ETV Bharat / state

ಖಾಲಿಯಿರುವ 454 ಪೊಲೀಸ್ ಬ್ಯಾಕ್ ಲಾಗ್ ಹುದ್ದೆಗಳಿಗೆ‌ ಡಿ. 10ರಂದು ಲಿಖಿತ ಪರೀಕ್ಷೆ - ಪರೀಕ್ಷಾ ಕೇಂದ್ರ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಪೊಲೀಸ್ ಬ್ಯಾಕ್​ ಲಾಗ್ ಹುದ್ದೆಗಳಿಗೆ ಡಿ. 10 ರಂದು ಲಿಖಿತ ಪರೀಕ್ಷೆ ನಿಗದಿಯಾಗಿದೆ.

ರಾಜ್ಯ ಪೊಲೀಸ್ ಇಲಾಖೆ
ರಾಜ್ಯ ಪೊಲೀಸ್ ಇಲಾಖೆ
author img

By ETV Bharat Karnataka Team

Published : Nov 27, 2023, 6:02 PM IST

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ, ತೃತೀಯ ಲಿಂಗಿಗಳು )ಹಾಗೂ ಸೇವಾನಿರತ ಹಾಗೂ ಬ್ಯಾಕ್‌ ಲಾಗ್ 454 ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ದಿನಾಂಕ‌‌ ನಿಗದಿಯಾಗಿದೆ. ಡಿಸೆಂಬರ್ 10ರ ಬೆಳಗ್ಗೆ 11ರಿಂದ 12.30ರ ವರೆಗೆ ಪರೀಕ್ಷೆ ನಡೆಯಲಿದೆ.

ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ ನಗರ, ಕಲಬುರಗಿ ಜಿಲ್ಲೆ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಆದ್ದರಿಂದ, ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ ಎಂದು ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

26,146 ಕಾನ್ಸ್​ಟೇಬಲ್‌ಗಳ ನೇಮಕಾತಿ : ಸಿಬ್ಬಂದಿ ನೇಮಕಾತಿ ಆಯೋಗದಿಂದ(ಎಸ್ಎಸ್‌ಸಿ) ಒಟ್ಟು 26,146 ಕಾನ್ಸ್​​ಟೇಬಲ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸೇನಾ ಇಲಾಖೆಯ ವಿವಿಧ ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ಬಿಎಸ್​ಎಫ್​ - 6,174

ಸಿಐಎಸ್​​ಎಫ್​ - 11,025

ಸಿಆರ್​ಪಿಎಫ್​​ - 3,337

ಎಸ್​ಎಸ್​ಬಿ - 635

ಐಟಿಬಿಪಿ - 3,189

ಅಸ್ಸೋಂ ರೈಫಲ್ಸ್​​ - 1,490

ಎಸ್​ಎಸ್​ಎಫ್​​ - 296

ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ : ಕನಿಷ್ಠ ವಯೋಮಿತಿ 18, ಗರಿಷ್ಠ 23 ವರ್ಷ. ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಮಹಿಳಾ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇತರೆ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್​ ಆಧಾರಿತ ಪರೀಕ್ಷೆ, ದೈಹಿಕ ಗುಣಮಟ್ಟ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ನವೆಂಬರ್​ 24 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್​ 31 ಕಡೆಯ ದಿನ. ಅರ್ಜಿ ಶುಲ್ಕ ಪಾವತಿಗೆ ಜನವರಿ 1 ಕಡೆಯ ದಿನವಾಗಿದೆ. ಈ ಹುದ್ದೆಗಳಿಗೆ ಫೆಬ್ರವರಿ/ಮಾರ್ಚ್​ನಲ್ಲಿ ಕಂಪ್ಯೂಟರ್​ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿಬ್ಬಂದಿ ನೇಮಕಾತಿ ಆಯೋಗದಿಂದ 26,146 ಕಾನ್ಸ್​ಟೆಬಲ್‌ಗಳ ನೇಮಕಾತಿ: ಆಸಕ್ತರಿಗೆ ಅವಕಾಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.