ಬೆಂಗಳೂರು: ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದ್ದು ಈ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
ಇಂದು ಬೆಳಿಗ್ಗೆ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂಭಾಗದಿಂದ ಪಾದಯಾತ್ರೆ ಮೂಲಕ ಹೋಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದ್ದು, ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ.
11 ಗಂಟೆಗೆ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ನಡೆಯುವ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳುವರು.