ಬೆಂಗಳೂರು : ಚಳಿಗಾಲದ ಅಧಿವೇಶನದ ಆರಂಭದ ದಿನದಂದೇ ಸಿಎಂ ಬಿ ಎಸ್ ಯಡಿಯೂರಪ್ಪ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಇಂದು ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, 11ಗಂಟೆಗೆ ವಿಧಾನಸಭೆ ಕಲಾಪದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ನಂತರ 11.45ಕ್ಕೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ತೆರಳಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, 2.15ಕ್ಕೆ ಹೊರಟು ಮಧ್ಯಾಹ್ನ 3.45 ಬೆಂಗಳೂರಿಗೆ ವಾಪಸಾಗಲಿದ್ದಾರೆ.
ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿ ನಿಯೋಗವನ್ನು ಭೇಟಿ ಮಾಡಲಿದ್ದು, ಸಂಜೆ 6ಗಂಟೆಗೆ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲಿದ್ದಾರೆ.