ETV Bharat / state

ಬಿಜೆಪಿ ಸುಳ್ಳುಗಳ ಕುರಿತು ಜನರಿಗೆ ಸತ್ಯ ತಿಳಿಸುವ ಕಾರ್ಯ ಮಾಡಿ: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ

ಮನಮೋಹನ ಸಿಂಗ್ ಅವರ ಕಾಲದಲ್ಲಿ ಒಂದು ಲೀಟರ್ ಪೆಟ್ರೋಲ್ ಮೇಲೆ 9.21 ರೂಗಳಷ್ಟು ತೆರಿಗೆ ಇದ್ದರೆ ಈಗ 33 ರೂಪಾಯಿಗಳನ್ನು ಕೇಂದ್ರ ಸರ್ಕಾರವೊಂದೇ ವಸೂಲಿ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಜನರ ದುಡಿಮೆ ಇಲ್ಲ. ಜನ ಅತ್ಯಂತ ವೇಗವಾಗಿ ಬಡವರಾಗುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

we should be Aware about BJP fraud : Siddaramaiah appeal to activists
ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ
author img

By

Published : Aug 16, 2021, 8:13 PM IST

ಬೆಂಗಳೂರು: ಬಿಜೆಪಿ ಎಂಬ ಸುಳ್ಳಿನ ಫ್ಯಾಕ್ಟರಿಯು ಉತ್ಪಾದಿಸಿ ಹಂಚುತ್ತಿರುವ ಸುಳ್ಳುಗಳ ಕುರಿತು ಜನರಿಗೆ ಸತ್ಯ ಹೇಳುವುದರ ಜೊತೆಗೆ ಆ ಬಗ್ಗೆ ಅರಿವು ಮೂಡಿಸುವಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ರಚನಾತ್ಮಕ ಹೋರಾಟದ ಮೂಲಕ ಮನುಷ್ಯ ವಿರೋಧಿಯಾದ ಬಿಜೆಪಿಯ ಕ್ರೂರ ಹುನ್ನಾರಗಳನ್ನು ಬಯಲಿಗೆಳೆದು ಸೋಲಿಸುವುದೇ ಇಂದಿನ ಎಲ್ಲ ಸಮಸ್ಯೆಗಳಿಗೆ ಇರುವ ನಿಜವಾದ ಪರಿಹಾರ. ಹಾಗೆ ಮಾಡಬೇಕೆಂದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಷಯಗಳನ್ನು ಅಧ್ಯಯನ ಮಾಡಿ ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದು ಜಿಲ್ಲಾ ಅಧ್ಯಕ್ಷರಿಗೆ ಪತ್ರ ಬರೆದು ಸಿದ್ದರಾಯ್ಯ ಅವರು ಮನವಿ ಮಾಡಿದ್ದಾರೆ.

ನಾನು ಬರೆದಿರುವ ‘ಜನಪೀಡಕ ಸರ್ಕಾರ’, ‘ ಐದು ಕಾಯ್ದೆಗಳು- ಅಸಂಖ್ಯಾತ ಸುಳ್ಳುಗಳು’ ಮತ್ತು ‘ಪೆಟ್ರೋಲ್, ಡೀಸೆಲ್ ನೂರು; ಜನರ ಬದುಕು ನುಚ್ಚು ನೂರು’ ಎಂಬ ಕಿರು ಪುಸ್ತಕಗಳನ್ನು ತಮ್ಮ ಓದಿಗಾಗಿ ಕಳಿಸುತ್ತಿದ್ದೇನೆ. ತಾವೆಲ್ಲ ಈ ವಿಚಾರಗಳನ್ನು ಓದಬೇಕು. ಕಿರು ಪುಸ್ತಕಗಳ ಕೊರತೆಯಾದರೆ ಪಕ್ಷದ ಶಿಷ್ಟಾಚಾರದಂತೆ ಮುದ್ರಿಸಿಕೊಂಡು ಎಲ್ಲ ಬೂತ್​ ಮಟ್ಟದ ಕಾರ್ಯಕರ್ತರೂ ಓದುವಂತೆ ಮಾಡಿ. ಜನರನ್ನು ನಿಜದ ಬೆಳಕಿನ ಕಡೆಗೆ ಮುನ್ನಡೆಸಬೇಕೆಂದು ಸಿದ್ದರಾಮಯ್ಯ ಜನರನ್ನು ಕೋರಿದ್ದಾರೆ.

ಪತ್ರದ ವಿವರ:

ಎರಡು ವರ್ಷದ ಹಿಂದೆ ಸಾಧಾರಣ ಕುಟುಂಬವೊಂದು ಜೀವನ ನಡೆಸಲು ಸರಾಸರಿ 5,000 ರೂ ಖರ್ಚು ಮಾಡುತ್ತಿದ್ದರೆ ಇಂದು 11,000 ರೂಪಾಯಿಗಳನ್ನು ಖರ್ಚು ಮಾಡಬೇಕಾದ ಪರಿಸ್ಥಿತಿಯಿದೆ. 25 ಕಿ.ಮೀ ದೂರದ ಹಳ್ಳಿಯಿಂದ ಪೇಟೆ/ಪಟ್ಟಣಕ್ಕೆ ಬಂದು ಕೂಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ತನ್ನ ಬೈಕಿಗೆ ದಿನಕ್ಕೊಂದು ಲೀಟರ್ ಪೆಟ್ರೋಲ್ ಹಾಕಿಸಿದರೆ 37-40 ಸಾವಿರ ರೂಪಾಯಿಗಳಷ್ಟು ಹಣ ಒಂದು ವರ್ಷಕ್ಕೆ ಖರ್ಚಾಗುತ್ತದೆ. ಇದರಲ್ಲಿ ಕನಿಷ್ಠ 24 ಸಾವಿರ ರೂಪಾಯಿಗಳಷ್ಟು ಮೊತ್ತವನ್ನು ತೆರಿಗೆ ರೂಪದಲ್ಲಿ ಸರ್ಕಾರಗಳಿಗೆ ಕಟ್ಟುತ್ತಾನೆ.

ಮನಮೋಹನಸಿಂಗ್ ಅವರ ಕಾಲದಲ್ಲಿ ಒಂದು ಲೀಟರ್ ಪೆಟ್ರೋಲ್ ಮೇಲೆ 9.21 ರೂಗಳಷ್ಟು ತೆರಿಗೆ ಇದ್ದರೆ ಈಗ 33 ರೂಪಾಯಿಗಳನ್ನು ಕೇಂದ್ರ ಸರ್ಕಾರವೊಂದೇ ವಸೂಲಿ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಜನರ ದುಡಿಮೆ ಇಲ್ಲ. ಜನ ಅತ್ಯಂತ ವೇಗವಾಗಿ ಬಡವರಾಗುತ್ತಿದ್ದಾರೆ. ಬೆಲೆ ಏರಿಕೆ ನಡುವೆ ಕೊರೊನಾ ಬಂತು. ರಾಜ್ಯದ ಬಿಜೆಪಿ ಸರ್ಕಾರ ಕೊರೊನಾ ರೋಗದಲ್ಲೂ, ಹೆಣಗಳ ವಿಚಾರದಲ್ಲೂ ಭ್ರಷ್ಟಾಚಾರ ಮಾಡಿತು.

ಜನರು ಆಕ್ಸಿಜನ್, ವೆಂಟಿಲೇಟರ್, ಆ್ಯಂಬುಲೆನ್ಸ್​​, ಹಾಸಿಗೆ, ವೈದ್ಯರು ಹಾಗೂ ಅಗತ್ಯ ಔಷಧಗಳೂ ಇಲ್ಲದೆ ಅನಾಥರಾಗಿ ಮರಣ ಹೊಂದಿದರು. ಜನರ ಸಾವುಗಳು ಸಾವುಗಳಲ್ಲ. ಅವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅದಕ್ಷತೆ, ನಿರ್ಲಕ್ಷ್ಯ, ಅದಮ್ಯ ಭ್ರಷ್ಟಾಚಾರಗಳಿಂದ ನಡೆದ ಕಗ್ಗೊಲೆಗಳು ಎನ್ನದೇ ವಿಧಿಯಿಲ್ಲ ಎಂದಿದ್ದಾರೆ.

ಕೇಂದ್ರದ ದಬ್ಬಾಳಿಕೆ:

ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯದ ಆರ್ಥಿಕತೆ, ಒಕ್ಕೂಟ ತತ್ವ, ರಾಜ್ಯದ ಭಾಷೆ, ಸಂಸ್ಕೃತಿ, ರಾಜ್ಯದ ಅಧಿಕಾರ, ಸಂಪತ್ತುಗಳ ಮೇಲೆ ತೀವ್ರ ದಬ್ಬಾಳಿಕೆ ನಡೆಸುತ್ತಿದೆ. ನಮ್ಮ ರಾಜ್ಯದಿಂದ ಐಟಿಬಿಟಿ ಕ್ಷೇತ್ರಗಳನ್ನು ಹೊರತು ಪಡಿಸಿಯೇ ಸುಮಾರು 2.5 ಲಕ್ಷ ಕೋಟಿ ಸಂಪತ್ತನ್ನು ವಿವಿಧ ತೆರಿಗೆ ಮತ್ತು ಸೆಸ್‍ಗಳ ಮೂಲದಿಂದ ಸಂಗ್ರಹಿಸುತ್ತಿದೆ.

ಆದರೆ, ನಮಗೆ 2020 ರಲ್ಲಿ ವಾಪಸ್​ ಬಂದಿದ್ದು ಕೇವಲ 38 ಸಾವಿರ ಕೋಟಿ ರೂ. ಮಾತ್ರ. ನಿಯಮದ ಪ್ರಕಾರ ಶೇ.42 ರಷ್ಟು ಸಂಪತ್ತನ್ನು ನಮಗೆ ಹಂಚಿಕೆ ಮಾಡಿದರೆ ಕನಿಷ್ಠ ಎಂದರೂ 1.10 ಲಕ್ಷ ಕೋಟಿಗಳಷ್ಟು ರಾಜ್ಯಕ್ಕೆ ಬರಬೇಕು. ಐಟಿ ಬಿಟಿಯ ಲೆಕ್ಕ ಹಾಕಿದರೆ ಇನ್ನಷ್ಟು ಹೆಚ್ಚು ಬರಬೇಕಾಗುತ್ತದೆ. ಕರ್ನಾಟಕವು ದಿನದಿಂದ ದಿನಕ್ಕೆ ಸಾಲಗಾರ ರಾಜ್ಯವಾಗುತ್ತಿದೆ.

ನಾನು ಅಧಿಕಾರದಿಂದ ಇಳಿದಾಗ ರಾಜ್ಯದ ಸಾಲ [ಕಳೆದ 70 ವರ್ಷಗಳಿಂದ ಮಾಡಿದ್ದು] 2.42 ಲಕ್ಷ ಕೋಟಿಗಳಷ್ಟಿತ್ತು. ಈ ವರ್ಷದ ಅಂತ್ಯಕ್ಕೆ ಸರ್ಕಾರ ದಾಖಲೆಗಳ ಪ್ರಕಾರವೆ ಸುಮಾರು 4.57 ಲಕ್ಷ ಕೋಟಿಗಳಷ್ಟು ಸಾಲವಾಗುತ್ತದೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ

ಮನಮೋಹನಸಿಂಗ್ ಅವರು ಅಧಿಕಾರದಿಂದ ಇಳಿಯುವ ಸಂದರ್ಭದಲ್ಲಿ [2014 ರ ಮಾರ್ಚ್ 31 ಕ್ಕೆ ] ದೇಶದ ಸಾಲ 53.11 ಲಕ್ಷ ಕೋಟಿ ಇತ್ತು. ಆದರೆ, ಮೋದಿಯವರು ಅಧಿಕಾರಕ್ಕೆ ಬಂದ ನಂತರ ಈ ವರ್ಷದ ಕಡೆಗೆ 135.87 ಲಕ್ಷ ಕೋಟಿಗಳಾಗುತ್ತದೆಂದು ಮೋದಿಯವರ ಸರ್ಕಾರವೇ ಮಂಡಿಸಿದ ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗಿದೆ. ಅಂದರೆ, ಮೋದಿಯವರು 6 ವರ್ಷಗಳಲ್ಲಿ ಮಾಡಿದ ಸಾಲ ಬರೋಬ್ಬರಿ 82.76 ಲಕ್ಷ ಕೋಟಿಗಳು. ದೇಶವು 100 ರೂ. ತೆರಿಗೆ ಸಂಗ್ರಹಿಸಿದರೆ 45 ರೂಪಾಯಿಗಳನ್ನು ಸಾಲ ತೀರಿಸಲು ಖರ್ಚು ಮಾಡುತ್ತಿದೆ ಎಂದು ವಿವರಿಸಿದ್ದಾರೆ.

ತೆರಿಗೆ ಬದಲಾವಣೆ:

ವಾಜಪೇಯಿಯವರ ಆಡಳಿತದ ಕಡೆಯ ವರ್ಷದಲ್ಲಿ ತೆರಿಗೆ ಸಂಗ್ರಹವು ಹೀಗಿತ್ತು; ದೇಶವು ನೂರು ರೂಪಾಯಿ ತೆರಿಗೆ ಸಂಗ್ರಹಿಸಿದರೆ ಅದರಲ್ಲಿ ಜನರಿಂದ 72 ರೂಪಾಯಿಗಳನ್ನು, ಕಾರ್ಪೊರೇಟ್ ಬಂಡವಾಳಿಗರಿಂದ ಕೇವಲ 28 ರೂಪಾಯಿಗಳನ್ನು ಸಂಗ್ರಹಿಸುತ್ತಿದ್ದರು. ಮನಮೋಹನಸಿಂಗರು ಅಧಿಕಾರಕ್ಕೆ ಬಂದ ಮೇಲೆ ಈ ತೆರಿಗೆಯನ್ನು ಅತ್ಯಂತ ಮೌನವಾಗಿಯೆ ಬದಲಾಯಿಸಿದ್ದರು.

2010 ರ ವೇಳೆಗೆ ಜನರು ಕಟ್ಟುವ ತೆರಿಗೆ 72 ರೂಪಾಯಿನಿಂದ 58 ರೂಗಳಿಗೆ ಇಳಿದಿತ್ತು. ಕಾರ್ಪೊರೇಟ್ ಬಂಡವಾಳಿಗರು ಕಟ್ಟುವ ತೆರಿಗೆ 28 ರೂಗಳಿಂದ 40 ರೂಪಾಯಿಗೆ ಏರಿಕೆಯಾಗಿತ್ತು. ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಈಗ ಜನರಿಂದ ಮತ್ತೆ 75 ರೂಪಾಯಿಗಳನ್ನು ಸಂಗ್ರಹಿಸುತ್ತಿದ್ದಾರೆ. ಕಾರ್ಪೊರೇಟ್ ಬಂಡವಾಳಿಗರಿಂದ ಕೇವಲ 25 ರೂಪಾಯಿಗಳನ್ನು ಸಂಗ್ರಹಿಸುತ್ತಿದ್ದಾರೆ. ಇದನ್ನು ನೋಡಿದರೆ ಸಾಕು ಬಿಜೆಪಿಯವರು ಯಾರ ಪರ ಎಂದು ಅರ್ಥವಾಗುತ್ತದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಗಳ ತೆರಿಗೆ ಅಧಿಕಾರಗಳನ್ನು ಕಿತ್ತುಕೊಂಡು ಗುಜರಾತ್​ ಮುಂತಾದ ಉತ್ತರದ ರಾಜ್ಯಗಳಿಗೆ ಹೆಚ್ಚು ಅನುದಾನ ನೀಡುತ್ತಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ನಮ್ಮ ರಾಜ್ಯದಿಂದ ಆಯ್ಕೆಯಾದ 25 ಜನ ಸಂಸದರಲ್ಲಿ ಒಬ್ಬರೂ ಸಹ ಪ್ರಶ್ನಿಸುತ್ತಿಲ್ಲ. ರಾಜ್ಯದ ಮೇಲಿನ ಕೇಂದ್ರದ ದಮನವನ್ನು ಪ್ರತಿಭಟಿಸುತ್ತಿಲ್ಲ.

ರಾಜ್ಯದ ಬಿಜೆಪಿ ಸರ್ಕಾರವೂ ಪ್ರಶ್ನಿಸುತ್ತಿಲ್ಲ. ಹಾಗಾಗಿ ಮೋದಿಯವರ ಸರ್ಕಾರವು ದೇಶದಲ್ಲಿಯೇ ಅನೇಕ ವಿಚಾರಗಳಲ್ಲಿ ಮುಂದುವರೆದಿದ್ದ ಕರ್ನಾಟಕ ರಾಜ್ಯವನ್ನು ತುಳಿದು ನರಕಕ್ಕೆ ತಳ್ಳಲು ಪ್ರಯತ್ನಿಸುತ್ತಿದೆ. ಈ ರೀತಿಯ ಅನೇಕ ಸತ್ಯಗಳನ್ನು ಅಧ್ಯಯನ ಮಾಡಿ ತಾವುಗಳು ಜನರಿಗೆ ತಿಳಿ ಹೇಳಿ ಅರಿವು ಉಂಟು ಮಾಡಬೇಕು.

ಸುಳ್ಳಿನ ಕಾರ್ಖಾನೆಯಾದ ಬಿಜೆಪಿಯ ಎದುರು ಸತ್ಯದ ದೀಪವನ್ನು ಹಚ್ಚಿ , ದೇಶವನ್ನು ರಾಹು ಕೇತುಗಳಂತೆ ಆವರಿಸಿಕೊಂಡಿರುವ ಬಿಜೆಪಿಯನ್ನು ಸಂಪೂರ್ಣ ತೊಲಗಿಸಬೇಕೆಂದು ಕೋರುತ್ತೇನೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ವಿವರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.