ETV Bharat / state

ಕೈ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ಬಿಇ ವಿದ್ಯಾರ್ಥಿನಿ ಸಾವು.. ವೈದ್ಯರ ವಿರುದ್ಧ ನಿರ್ಲಕ್ಷ್ಯತನದ ಆರೋಪ - ಬೆಂಗಳೂರು ಆಸ್ಪತ್ರೆಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಮುಂಗೈ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಯುವತಿ ಸಾವನ್ನಪ್ಪಿದ್ದು, ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯತನವೇ ಇದಕ್ಕೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ..

girl-died-in-bengaluru-hospital
ಬೆಂಗಳೂರಲ್ಲಿ ಮುಂಗೈ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ಯುವತಿ ಸಾವು... ವೈದ್ಯರ ನಿರ್ಲಕ್ಷ್ಯ ಆರೋಪ
author img

By

Published : May 30, 2022, 2:40 PM IST

ಬೆಂಗಳೂರು : ಬಾತ್ ರೂಮ್​​ನಲ್ಲಿ ಬಿದ್ದು ಕೈಗೆ ಗಾಯವಾಗಿದ್ದ ಹಿನ್ನೆಲೆಯಲ್ಲಿ ಮುಂಗೈ ಶಸ್ತ್ರಚಿಕಿತ್ಸೆಗಾಗಿ ನಗರದ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಚಿಕ್ಕಬಳ್ಳಾಪುರ ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯತನವೇ ತಮ್ಮ ಮಗಳ ಸಾವಿಗೆ ಕಾರಣ ಎಂದು ಮೃತ ವಿದ್ಯಾರ್ಥಿನಿ ತೇಜಸ್ವಿನಿ ಅವರ ಪೋಷಕರು ಆರೋಪಿಸಿದ್ದಾರೆ.

ಮೃತ ಯುವತಿ ಮೂಲತಃ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನವಳು. ಬೆಂಗಳೂರಿನಲ್ಲಿ ಎಂಜಿನಿಯರಿಂಗ್​ ಓದುತ್ತಿದ್ದ ತೇಜಸ್ವಿನಿ ಪಿಜಿಯೊಂದರಲ್ಲಿ ಉಳಿದುಕೊಂಡಿದ್ದಳು. ಬಾತ್ ರೂಮ್​​ನಲ್ಲಿ ಬಿದ್ದ ಕಾರಣ ಕೈ ಸರ್ಜರಿ ಮಾಡಿಸಿಕೊಳ್ಳಲು ಭಾನುವಾರ ಮಾರತ್​ಹಳ್ಳಿಯ ಆಸ್ಪತ್ರೆಯೊಂದಕ್ಕೆ ದಾಖಲು‌ ಮಾಡಲಾಗಿತ್ತು. ಆದರೆ, ಶಸ್ತ್ರಚಿಕಿತ್ಸೆ ನಡೆದ ಕೆಲವೇ ಗಂಟೆಗಳಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಲೇ ಮಗಳು ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಆರೋಪ ಮಾಡಿದ್ದಾರೆ. ಕುಟುಂಬದವರೊಡನೆ ಆಸ್ಪತ್ರೆಗೆ ದಾಖಲಿಸಲಾಗಿದ್ದ ಯುವತಿ ಮಧ್ಯಾಹ್ನ 12ಕ್ಕೆ ಸರ್ಜರಿಗೆ ತೆರಳಿದ್ದಳು. ಬಳಿಕ ಸಂಜೆ 4 ಗಂಟೆಗೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗ್ತಿದೆ.

ಸರ್ಜರಿ ವೇಳೆ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ ಅಂತಾ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಅನಸ್ತೇಷಿಯಾ ನೀಡಿದ್ದ ಡಾ. ಶಶಾಂಕ್, ಡಾ.ಅಶೋಕ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಹೆಚ್​ಎಎಲ್​​ ಪೊಲೀಸರು ಡಾ. ಶಶಾಂಕ್​​ರನ್ನು ವಿಚಾರಣೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ.. ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಕೊಂದ ಕಿಡಿಗೇಡಿ..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.