ETV Bharat / state

ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್​ನಿಂದ ಪಂಜಿನ ಮೆರವಣಿಗೆ, ಪ್ರತಿಭಟನೆ

author img

By

Published : Sep 25, 2020, 11:36 AM IST

ಕೇಂದ್ರ ಸರ್ಕಾರ ಮಂಡಿಸಿದ ಕೃಷಿ ಮಸೂದೆಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್​ನಿಂದ ಗುರುವಾರ ರಾತ್ರಿ ಪ್ರತಿಭಟನೆ ನಡೆಯಿತು.

Youth Congress protests against central government
ಯುವ ಕಾಂಗ್ರೆಸ್​ನಿಂದ ಪಂಜಿನ ಮೆರವಣಿಗೆ ನಡೆಯಿತು

ಬೆಂಗಳೂರು: ಕೇಂದ್ರ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಮಂಡಿಸಿದೆ ಎಂದು ಆರೋಪಿಸಿ ನಗರ ಯುವ ಕಾಂಗ್ರೆಸ್​ ವತಿಯಿಂದ ಗುರುವಾರ ಸಂಜೆ ಪಂಜಿನ ಮೆರವಣಿಗೆ ನಡೆಸಲಾಯಿತು.

ಬೆಂಗಳೂರು ಕೇಂದ್ರ ವಿಭಾಗ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್​ ನಲಪಾಡ್ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ, ಶಾಂತಿನಗರ ಶಾಸಕ ಎನ್​.ಎ. ಹ್ಯಾರಿಸ್ ಹಾಗೂ ಮತ್ತಿತರ ಮುಖಂಡರು ಭಾಗವಹಿಸಿದ್ದರು. ವಸಂತ ನಗರದ ಎಂಪೈರ್ ಹೋಟೆಲ್​ ಬಳಿಯಿಂದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯವರೆಗೆ ಮೆರವಣಿಗೆ ನಡೆಯಿತು.

ರಾಜ್ಯ, ಕೇಂದ್ರ ಸರ್ಕಾರಗಳು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ರೈತರ ಮೇಲೆ ದಬ್ಬಾಳಿಕೆ ನಡೆಸಲು ಹೊರಟಿದೆ. ಇದನ್ನು ಖಂಡಿಸುವುದು ಕಾಂಗ್ರೆಸ್​ನ ಜವಾಬ್ದಾರಿಯಾಗಿದೆ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್​ ನಾಯಕರು ತಿಳಿಸಿದರು.

ಶಾಸಕ ಎನ್​.ಎ. ಹ್ಯಾರಿಸ್ ಮಾತನಾಡಿ, ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ಪ್ರಜಾಪ್ರಭುತ್ವ ವಿರೋಧಿ ನಡೆಯ ಮೂಲಕ ರಾಜ್ಯಸಭೆಯಲ್ಲಿ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದನ್ನು ಕಾಂಗ್ರೆಸ್​ ಖಂಡಿಸುತ್ತದೆ ಎಂದರು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.