ನೆಲಮಂಗಲ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ಮತ್ತಹಳ್ಳಿಯಲ್ಲಿ ನಡೆದಿದೆ.
ಚಂದ್ರಶೇಖರ್ (30) ಮೃತ ಯುವಕ. ಈತ ದಾಸನನಪುರ ಹೋಬಳಿಯ ಮತ್ತಹಳ್ಳಿಯ ನಿವಾಸಿಯಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ತಿಳಿದು ಬಂದಿದೆ.
ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.