ETV Bharat / state

2021 ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ: ಡಿ.ಕೆ.ಶಿವಕುಮಾರ್ - DK Shivakumar talks about Grama panchayath elections 2020

2020 ದೇಶಕ್ಕಷ್ಟೇ ಅಲ್ಲ ಜಗತ್ತಿಗೇ ನರಕ ತೋರಿಸಿದೆ. 2021ರಲ್ಲಾದರೂ ಒಳ್ಳೆಯ ದಿನಗಳು ಬರಲಿ. ಕೊರೊನಾದಿಂದಾಗಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಿಲ್ಲ. ಆನ್​ಲೈನ್​​ ಶಿಕ್ಷಣ ಸಮಾಧಾನಕರವಾಗಿಲ್ಲ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಭಾರಿ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಾದರೂ ಭವಿಷ್ಯದ ಪ್ರಜೆಗಳಿಗೆ ಉತ್ತಮ ಶಿಕ್ಷಣ ಸಿಗಲಿ ಎಂದು ಡಿಕೆ ಶಿವಕುಮಾರ್​ ಶುಭ ಹಾರೈಸಿದ್ದಾರೆ.

DK Shivakumar
ಡಿ.ಕೆ. ಶಿವಕುಮಾರ್
author img

By

Published : Dec 31, 2020, 3:17 PM IST

Updated : Dec 31, 2020, 4:00 PM IST

ಬೆಂಗಳೂರು: 2021 ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ. ಮುಂದೆ ಪಕ್ಷವನ್ನು ಅಧಿಕಾರಕ್ಕೆ‌ ತರಲು ಸಂಘಟನಾತ್ಮಕವಾಗಿ ಹೋರಾಟ ನಡೆಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರತಿ ಕ್ಷೇತ್ರದಲ್ಲೂ ಸ್ಥಳೀಯವಾಗಿರುವ ಸಮಸ್ಯೆಗಳನ್ನು ಗುರುತಿಸಿ ಪಟ್ಟಿ ಮಾಡಿ ಹೋರಾಟ ನಡೆಸಬೇಕು ಮತ್ತು ಸಂಘಟನೆಗೆ ಹೆಚ್ವಿನ ಆದ್ಯತೆ ನೀಡಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ

ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಅವರು, ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಇದು ಕೆಪಿಸಿಸಿ ಅಧ್ಯಕ್ಷನಾಗಿ ನನಗೆ ಸಮಾಧಾನ ತಂದಿದೆ. ಪಂಚಾಯಿತಿ ಸದಸ್ಯರನ್ನು ಪಕ್ಷದ ನೆಲೆಯಲ್ಲಿ ಗುರುತಿಸಬಾರದು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ. ಆದರೂ ಕೆಲವು ಕಡೆ ಪಕ್ಷದ ಕಾರ್ಯಕರ್ತರೆಂದು ಹೇಳುತ್ತಿರುವುದು ಕಂಡುಬರುತ್ತಿದೆ. ನಾನು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ವರದಿ ಪಡೆದುಕೊಳ್ಳುತ್ತಿದ್ದೇನೆ. ಎಲ್ಲ ಕಡೆ ಉತ್ತಮ ಫಲಿತಾಂಶ ಬಂದಿದೆ ಎಂದರು.

ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಿದ್ದಾರೆ. ಬಿಜೆಪಿಯವರು ತಾವು ಹೆಚ್ಚು ಸ್ಥಾನ ಗೆದ್ದಿರುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಯಾವ ಆಧಾರದ ಮೇಲೆ ಚುನಾಯಿತ ಸದಸ್ಯರನ್ನು ಪಕ್ಷದ ಕಾರ್ಯಕರ್ತರೆಂದು ಹೇಳಲು ಸಾಧ್ಯ ಎಂದು ಪ್ರಶ್ನಿಸಿದರು. ಪಂಚಾಯಿತಿಗಳಲ್ಲಿ ಯಾರು ಅಧ್ಯಕ್ಷರಾಗುತ್ತಾರೋ ಎಂಬುದನ್ನು ಆಧರಿಸಿ ಪಕ್ಷದ ಬಲಾಬಲ ನಿರ್ಧರಿಸಬಹುದು. ಈ ಸಂದರ್ಭದಲ್ಲಿ ಬಿಜೆಪಿ ಮೀಸಲಾತಿ ತಿರುಚುವ ಮೂಲಕ ಗ್ರಾಮ ಪಂಚಾಯಿತಿಗಳಲ್ಲೂ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ ಎಂದು ದೂರಿದರು.

ಓದಿ: ಹೊಸ ವರ್ಷದ ನೆಪದಲ್ಲಿ ಜನಜಂಗುಳಿ‌ ತಡೆಗೆ ಸೆಕ್ಷನ್ 144 ಜಾರಿ: ಬೊಮ್ಮಾಯಿ ಸ್ಪಷ್ಟನೆ

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಗೆದ್ದಿದ್ದೇವೆ. ಪಂಚಾಯಿತಿಗಳಲ್ಲೂ ಹೆಚ್ಚಿನ ಸ್ಥಾನಗಳನ್ನು ಗೆದ್ದಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಪಕ್ಷ ಅಧಿಕಾರದಲ್ಲಿದ್ದಾಗ ಉಪಚುನಾವಣೆಯಲ್ಲಿ ಗೆಲ್ಲುವುದು ಸಾಮಾನ್ಯ. ಈ ಮೊದಲು ಕಾಂಗ್ರೆಸ್ ಸರ್ಕಾರ ಇದ್ದಾಗ ನಂಜನಗೂಡು, ಬಳ್ಳಾರಿ ಉಪಚುನಾವಣೆ ಸೇರಿದಂತೆ ಹಲವಾರು ಕಡೆ ನಾವು ಗೆದ್ದಿದ್ದೆವು. ನಂತರ ಫಲಿತಾಂಶ ಏನಾಯಿತು ಎಂದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಬೇರೆ ಪಕ್ಷದ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ದೊಡ್ಡದಾಗಿ ವರದಿಯಾಗುತ್ತಿದೆ. ಇಡೀ ಕ್ಷೇತ್ರದಲ್ಲಿ ಅವಿರೋಧವಾಗಿ ಸದಸ್ಯರನ್ನು ಆಯ್ಕೆ ಮಾಡುವ ಸಾಮರ್ಥ್ಯ ನನಗಿದೆ. ಆದರೆ, ವಿರೋಧ ಪಕ್ಷವೂ ಇರಬೇಕು ಎಂಬ ಕಾರಣಕ್ಕಾಗಿ ನಾವೇ ಸುಮ್ಮನಾಗಿದ್ದೆವು. ಒಂದಿಬ್ಬರು ಗೆದ್ದಾಕ್ಷಣ ಅದನ್ನು ಹಿನ್ನಡೆ ಎಂದು ಹೇಳಲಾಗುತ್ತಿದೆ. ಬೇಕಿದ್ದರೆ ಯಾರಾದರೂ ಬಂದು ಕ್ಷೇತ್ರದಲ್ಲಿ ಸಮೀಕ್ಷೆ ಮಾಡಲಿ. ನಾವೇ ಹೆಚ್ಚು ಸ್ಥಾನ ಗೆದ್ದಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಸರ್ಕಾರ ಎಲ್ಲ ರಂಗಗಳಲ್ಲೂ ವೈಫಲ್ಯ ಅನುಭವಿಸಿದೆ. ಕೊರೊನಾ ಸಂದರ್ಭದಲ್ಲಿ ಯಾರಿಗೂ ಸಹಾಯ ಮಾಡಿಲ್ಲ. ಕೈಗಾರಿಕೋದ್ಯಮಿಗಳು, ರೈತರು, ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸಹಾಯ ಮಾಡಿದ್ದೇವೆ ಎಂದು ದೊಡ್ಡದಾಗಿ ಪಟ್ಟಿ ಓದುತ್ತಾರೆ. ಆದರೆ, ಯಾರೂ ಕೂಡ ಸರ್ಕಾರದಿಂದ ನಮಗೆ ಸಹಾಯ ಆಗಿದೆ ಎಂದು ಸಮಾಧಾನದಿಂದ ಹೇಳುತ್ತಿಲ್ಲ ಎಂದು ಟೀಕಿಸಿದರು.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಭಾರಿ ತೊಂದರೆ

2020 ದೇಶಕ್ಕಷ್ಟೇ ಅಲ್ಲ ಜಗತ್ತಿಗೇ ನರಕ ತೋರಿಸಿದೆ. 2021ರಲ್ಲಾದರೂ ಒಳ್ಳೆಯ ದಿನಗಳು ಬರಲಿ. ಕೊರೊನಾದಿಂದಾಗಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಿಲ್ಲ. ಆನ್​ಲೈನ್​​ ಶಿಕ್ಷಣ ಸಮಾಧಾನಕರವಾಗಿಲ್ಲ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಭಾರಿ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಾದರೂ ಭವಿಷ್ಯದ ಪ್ರಜೆಗಳಿಗೆ ಉತ್ತಮ ಶಿಕ್ಷಣ ಸಿಗಲಿ ಎಂದು ಶುಭ ಹಾರೈಸಿದರು.

Last Updated : Dec 31, 2020, 4:00 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.