ETV Bharat / state

ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಸಿಎಂ, ಅನಗತ್ಯ ಗೊಂದಲ ಬೇಡ: ಸಚಿವ ವಿ.ಸೋಮಣ್ಣ

ಯಡಿಯೂರಪ್ಪ ವಯಸ್ಸನ್ನೂ ಲೆಕ್ಕಿಸದೆ ದಿನದ 18 ಗಂಟೆಗಳಷ್ಟು ಸಮಯ ಕೆಲಸ ಮಾಡುತ್ತಿದ್ದಾರೆ. ನಮ್ಮವರು ಅನಗತ್ಯ ಗೊಂದಲ ಸೃಷ್ಟಿಸಬಾರದು ಎಂದು ಪಕ್ಷದ ಮುಖಂಡರಿಗೆ ಸಚಿವ ವಿ.ಸೋಮಣ್ಣ ಕಿವಿಮಾತು ಹೇಳಿದ್ದಾರೆ.

ddsd
ಮುಂದಿನ ಮೂರು ವರ್ಷ ಯಡಿಯೂರಪ್ಪ ಸಿಎಂ ಆಗಿರ್ತಾರೆ : ಸಚಿವ ವಿ.ಸೋಮಣ್ಣ
author img

By

Published : Jul 30, 2020, 8:01 PM IST

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ್ದು, ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಸಿಎಂ : ಸಚಿವ ವಿ.ಸೋಮಣ್ಣ

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಬಿಎಎಸ್​ವೈ ಹೆಸರಿನಲ್ಲಿಯೇ ಪ್ರಣಾಳಿಕೆ ಮಾಡಿ ಅವರ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸಿದ್ದೇವೆ. ಅವರ ಮುಂದಾಳತ್ವದಲ್ಲಿ ಕಳೆದೊಂದು ವರ್ಷದಲ್ಲಿ ಬಂದಿರುವ ಸಂಕಷ್ಟಗಳನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ಪ್ರಕೃತಿ ವಿಕೋಪ, ಕೋವಿಡ್ ಸಮಸ್ಯೆ ಎಲ್ಲವನ್ನೂ ಹತೋಟಿಗೆ ತರಲು ಸಿಎಂ ಪ್ರಯತ್ನಿಸಿದ್ದಾರೆ. ನಾವು ಅನಗತ್ಯವಾಗಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವುದು ಬೇಡ. ಅವರ ನಾಯಕತ್ವದಲ್ಲಿಯೇ ಮುಂದಿನ ಮೂರು ವರ್ಷ ಅಧಿಕಾರ ನಡೆಸಲಿದ್ದೇವೆ. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

ಹೆಚ್.ಡಿ. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಅಧಿಕಾರ ಅನುಭವಿಸಿದ್ದಾರೆ. ವಾಸ್ತವಾಂಶ ಅರಿತುಕೊಂಡು ಸರ್ಕಾರಕ್ಕೆ ಸಹಕಾರ ನೀಡುತ್ತಿದ್ದಾರೆ. ಅವರು ದೇವೇಗೌಡರ ಗರಡಿಯಲ್ಲಿ ಪಳಗಿದವರು. ಯಾವ ಸಂದರ್ಭದಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂದು ಅವರಿಗೆ ಗೊತ್ತಿದೆ. ಜನರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ರಾಜಕಾರಣ ಮಾಡುವುದು ಒಳ್ಳೆಯದಲ್ಲ ಎಂದು ಕುಮಾರಸ್ವಾಮಿ ಅರಿತು ಮಾತನಾಡುತ್ತಿದ್ದಾರೆ ಎಂದು ಜೆಡಿಎಸ್ ನಾಯಕರನ್ನು ಸೋಮಣ್ಣ ಸಮರ್ಥಿಸಿಕೊಂಡರು.

ಕೋವಿಡ್ ಉಪಕರಣಗಳ ಖರೀದಿ ಕುರಿತು ಖರ್ಚಾಗಿರುವ ಅಲ್ಪ ಹಣದ ಬಗ್ಗೆ ಸಚಿವರೇ ಎಲ್ಲ ಮಾಹಿತಿ ನೀಡಿದ್ದಾರೆ. ಇನ್ನೂ ಮಾಹಿತಿ ಬೇಕಿದ್ದರೆ ಅಧಿವೇಶನದಲ್ಲಿ ದಿನಗಟ್ಟಲೆ ಮಾತನಾಡಿ.‌ ಆದರೆ ಬೀದಿಯಲ್ಲಿ ಚರ್ಚೆ ಯಾಕೆ? ಎಂದು ಕಾಂಗ್ರೆಸ್ ನಾಯಕರಿಗೆ ಸೋಮಣ್ಣ ಚಾಟಿ ಬೀಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.