಾರ ಡಾ. ಎಂ. ಚಿದಾನಂದ ಮೂರ್ತಿ ಅವರು ಶನಿವಾರ ನಸುಕಿನ 4 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.
ನಾಡಿನ ಹಿರಿಯ ಸಾಹಿತಿ, ಹೋರಾಟಗಾರ, ಸಂಶೋಧಕ, ಇತಿಹಾಸಕಾರರಾಗಿದ್ದರು. ಕನ್ನಡ ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿಗಾಗಿ ದಶಕಗಳ ಕಾಲ ಹೋರಾಟ ಮಾಡಿಕೊಂಡು ಬಂದಿದ್ದರು. ವಯೋಸಹಜದಿಂದ ಶನಿವಾರ ನಸುಕಿನ ವೇಳೆ ಅಸ್ತಗಂತರಾಗಿದ್ದಾರೆ.
ಬೆಳಗ್ಗೆ 7 ಗಂಟೆಗೆ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಅವರ ನಿವಾಸಕ್ಕೆ ತರಲಾಗುವುದು. ನಂತರ ಸಾರ್ವಜನಿಕರ ದರ್ಶನ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.