ETV Bharat / state

ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಏಳು ಮಂದಿ‌ ಬಂಧನ - ಈಟಿವಿ ಭಾರತ ಕನ್ನಡ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ರೆಸ್ಟೋರೆಂಟ್​ನಲ್ಲಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.

youth-attacked-hotel-staff-in-bengaluru-seven-accused-arrested
ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ : ಏಳು ಮಂದಿ‌ ಬಂಧನ
author img

By

Published : Dec 1, 2022, 8:03 PM IST

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಟಿ ವಿಲೇಜ್ ರೆಸ್ಟೋರೆಂಟ್​​ನಲ್ಲಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ‌. ರೆಸ್ಟೋರೆಂಟ್ ಸಿಬ್ಬಂದಿ ನೀಡಿದ‌ ದೂರಿನ ಮೇರೆಗೆ ಶಂಕರ್, ಕೀರ್ತಿ, ಅಭಿಷೇಕ್,ಪ್ರವೀಣ್ ಕುಮಾರ್, ಹೇಮಂತ್ ಕುಮಾರ್, ಅಭಿಷೇಕ್, ಅಭಿಲಾಷ್ ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.

ಘಟನೆ ಹಿನ್ನೆಲೆ : ನ.21ರಂದು ನೀಲಾದ್ರಿ ನಗರದ ರೆಸ್ಟೋರೆಂಟ್​ವೊಂದರಲ್ಲಿ ರಾತ್ರಿ 11.30ರ ಸುಮಾರಿಗೆ 15ರಿಂದ 20 ಜನರ ಗುಂಪು ರೆಸ್ಟೋರೆಂಟ್​ಗೆ ಬಂದು ಊಟಕ್ಕೆ ಆರ್ಡರ್​ ಮಾಡಿದೆ. ಆದರೆ, ರೆಸ್ಟೋರೆಂಟ್ ಮುಚ್ಚುವ ಸಮಯವಾಗಿದ್ದು, ಊಟ ಸಿದ್ಧಪಡಿಸಲು ಸಾಧ್ಯವಿಲ್ಲ ಸಿಬ್ಬಂದಿ ಹೇಳಿದ್ದಾರೆ. ಇಷ್ಟಕ್ಕೆ ಯುವಕರ ಗುಂಪು ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ವೇಳೆ ಆರೋಪಿಗಳು ಕುಡಿದ ನಶೆಯಲ್ಲಿದ್ದರು ಎಂದು ತಿಳಿದು ಬಂದಿದೆ. ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವ ದೃಶ್ಯಗಳನ್ನು ಸ್ಥಳದಲ್ಲಿದ್ದ ಗ್ರಾಹಕರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ವೈರಲ್ ಆಗಿತ್ತು.

ಸದ್ಯ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಇನ್ನೂ ಕೆಲವರು ಭಾಗಿಯಾಗಿದ್ದು,ಅವರ ಶೋಧಕಾರ್ಯ ಮುಂದುವರೆದಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು: ಊಟ ಮುಗಿದಿದೆ ಎಂದ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಯುವಕರ ಗುಂಪಿನಿಂದ ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.