ETV Bharat / state

ಯಲಚೇನಹಳ್ಳಿ-ಅಂಜನಾಪುರ ಮೆಟ್ರೋ ಸಂಚಾರಕ್ಕೆ ಇಂದು ಸಂಜೆ 4.30ಕ್ಕೆ ಸಿಎಂ ಹಸಿರು ನಿಶಾನೆ - Yalachenaihalli - anjanapura Metro Route will be inaugurated Tomorrow

ಸಂಕ್ರಾಂತಿ ಹಬ್ಬದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್​ಸಿಂಗ್​ ಪುರಿ ನಾಳೆ ಸಂಜೆ 4.30ಕ್ಕೆ ಕೋಣನಕುಂಟೆ ಕ್ರಾಸ್​ ನಿಲ್ದಾಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಸ್ತರಿತ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

Yalachenaihalli - anjanapura  Metro Route will be inaugurated Tomorrow
ನಾಳೆ ಯಲಚೇನಹಳ್ಳಿ- ಅಂಜನಾಪುರ ಮೆಟ್ರೋ ಮಾರ್ಗಕ್ಕೆ ಹಸಿರು ನಿಶಾನೆ
author img

By

Published : Jan 13, 2021, 9:14 PM IST

Updated : Jan 14, 2021, 3:49 PM IST

ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತದ ಮೊದಲ ವಿಸ್ತಾರಿತ ಮಾರ್ಗವಾದ ಯಲಚೇನಹಳ್ಳಿ-ಅಂಜನಾಪುರ ನಡುವೆ ಮೆಟ್ರೋ ಸಂಚಾರಕ್ಕೆ ಸಿಎಂ ಬಿಎಸ್​ವೈ ಇಂದು ಹಸಿರು ನಿಶಾನೆ ತೋರಿಸಲಿದ್ದಾರೆ. ಇದೇ ತಿಂಗಳು 15ರಿಂದ ರೀಚ್-4 ಮಾರ್ಗದಲ್ಲಿ ಮೆಟ್ರೋ ವಾಣಿಜ್ಯ ಸಂಚಾರ ಆರಂಭವಾಗುತ್ತಿದೆ.

ಸಂಕ್ರಾಂತಿ ಹಬ್ಬದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್​ಸಿಂಗ್​ ಪುರಿ ಇಂದು ಸಂಜೆ 4.30ಕ್ಕೆ ಕೋಣನಕುಂಟೆ ಕ್ರಾಸ್​ ನಿಲ್ದಾಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಸ್ತರಿತ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ನಮ್ಮ ಮೆಟ್ರೋ ಎರಡನೇ ಹಂತದ ಮೊದಲ ವಿಸ್ತಾರಿತ ಮಾರ್ಗವಾದ ಯಲಚೇನಹಳ್ಳಿ-ಅಂಜನಾಪುರ ನಡುವೆ 6.29 ಕಿ.ಮೀ. ಮಾರ್ಗ ಇದಾಗಿದೆ. ಇದು ಹಸಿರು ಮಾರ್ಗದ ವಿಸ್ತಾರಣಾ ಮಾರ್ಗವಾಗಿದ್ದು, ಸುಮಾರು 500 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ.

ಯಲಚೇನಹಳ್ಳಿ-ಅಂಜನಾಪುರ ನಡುವೆ ಕೋಣನಕುಂಟೆ ಕ್ರಾಸ್, ಕೃಷ್ಣಲೀಲಾ ಪಾರ್ಕ್, ವಜರಹಳ್ಳಿ, ತಲಘಟ್ಟಪುರ, ಅಂಜನಾಪುರ ಟೌನ್​​ಶಿಪ್ ಎಂಬ ಐದು ಎಲಿವೇಟೆಟ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಈ ಮಾರ್ಗದಲ್ಲಿ 75 ಸಾವಿರ ಮಂದಿ ಓಡಾಟ ಮಾಡುವ ಸಾಧ್ಯತೆ ಇದೆ ಎಂದು ಬಿಎಂಆರ್​ಸಿಎಲ್​​​ ನಿರೀಕ್ಷಿಸಿದೆ.
ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Last Updated : Jan 14, 2021, 3:49 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.