ETV Bharat / state

Bengaluru: ಸೊಗಡು ಶಿವಣ್ಣ ಪ್ರತಿಕೃತಿ ದಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

author img

By

Published : Oct 16, 2021, 4:34 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮೇಲೆ ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಇದನ್ನು ವಿರೋಧಿಸಿ ಯುವ ಕಾಂಗ್ರೆಸ್​ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

Youth congress activists protest
ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಮಾಜಿ ಸಚಿವ ಸೊಗಡು ಶಿವಣ್ಣ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್​​ ಮೇಲೆ ಮಾಡಿರುವ ಆಧಾರರಹಿತ ಆರೋಪವನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಬೆಂಗಳೂರಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಬಿಜೆಪಿ ನಾಯಕರಿಗೆ ಬುದ್ಧಿಭ್ರಮಣೆಯಾದಂತೆ ತೋರುತ್ತಿದೆ. ತಮ್ಮ ಪಕ್ಷದ ಭ್ರಷ್ಟಾಚಾರವನ್ನು ಪ್ರತಿಪಕ್ಷಗಳ ಮೇಲೆ ಹೊರಿಸಿ ತಮ್ಮ ಭ್ರಷ್ಟಾಚಾರವನ್ನು ಮರೆ ಮಾಚುವ ಕುತಂತ್ರದ ಬಗ್ಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಿರುದ್ಯೋಗಿ ನಾಯಕರಿಗೆ ತರಬೇತಿ ನೀಡುತ್ತಿದ್ದಾರೆ. ಬಿಜೆಪಿ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ. ಅವರ ಪಕ್ಷದಲ್ಲೇ ಸಾವಿರಾರು ಕೋಟಿ ಭ್ರಷ್ಟಾಚಾರವಾಗಿದೆ. ಈ ಬಗ್ಗೆ ತನಿಖೆ ನಡೆಸುವ ಯೋಗ್ಯತೆ ಸರ್ಕಾರಕ್ಕೆ ಇಲ್ಲವೇ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಈ ವೇಳೆ, ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಮಾತನಾಡಿ, ಬಿಜೆಪಿಯ ದುರಾಡಳಿತದಿಂದ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮೊದಲು ಸಿಬಿಐ ತನಿಖೆ ನಡೆಸಬೇಕು. ತನಿಖೆ ನಡೆಸದೇ ಕೇವಲ ಸಿಬಿಐ ಹೆಸರನ್ನು ಪ್ರಸ್ತಾಪಿಸಿ ಬೆದರಿಸುವ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಮಣಿಯುವುದಿಲ್ಲ. ಸಿಬಿಐ,ಇಡಿ, ಐಟಿ ಇಲಾಖೆಯನ್ನು ಬಿಜೆಪಿ ಸರ್ಕಾರ ಯಾವ ರೀತಿ ದುರ್ಬಳಕೆ ಮಾಡಿಕೊಂಡಿದೆ ಎಂಬುದು ಜನತೆಗೆ ತಿಳಿದ ವಿಷಯವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯ ಮಾಜಿ ಸಚಿವ ಸೊಗಡು ಶಿವಣ್ಣ ನೀಡಿರುವ ಹೇಳಿಕೆ ಬಗ್ಗೆ ಕೂಡಲೇ ದಾಖಲೆ ಬಹಿರಂಗಪಡಿಸಬೇಕು. ಇಲ್ಲದೇ ಹೋದರೆ ತಾನೇ ತನಿಖಾ ಸಂಸ್ಥೆಯ ಮುಂದೆ ಹೋಗಿ ತಪ್ಪೊಪ್ಪಿಕೊಂಡು ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಬೇಕು ಎಂದು ಆಗ್ರಹಿಸಿದರು.

ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ನಡೆದ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಜಿ.ಜನಾರ್ದನ್, ಎ.ಆನಂದ್, ಎಲ್ ಜಯಸಿಂಹ ಪ್ರಕಾಶ್, ನವೀನ್ ಸೇರಿದಂತೆ ಇತರ ಕಾರ್ಯಕರ್ತರು ಭಾಗಿಯಾಗಿದ್ದರು.

ಇದನ್ನೂ ಓದಿ: ಮುಗಿಯುತ್ತಲೇ ಇಲ್ಲ ಹಳೆಕಟ್ಟಡಗಳ ರಗಳೆ.. ಕಮರ್ಷಿಯಲ್ ಸ್ಟ್ರೀಟ್​​​ನಲ್ಲಿ ಹಳೆ ಕಟ್ಟಡದ ಗೋಡೆ ಕುಸಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.