ETV Bharat / state

ರಾಜ್ಯದಲ್ಲಿ ಮಾನ್ಸೂನ್ ಚುರುಕು: ಹಲವು ಜಿಲ್ಲೆಗಳಿಗೆ ಸೆ.7 ರವರೆಗೆ ಯೆಲ್ಲೋ ಅಲರ್ಟ್

ಕರಾವಳಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೆ.3 ರಿಂದ 7 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

weather
ಮಾನ್ಸೂನ್
author img

By

Published : Sep 3, 2020, 4:17 PM IST

ಬೆಂಗಳೂರು: ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ವರುಣ ಆರ್ಭಟಿಸಿದ್ದಾನೆ.

ರಾಜ್ಯದಲ್ಲಿ ಮಳೆ ಕುರಿತು ಮಾಹಿತಿ ನೀಡಿದ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್​ ಪಾಟೀಲ್​

ರಾಜ್ಯದಲ್ಲಿ ಮಾನ್ಸೂನ್​ ಚುರುಕಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆ.3 ರಿಂದ 7 ರ ವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸೆ.3 ರಿಂದ 7 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದರು.

ಉತ್ತರ ಒಳನಾಡಿನಲ್ಲಿ ಸೆ.3 ಹಾಗೂ 7 ರಂದು ವ್ಯಾಪಕ ಮಳೆ ಹಾಗೂ ಸೆ. 4, 5 ಹಾಗೂ 6 ರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಹೆಚ್ಚಿನ ನಿರೀಕ್ಷೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬೀದರ್, ಕಲಬುರಗಿಯಲ್ಲಿ ಸೆ. 3,6,7 ರಂದು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿಯೂ ಸೆ.3 ರಿಂದ 7 ರವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ರಾಮನಗರ, ಚಿತ್ರದುರ್ಗ, ಬೆಂಗಳೂರು, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಸೆ.3 ರಿಂದ 7 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಕೂಡಾ ಸೆ.3 ರಿಂದ 7 ರವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.