ಬೆಂಗಳೂರು: ಇಂದು ರಾಜ್ಯದ ಕೆಲವು ಕಡೆ ಮಾತ್ರ ಮಳೆಯಾಗಿದೆ. ರಾಯಚೂರು ಜಿಲ್ಲೆಯ ಮುದ್ಗಲ್ನಲ್ಲಿ 4 ಸೆಂ.ಮೀ, ಚಿತ್ರದುರ್ಗದಲ್ಲಿ 8 ಸೆಂ.ಮೀ, ಮಳೆಯಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 23 ರಿಂದ 27 ರವರೆಗೆ ಮಳೆಯಾಗಬಹುದು. ಜುಲೈ 24 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದರು.
ಜುಲೈ 23 ಮತ್ತು 24 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಜುಲೈ 24 ರಂದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 25, 26 ಮತ್ತು 27 ರಂದು ಮಳೆ ಪ್ರಮಾಣ ತಗ್ಗಲಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರಿನಲ್ಲಿ ಜುಲೈ 23 ಮತ್ತು 24 ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಸಿ ಎಸ್ ಪಾಟೀಲ್ ಮಾಹಿತಿ ನೀಡಿದರು.