ETV Bharat / state

ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ: ಪರಸ್ಪರ ಸವಾಲೆಸೆದ ಸಿಎಂ ಬಿಎಸ್​ವೈ- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ!

ರಾಜ್ಯದಲ್ಲಿ ಮುಂದೆ ಎದುರಾಗಲಿರುವ ಮೂರು ವಿಧಾನಸಭೆ, ಒಂದು ಲೋಕಸಭೆ ಕ್ಷೇತ್ರದ ಉಪಚುನಾವಣೆಗಳಲ್ಲಿ ನಿಮ್ಮನ್ನು ಸೋಲಿಸಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುತ್ತೇವೆ. ಇದರಲ್ಲಿ ಯಾವ ಅನುಮಾನವೂ ಬೇಡ ಎಂದು ಕಲಾಪದ ವೇಳೆ ಯಡಿಯೂರಪ್ಪ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಸಹ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ ಅಂತಾ ಮರು ಸವಾಲು ಹಾಕಿದ್ದಾರೆ.

bengaluru
ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ
author img

By

Published : Feb 5, 2021, 2:28 PM IST

Updated : Feb 5, 2021, 3:13 PM IST

ಬೆಂಗಳೂರು: ಮುಂಬರುವ ಉಪಚುನಾವಣೆಗಳಲ್ಲಿ ನಿಮ್ಮನ್ನು ಸೋಲಿಸುತ್ತೇವೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 150 ಕ್ಕೂ ಹೆಚ್ಚು ಸ್ಥಾನ ಗಳಿಸಿ ನಿಮ್ಮನ್ನು (ಕಾಂಗ್ರೆಸ್) ಶಾಶ್ವತವಾಗಿ ವಿರೋಧ ಪಕ್ಷವಾಗಿ ಕೂರಿಸಲಾಗುವುದು ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಗುಡುಗಿದರೆ, ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ. ನಿಮ್ಮನ್ನು ಸೋಲಿಸಿ ತೋರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ ಘಟನೆ ವಿಧಾನಸಭೆಯಲ್ಲಿ ಇಂದು ನಡೆಯಿತು.

ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಒಂದು ಹಂತದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿಯ ಬಗ್ಗೆ ವ್ಯಂಗ್ಯವಾಡಿದಾಗ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಈ ಸವಾಲು ಹಾಕಿದರು.

ವಿಧಾನಸಭೆಯಲ್ಲಿ ವಾಗ್ವಾದ

ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಅಭಿವೃದ್ಧಿಯ ಕುರಿತು ಮಾತನಾಡುತ್ತಾರೆ ಎಂದು ನಿರೀಕ್ಷಿಸಿದ್ದೆ. ಆದರೆ ಅವರು ರಾಜಕೀಯವಾಗಿ ನಮ್ಮನ್ನು ದೂಷಿಸಿದ್ದಾರೆ ಎಂದು ಹೇಳಿದರು. ಕಳೆದ ಚುನಾವಣೆಯಲ್ಲಿ ಅತ್ಯಂತ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದು ಬಿಜೆಪಿ. ಆದರೆ, ಎಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೋ ಎಂದು ಹೆದರಿದ ಕಾಂಗ್ರೆಸ್ ಪಕ್ಷ, ಜೆಡಿಎಸ್ ಜತೆ ಕೈಜೋಡಿಸಿ ಮೈತ್ರಿ ಸರ್ಕಾರ ರಚಿಸಿತು. ಆದರೆ, ಕುಮಾರಸ್ವಾಮಿ ಅವರಿಗೆ ಕೆಲಸ ಮಾಡಲು ಬಿಡdE ಹಿಂಸೆ ನೀಡಿದ ಬಗ್ಗೆ ನಾನು ಹೇಳಬೇಕಿಲ್ಲ. ಸ್ವತಃ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ನನ್ನನ್ನು ಕಾಂಗ್ರೆಸ್ ಪಕ್ಷ ಕ್ಲರ್ಕ್ ರೀತಿ ನೋಡಿಕೊಂಡಿದೆ. ಹೀಗಾಗಿ ನಾನು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂದು ಹೆಚ್​ಡಿಕೆ ಹೇಳಿದ್ದರು ಎಂದರು.

ಇವತ್ತು ನಿಮ್ಮ ಪಕ್ಷದ ನಾಯಕತ್ವದ ಬಗ್ಗೆ ಜನರಿಗೆ ಅನುಮಾನ ಇದೆ. ನಿಮ್ಮ ಪರಿಸ್ಥಿತಿ ಹೇಗಿದೆ ಎಂದರೆ ಇವತ್ತೇ ನಿಮಗೆ ಸವಾಲು ಹಾಕುತ್ತೇನೆ. ರಾಜ್ಯದಲ್ಲಿ ಮುಂದೆ ಎದುರಾಗಲಿರುವ ಮೂರು ವಿಧಾನಸಭೆ, ಒಂದು ಲೋಕಸಭೆ ಕ್ಷೇತ್ರದ ಉಪಚುನಾವಣೆಗಳಲ್ಲಿ ನಿಮ್ಮನ್ನು ಸೋಲಿಸಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುತ್ತೇವೆ. ಇದರಲ್ಲಿ ಯಾವ ಅನುಮಾನವೂ ಬೇಡ ಎಂದರು.

ಇದರಿಂದ ಕೆರಳಿದ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ನಾನು ಅಧಿಕಾರದಲ್ಲಿದ್ದಾಗ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಟ್ಟು ಉಳಿದೆಲ್ಲ ಕಡೆ ಗೆದ್ದಿದ್ದೆವು. ಅಧಿಕಾರದಲ್ಲಿದ್ದಾಗ ಇಂತಹ ಗೆಲುವು ಸಾಧ್ಯವಾಗುತ್ತದೆ ಎಂದ್ರು. ಮುಂದುವರಿದು ಮಾತನಾಡಿ, ಒಂದು ಪಕ್ಷ ಅಧಿಕಾರದಲ್ಲಿದ್ದಾಗ ಏನಾಗುತ್ತದೆ?ಅನ್ನುವುದೆಲ್ಲವೂ ನಮಗೂ ಗೊತ್ತು, ನಿಮಗೂ ಗೊತ್ತು. ಹೀಗಾಗಿ ಉಪಚುನಾವಣೆಗಳ ಗೆಲುವಿನ ಬಗ್ಗೆ ತುಂಬ ಮಾತನಾಡಬೇಡಿ ಎಂದು ತಿರುಗೇಟು ನೀಡಿದರು.

ಈ ಹಂತದಲ್ಲಿ ಬಿಜೆಪಿ ಸದಸ್ಯರು ಎದ್ದು ನಿಂತು ಕಾಂಗ್ರೆಸ್ ಪಕ್ಷದ ಶಕ್ತಿಯ ಬಗ್ಗೆ ಸವಾಲಿನ ಧಾಟಿಯಲ್ಲಿ ಮಾತನಾಡತೊಡಗಿದಾಗ ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ಸದಸ್ಯರೂ ಸವಾಲಿನ ಧಾಟಿಯಲ್ಲಿ ಮಾತನಾಡತೊಡಗಿದರು. ಈ ಮಧ್ಯೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಎದ್ದು ನಿಂತು ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರಿಗೆ, ಇನ್ನೆರಡು ವರ್ಷಗಳಲ್ಲಿ ವಿಧಾನಸಭೆ ಚುನಾವಣೆ ಬರುತ್ತದೆ. ಅಲ್ಲಿಗೆ ಬಾ ನೋಡೋಣ ಎಂದು ಸವಾಲು ಹಾಕಿದರು.

ಈ ಹಂತದಲ್ಲಿ ಪುನಃ ಮಾತನಾಡಿದ ಯಡಿಯೂರಪ್ಪ, ಸದ್ಯದಲ್ಲೇ ಎದುರಾಗಲಿರುವ ಉಪಚುನಾವಣೆಗಳಲ್ಲಿ ಬಿಜೆಪಿ ಭಾರಿ ಅಂತರದಿಂದ ಗೆಲ್ಲುತ್ತದೆ ಎಂದು ಯಾಕೆ ಹೇಳಿದೆ ಎಂದರೆ ನಿಮ್ಮ ಪರಿಸ್ಥಿತಿಯ ಬಗ್ಗೆ ಎಚ್ಚೆತ್ತುಕೊಳ್ಳಿ ಎಂಬ ಕಾರಣಕ್ಕಾಗಿ ಹೇಳಿದೆ ಎಂದರು.

ಈ ಮಾತಿಗೆ ಪ್ರತಿ ಉತ್ತರ ನೀಡಿದ ಸಿದ್ಧರಾಮಯ್ಯ, ನಿಮ್ಮ ಸವಾಲನ್ನು ನಾನು ಸ್ವೀಕರಿಸುತ್ತೇನೆ. ನೀವೂ ನನ್ನ ಸವಾಲು ಸ್ವೀಕರಿಸಿ. ವಿಧಾನಸಭೆಯಲ್ಲಿ ವಿಸರ್ಜಿಸಿ ಚುನಾವಣೆಗೆ ಬನ್ನಿ. ಬಿಜೆಪಿಯನ್ನು ಸೋಲಿಸಿ ತೋರಿಸುತ್ತೇವೆ ಎಂದು ಗುಡುಗಿದರು.

Last Updated : Feb 5, 2021, 3:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.