ETV Bharat / state

ಬೆಂಗಳೂರು: ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ ; ಪ್ರಕರಣ ದಾಖಲು - ಕನ್ನಡ ಹಾಡು ಹಾಕಿದ್ದಕ್ಕೆ ಮ್ಯಾನೇಜರ್​ ಮೇಲೆ ಹಲ್ಲೆ

ಬೆಂಗಳೂರಿನಲ್ಲಿ ಯುವಕರ ಗುಂಪೊಂದು ಪಬ್​ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಮ್ಯಾನೇಜರ್​ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.

youths attacked a pub manager  attacked a pub manager for playing Kannada song  pub manager for playing Kannada song in Bengaluru  ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ  ಪ್ರಕರಣ ದಾಖಲು  ಕನ್ನಡ ಹಾಡು ಹಾಕಿದ್ದಕ್ಕೆ ಮ್ಯಾನೇಜರ್​ ಮೇಲೆ ಹಲ್ಲೆ  ಕನ್ನಡ ಹಾಡು ಹಾಕಿರುವುದಕ್ಕೆ ಆಕ್ಷೇಪ
ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ
author img

By ETV Bharat Karnataka Team

Published : Nov 1, 2023, 11:38 AM IST

ಬೆಂಗಳೂರು : ಕನ್ನಡ ಹಾಡು ಹಾಕಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಯುವಕರ ಗುಂಪೊಂದು ಹಲ್ಲೆ ಮಾಡಿರುವುದಾಗಿ ಪಬ್ ಮ್ಯಾನೇಜರ್​ವೊಬ್ಬರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಅಕ್ಟೋಬರ್ 24ರ ರಾತ್ರಿ ಕೆಂಚನಹಳ್ಳಿ ರಸ್ತೆಯಲ್ಲಿರುವ ಐಡಿಯಲ್ ಹೋಮ್ಸ್ ಬಳಿಯ ಪಬ್​ವೊಂದರಲ್ಲಿ ಈ ಘಟನೆ ನಡೆದಿದ್ದು, ಮ್ಯಾನೇಜರ್ ರವಿಕಾಂತ್ ಎಂಬುವವರು ಆರ್​ ಆರ್ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಕ್ಟೋಬರ್ 24 ರಂದು ರಾತ್ರಿ 10:45ರ ಸುಮಾರಿಗೆ ಪಬ್​ಗೆ ಬಂದಿದ್ದ ಶ್ರೇಯಸ್ ಎಂಬಾತ ಹಾಗೂ ಆತನ ಸ್ನೇಹಿತರು ಪಬ್​ನಲ್ಲಿ ಕನ್ನಡ‌ ಹಾಡು ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ನಂತರ ಅವರ ಜೊತೆಗಿದ್ದ ಮಹಿಳೆಯೊಬ್ಬರ ಸಹಾಯದಿಂದ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ರವಿಕಾಂತ್ ಆರೋಪಿಸಿದ್ದಾರೆ.

ಮ್ಯಾನೇಜರ್ ರವಿಕಾಂತ್ ನೀಡಿದ ದೂರಿನನ್ವಯ ಸದ್ಯ ಶ್ರೇಯಸ್ ಹಾಗೂ ಆತನ ಸ್ನೇಹಿತನ ವಿರುದ್ಧ ಆರ್. ಆರ್. ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಇತರ ಅಪರಾಧ ಪ್ರಕರಣಗಳು: ಮದ್ಯದ ಅಮಲಿನಲ್ಲಿ ದುರ್ವರ್ತನೆ ಪ್ರದರ್ಶಿಸಿ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್‌ ದಾಖಲಿಸಲಾಗಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಹೆಸರನ್ನು ಕೂಗಿ, ಅವರ ಭಾವನೆಗಳಿಗೆ ಧಕ್ಕೆಯುಂಟಾಗುವಂತೆ ಮಾತನಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಕುರಿತು ಎಎಸ್ಐ ಗೌಸ್ ಪಾಷಾ ಅವರು ದೂರು ನೀಡಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಈ ಲಿಂಕ್​ ಅನ್ನು ಕ್ಲಿಕ್​ ಮಾಡಿ: ಮದ್ಯದ ಅಮಲಿನಲ್ಲಿ ದುರ್ವರ್ತನೆ: ಆ್ಯಡಂ ಬಿದ್ದಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲು)

ಇಬ್ಬರು ವಂಚಕರು ಸೆರೆ: ಇತ್ತೀಚಿನ ದಿನಗಳಲ್ಲಿ‌ ಆಧಾರ್ ಕಾರ್ಡ್ ಎನೇಬಲ್ ಸಿಸ್ಟಂನಡಿ (ಎಇಪಿಎಸ್) ಬಯೊಮೆಟ್ರಿಕ್ ಮೂಲಕ ಬ್ಯಾಂಕ್ ಖಾತೆಯಲ್ಲಿ ಹಣ ದೋಚುವ ಟ್ರೆಂಡ್ ಆಗಿದೆ. ಸೈಬರ್ ಖದೀಮರು ಬೆಂಗಳೂರು ಮಾತ್ರವಲ್ಲದೆ ರಾಜ್ಯಾದ್ಯಂತ ಜನರನ್ನು ವಂಚಿಸುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಬೆರಳಚ್ಚುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಖಾತೆದಾರರರಿಗೆ ಅರಿವಿಲ್ಲದಂತೆ ಹಣ ದೋಚುತ್ತಿದ್ದ ಇಬ್ಬರು ಬಿಹಾರ ಮೂಲದ ಆರೋಪಿಗಳನ್ನು ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರು ಅಕ್ಟೋಬರ್​ 31ರ ಮಂಗಳವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲ, ಬೆಂಗಳೂರಿನ ನಗರದ ನಾನಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 115 ಎಇಪಿಎಸ್ ವಂಚನೆ ಪ್ರಕರಣಗಳಲ್ಲಿ ಮೊದಲ ಬಾರಿಗೆ ಆರೋಪಿಗಳನ್ನು ಬಂಧಿಸಿದಂತಾಗಿದೆ. (ಸಂಪೂರ್ಣ ಸುದ್ದಿಗಾಗಿ ಈ ಲಿಂಕ್​ ಅನ್ನು ಕ್ಲಿಕ್​ ಮಾಡಿ: ಬೆಂಗಳೂರು: ಆಧಾರ್ ಸಂಖ್ಯೆ, ಬೆರಳಚ್ಚು ಸಂಗ್ರಹಿಸಿ ಬ್ಯಾಂಕ್‌ ಖಾತೆಗಳಿಂದ ಹಣ ದೋಚುತ್ತಿದ್ದ ಇಬ್ಬರು ವಂಚಕರು ಸೆರೆ)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.