ಬೆಂಗಳೂರು: ಬೈಕ್ ಅಪಘಾತ ವಿಚಾರವಾಗಿ ನಡೆದ ಕೊಲೆ ಪ್ರಕರಣದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಖಂಡಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದರು. 'ಸಮಾಜಕ್ಕೆ ಬೆಂಕಿ ಇಡೋ ಅಜ್ಞಾನೇಂದ್ರ ಎಲುಬಿಲ್ಲದ ನಾಲಿಗೆ' ಎಂದು ಆರಗ ಜ್ಞಾನೇಂದ್ರ ವಿರುದ್ಧ ಪೋಸ್ಟರ್ ಪ್ರದರ್ಶಿಸಿದರು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ನಲಪಾಡ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು. ಬಳಿಕ ಫ್ರೀಡಂಪಾರ್ಕ್‌ಗೆ ತೆರಳಲು ಹೊರಟಾಗ ಪೊಲೀಸರು ತಡೆದರು.
ಇದನ್ನೂ ಓದಿ: ಅಲ್ಪಸಂಖ್ಯಾತರ ಓಲೈಕೆಗಾಗಿ ಎಷ್ಟು ದಿನ ಸುಳ್ಳು ಸುದ್ದಿ ಹಬ್ಬಿಸುತ್ತೀರಿ?: ರೇಣುಕಾಚಾರ್ಯ