ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಗಾಂಜಾ ಮತ್ತಿನಲ್ಲಿ ಆರಂಭವಾದ ಗಲಾಟೆ ಓರ್ವನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯ ವಿನಾಯಕ ನಗರದಲ್ಲಿ ನಡೆದಿದೆ.
ಥಾಮಸ್ ಮೃತ ವ್ಯಕ್ತಿಯಾಗಿದ್ದು, ಶನಿವಾರ ಬೆಳಗ್ಗೆ ಕಟ್ಟಡದಿಂದ ಕೆಳಗೆ ಬಿದ್ದು ಥಾಮಸ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಂಜಾ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಅಶೋಕ್ ಮತ್ತು ಮೃತ ಥಾಮಸ್ ನಡುವೆ ಜಗಳ ಆರಂಭವಾಗಿದ್ದು, ಇಬ್ಬರು ಪರಸ್ಪರ ತಳ್ಳಾಡಿಕೊಂಡಿದ್ದಾರೆ. ಈ ಹಂತದಲ್ಲಿ ಕಟ್ಟಡ ಮೇಲೆ ಅಳವಡಿಸಿದ್ದ ಶೀಟ್ ತುಂಡಾದ ಪರಿಣಾಮ ಥಾಮಸ್ ನೆಲಕ್ಕೆ ಉರುಳಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.
ಹಲವು ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು:
ಘಟನೆ ಕುರಿತಂತೆ ಮಾಹಿತಿ ಪಡೆದು ಸ್ಥಳ ಪರಿಶೀಲನೆ ನಡೆಸಿದ್ದೇವೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದೇವೆ. ಜಗಳ ಮಾಡಿಕೊಂಡಿರುವ ಅಶೋಕ್ ಹಾಗೂ ಮೃತ ಥಾಮಸ್ ಮೇಲೆ ಈಗಾಗಲೇ ಮಡಿವಾಳ ಮತ್ತು ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.