ETV Bharat / state

ಜಾಗಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು ಯುವಕ ಸಾವು - ಜಾಗಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು ಯುವಕ ಸಾವು

ಯುವಕನೊಬ್ಬ ಜಾಗಿಂಗ್​ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಬಿಇಎಲ್​ ಮೈದಾನದಲ್ಲಿ ನಡೆದಿದೆ.

ಜಾಗಿಂಗ್
ಜಾಗಿಂಗ್
author img

By

Published : Oct 25, 2022, 11:11 AM IST

ಬೆಂಗಳೂರು: ಜಾಗಿಂಗ್​ ಮಾಡುವಾಗ ಯುವಕ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಾಲಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಬಿಇಎಲ್​ ಮೈದಾನದಲ್ಲಿ ನಡೆದಿದೆ. ಮೃತಪಟ್ಟಿರುವ ಯುವಕನ ಹೆಸರು ಇನ್ನೂ ತಿಳಿದುಬಂದಿಲ್ಲ.

ಇಂದು ಬೆಳಗ್ಗೆ ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಇದಕ್ಕಿದ್ದಂತೆ ಕುಸಿದುಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಸಮೀಪದ ಆಸ್ಪತ್ರೆ ಕರೆದೊಯ್ದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಯುವಕನ‌ ಪ್ರಾಣ ಪಕ್ಷಿ ಹಾರಿಹೋಗಿತ್ತು.

ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ‌. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಸದ್ಯ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 'ಕಾಂತಾರ' ಸಿನಿಮಾ ನೋಡಿ ಹೊರಬರುತ್ತಿದ್ದ ಪ್ರೇಕ್ಷಕ ಹೃದಯಾಘಾತದಿಂದ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.