ETV Bharat / state

ನಾನೇ ಸ್ವಯಂ ಪ್ರೇರಿತವಾಗಿ ನಿವೃತ್ತಿಯಾಗಿದ್ದೇನೆ, ವೀರಶೈವ ಲಿಂಗಾಯತರು ಅಪಾರ್ಥ ಮಾಡಿಕೊಳ್ಳಬೇಡಿ: ಬಿಎಸ್​ವೈ

ಫೆ.27ಕ್ಕೆ ನನಗೆ 80 ವರ್ಷ ತುಂಬುತ್ತಿದೆ - ನಾನೇ ಸ್ವಯಂ ಪ್ರೇರಿತವಾಗಿ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದೇನೆ - ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಸ್ಪಷ್ಟನೆ

ಬಿಎಸ್​ ಯಡಿಯೂರಪ್ಪ
ಬಿಎಸ್​ ಯಡಿಯೂರಪ್ಪ
author img

By

Published : Feb 25, 2023, 5:25 PM IST

ಬೆಂಗಳೂರು: ನಾನೇ ಸ್ವಯಂ ‌ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೇನೆ. ಫೆ.27ನೇ ತಾರೀಖು‌ ನನಗೆ 80 ವರ್ಷ ತುಂಬುತ್ತದೆ. ಹೀಗಾಗಿ ಯಾವುದೇ ವೀರಶೈವ ಬಂದುಗಳು ಅಪಾರ್ಥ ಮಾಡಿಕೊಳ್ಳಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು, ವೀರಶೈವ, ಲಿಂಗಾಯತ ಮತಗಳು ಬಿಜೆಪಿಯಿಂದ ವಿಮುಖವಾಗೋ ವಿಚಾರವಾಗಿ ಪ್ರತಿಕ್ರಿಯಿಸುತ್ತ, ವೀರಶೈವ ‌ಲಿಂಗಾಯತ ಬಂದುಗಳಲ್ಲಿ ಕೈ ಜೋಡಿಸಿ ಮನವಿ ಮಾಡುತ್ತೇನೆ. ನಾನೇ ಸ್ವಯಂ ‌ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೇನೆ. ಫೆ.27ನೇ ತಾರೀಖು‌ ನನಗೆ 80 ವರ್ಷ ಆಗ್ತಿದೆ. ಹೀಗಾಗಿ ಯಾವುದೇ ವೀರಶೈವ ಬಂಧುಗಳು ಅಪಾರ್ಥ ಮಾಡಿಕೊಳ್ಳಬಾರದು ಎಂದು ತಿಳಿಸಿದರು.

ಇದುವರೆಗೂ ನನಗೆ ಎಲ್ಲಾ ರೀತಿಯ ‌ಸಹಕಾರ ಅವಕಾಶವನ್ನು ಪ್ರಧಾನಿ ಮೋದಿ, ಅಮಿತ್ ಷಾರವರು ಕೊಟ್ಟಿದ್ದಾರೆ. ನನಗೆ ಎಲ್ಲಾ ಬೆಂಬಲ ಕೊಟ್ಟು ಬಿಜೆಪಿ ಗೆಲ್ಲಿಸಬೇಕೆಂದು ಕೈಜೋಡಿಸಿ ಪ್ರಾರ್ಥನೆ ಮಾಡುತ್ತೇನೆ ಎಂದರು. 27ನೇ ತಾರೀಕು ಏರ್ಪೋರ್ಟ್ ಉದ್ಘಾಟನೆಗೆ ಪ್ರಧಾನಿ ಬರ್ತಿದ್ದಾರೆ.‌ ನೀವೆಲ್ಲರೂ ಬನ್ನಿ. ನನ್ನ ಬಹಳ ವರ್ಷದ ಕನಸ್ಸು ನನಸ್ಸಾಗಿದೆ. ರಾಜ್ಯದ ಅಭಿವೃದ್ಧಿಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಮಾಡಿದ್ದೇನೆ ಅನ್ನೊ ತೃಪ್ತಿ ಇದೆ. ರಾಜ್ಯದ ಉದ್ದಗಲಕ್ಕೂ ‌ಪ್ರವಾಸ ಮಾಡುತ್ತೇನೆ. ನಾನು ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆನೆ ಬಲ‌ ಸಿಕ್ಕಿದಂತೆ ಆಗಿದೆ ಎಂದರು.

ವೀರಶೈವ ಲಿಂಗಾಯತ ಪ್ರಬಲ ನಾಯಕ ಯಡಿಯೂರಪ್ಪರನ್ನು ಪಕ್ಷದ ಹೈ ಕಮಾಂಡ್ ಸಿಎಂ ಸ್ಥಾನದಿಂದ ತೆಗೆದು, ಅವರನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪದೇ ಪದೆ ಆರೋಪ ಮಾಡುತ್ತಲೇ ಇವೆ. ಆ ಮೂಲಕ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಯಡಿಯೂರಪ್ಪ ಕಡೆಗಣನೆ ಅಸ್ತ್ರ ಬಳಸುತ್ತಿವೆ. ಇದಕ್ಕೆ ಪ್ರತಿಕ್ರಿಯಿಸುತ್ತ ಮಾಜಿ ಸಿಎಂ ಯಡಿಯೂರಪ್ಪ, ನಾನೇ ಸ್ವಯಂ ‌ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೇನೆ. ನನಗೀಗ 80 ವರ್ಷ ಆಗಿದೆ. ಬಿಜೆಪಿ ಹೈ ಕಮಾಂಡ್ ನನಗೆ ಎಲ್ಲಾ ಸಹಕಾರ ನೀಡಿದ್ದಾರೆ. ನನಗೆ ಎಲ್ಲಾ ರೀತಿಯ ಬೆಂಬಲ ಕೊಟ್ಟು ಬಿಜೆಪಿ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು. ಸಿದ್ದರಾಮಯ್ಯ ಮೇಲೆ ರೀಡೂ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಲು ಬಿಎಸ್​ವೈ ನಿರಾಕರಿಸಿದರು. ಅದಕ್ಕೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ. ಅನಗತ್ಯವಾಗಿ ಒಂದು ವಿಚಾರದ ಬಗ್ಗೆ ಮಾತನಾಡಲ್ಲ ಎಂದು ಬಿಎಸ್​ವೈ ತಿಳಿಸಿದರು.

ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್​ ವೈರಿಯಲ್ಲ, ಅವರಿಗೆ ಸಿಗಬೇಕಾದ ಗೌರವ ಸಿಗಬೇಕು: ರಮೇಶ್ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.