ETV Bharat / state

ಜನರ ಭಾವನೆಗಳ ಮೇಲೆ ಕೇಂದ್ರದ ಗದಾಪ್ರಹಾರ : ವೈ.ಎಸ್.ವಿ.ದತ್ತಾ ಆರೋಪ - ವೈ.ಎಸ್.ವಿ.ದತ್ತಾ ಲೆಟೆಸ್ಟ್ ನ್ಯೂಸ್

ಬಿಜೆಪಿ ಸರ್ಕಾರ ಸ್ವರ್ಗಕ್ಕೆ ಮೂರೇ ಗೇಣು ಎಂಬಂತೆ ನಡೆದುಕೊಳ್ಳುತ್ತಿದ್ದು, ಜನರ, ರೈತರ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದು, ವಾಸ್ತವದ ಸಮಸ್ಯೆಗಳಿಗೆ ಪರಿಹಾರ ನೀಡದೇ ಜನರ ಭಾವನೆಗಳ ಮೇಲೆ ಬಲವಂತದ ಪ್ರಯೋಗಗಳನ್ನು ನಡೆಸುತ್ತಿವೆ‌ ಎಂದು ಮಾಜಿ ಶಾಸಕ, ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತಾ ಟೀಕಿಸಿದರು.

YSV Datta
ವೈ.ಎಸ್.ವಿ.ದತ್ತಾ
author img

By

Published : Jan 23, 2020, 8:26 PM IST

ಬೆಂಗಳೂರು: ಬಿಜೆಪಿ ಸರ್ಕಾರ ಸ್ವರ್ಗಕ್ಕೆ ಮೂರೇ ಗೇಣು ಎಂಬಂತೆ‌ ನಡೆದುಕೊಳ್ಳುತ್ತಿದ್ದು, ಜನರ, ರೈತರ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದಿದೆ. ಆದರೆ ಅಧಿಕಾರ ಸಿಕ್ಕ ಮೇಲೆ ವಾಸ್ತವ ಮರೆತು ತನ್ನ ನೀತಿಗಳನ್ನ ಬಲವಂತದಿಂದ ಜನರ ಮೇಲೆ ಹೇರುತ್ತಿದೆಬ ಎಂದು ಮಾಜಿ ಶಾಸಕ, ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತಾ ಆರೋಪಿಸಿದ್ದಾರೆ.

ಮಾಜಿ ಶಾಸಕ, ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತಾ

ನಗರದ ಅರಮನೆ ಮೈದಾನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸ್ಥಿತಿ, ಪ್ರಧಾನಿ ಭೇಟಿ ಮಾಡಿ ಮನವಿ ಸಲ್ಲಿಸಲು ತಿಂಗಳಾನುಗಟ್ಟಲೆ ಕಾಯಬೇಕಾದ ದುಃಸ್ಥಿತಿ ಇದೆ. ಸರ್ಕಾರ ರಚನೆಗೆ 26 ಸಂಸದರನ್ನು ನೀಡಿದ ಕರ್ನಾಟಕದ ಸ್ಥಿತಿ ಏನಾಗಿದೆ ಎಂಬುದನ್ನು ಊಹಿಸಬಹುದು ಎಂದು ವ್ಯಂಗ್ಯವಾಡಿದರು.

ಪಕ್ಷ ಸಂಕಷ್ಟದಲ್ಲಿರುವುದು ನಿಜವಾದರೂ ಪಕ್ಷವನ್ನು ಗಟ್ಟಿಗೊಳಿಸಬಲ್ಲ ಹೆಚ್.ಡಿ. ದೇವೇಗೌಡರು ಪಕ್ಷದ ಅದ್ಯಮ ಚೇತನ. ಕ್ರಿಯಾಶೀಲತೆಗೆ ಹೆಚ್.ಡಿ.ಕುಮಾರಸ್ವಾಮಿ ಇದ್ದಾರೆ. ದೆಹಲಿಯಲ್ಲಿ ಪ್ರಾದೇಶಿಕ ಪಕ್ಷ ಆಮ್ ಆದ್ಮಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಆದರೆ ಕೇಜ್ರಿವಾಲ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಬಾರದು ಎಂದು ತಡೆಯಲು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂದರು.

ವಿಧಾನಸಭಾ ಚುನಾವಣೆ ಇನ್ನೂ ಮೂರೂವರೆ ವರ್ಷ ಇಲ್ಲ. ಯಾವಾಗ ಬೇಕಾದರೂ ಎದುರಾಗಬಹುದು. ಜೆಡಿಎಸ್ ಮಾತ್ರ ಕಷ್ಟದಲ್ಲಿದೆ ಎಂದು ಭಾವಿಸಬೇಡಿ. ಕಾಂಗ್ರೆಸ್ ಸಹ ತೊಂದರೆಯಲ್ಲಿದೆ. ಸರ್ಕಾರದಲ್ಲಿ ಅಭಿವೃದ್ಧಿ ಸ್ಥಗಿತಗೊಂಡಿದೆ‌. ವಿಧಾನಸೌಧದ ಕೊಠಡಿಗಳು ನೊಣ ಹೊಡೆಯುತ್ತಿರುವುದನ್ನು ನೋಡಿದರೆ ಚುನಾವಣೆ ಯಾವಾಗ ಬೇಕಾದರೂ ಎದುರಾಗಬಹುದು ಎಂಬುದನ್ನು ಜನರು ಸಹ ಊಹಿಸಿದಂತಿದೆ. ಹೀಗಾಗಿ ಪಕ್ಷ ಸಂಘಟನೆಗೆ ಚುರುಕು ಮುಟ್ಟಿಸಬೇಕು ಎಂದು ಕರೆ ನೀಡಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಮಾತನಾಡಿ, ಮೈತ್ರಿ‌ ಸರ್ಕಾರ ಯಾವ ಕಾರಣಕ್ಕಾಗಿ ಬಿದ್ದು ಹೋಯಿತೆನ್ನುವುದು ಎಲ್ಲರಿಗೂ ತಿಳಿದ ವಿಚಾರ. ಮೈತ್ರಿ ಸರ್ಕಾರ ಪತನ ಬಳಿಕ ಕಾರ್ಯಕರ್ತರು ಮುಖಂಡರ ಮನಸ್ಸಿಗೆ‌ ಸಹಜವಾಗಿಯೇ ನೋವಾಗಿದೆ. ಮೈತ್ರಿ ಸರ್ಕಾರದಲ್ಲಿ ಸಾಲಮನ್ನಾ, ಬಡವರ ಬಂಧು ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನೂ ನೀಡಿದರೂ ಆ ಬಗ್ಗೆ ಜನಾಭಿಪ್ರಾಯ ಮೂಡಿಸುವಲ್ಲಿ ಪಕ್ಷ ಹಿಂದೆ ಬಿದ್ದಿದೆ. ಪಕ್ಷದ ಬಲವರ್ಧನೆಗೆ ಕುಮಾರಸ್ವಾಮಿ ಅವರು ನೀಡಿದ ಯೋಜನೆಗಳು ಜನರನ್ನು ಮುಟ್ಟುವಂತೆ ಮಾಡಬೇಕು ಎಂದರು.

Intro:ಬೆಂಗಳೂರು : ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಸ್ವರ್ಗಕ್ಕೆ ಮೂರೇ ಗೇಣುವಂತೆ‌ ನಡೆದುಕೊಳ್ಳುತ್ತಿವೆ. ಆದರೆ ಜನರ ಸಮಸ್ಯೆಗಳನ್ನು ಪರಿಹರಿಸುತ್ತೇವೆ. ರೈತರ ಕಷ್ಟಗಳಿಗೆ ನೆರವಾಗದೇ ವಾಸ್ತವ ಸಮಸ್ಯೆಗಳಿಗೆ ಪರಿಹಾರ ನೀಡದೇ ಜನರ ಭಾವನೆಗಳ ಮೇಲೆ ಬಲವಂತದ ಪ್ರಯೋಗಗಳನ್ನು ನಡೆಸುತ್ತಿವೆ‌ ಎಂದು ಮಾಜಿ ಶಾಸಕ, ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತಾ ಟೀಕಿಸಿದ್ದಾರೆ.Body:ಲೋಕಸಭಾ ಹಾಗೂ ರಾಜ್ಯ ವಿಧಾನಸಭೆಯ ಉಪಚುನಾವಣೆಯ ಸೋಲಿನ‌ ಬಳಿಕ ಕುಂದಿರುವ ಪಕ್ಷಕ್ಕೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ‌ ನಗರದ ಅರಮನೆ ಮೈದಾನದಲ್ಲಿ‌ ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸ್ಥಿತಿ ಪ್ರಧಾನಿ ಕೇಂದ್ರದ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ತಿಂಗಳಾನುಗಟ್ಟಲೆ ಕಾಯಬೇಕಾದ ದುಃಸ್ಥಿತಿ ಇದೆ. ಸರ್ಕಾರ ರಚನೆಗೆ, 28 ಸಂಸದರನ್ನು ನೀಡಿದ ಕರ್ನಾಟಕದ ಸ್ಥಿತಿ ಏನಾಗಿದೆ ಎಂಬುದನ್ನು ಊಹಿಸಬಹುದು ಎಂದು ವ್ಯಂಗ್ಯವಾಡಿದರು.
ಪಕ್ಷ ಸಂಕಷ್ಟದಲ್ಲಿರುವುದು ನಿಜವಾದರೂ. ಪಕ್ಷವನ್ನು ಗಟ್ಟಿಗೊಳಿಸಬಲ್ಲ ಹೆಚ್.ಡಿ. ದೇವೇಗೌಡರು ಪಕ್ಷದ ಅದ್ಯಮ ಚೇತನ. ಕ್ರಿಯಾಶೀಲತೆಗೆ ಹೆಚ್.ಡಿ.ಕುಮಾರಸ್ವಾಮಿ ಇದ್ದಾರೆ. ದೆಹಲಿಯಲ್ಲಿ ಪ್ರಾದೇಶಿಕ ಪಕ್ಷ ಆಮ್ ಆದ್ಮಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಆದರೆ ಕೇಜ್ರಿವಾಲ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಬಾರದು ಎಂದು ತಡೆಯಲು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂದರು.
ಮಹದಾಯಿ, ಕನ್ನಡ ಭಾಷೆ‌, ನೆಲ‌, ಜಲ‌ ಉಳಿಸಲು ಇರುವ ಪಕ್ಷವೆಂದರೆ ಅದು ಜೆಡಿಎಸ್ ಮಾತ್ರ. ದೆಹಲಿಯಲ್ಲಿ ಆಮ್ ಆದ್ಮಿ ಸಾಧ್ಯವಾಗುತ್ತದೆ ಎಂದರೆ ಕರ್ನಾಟಕದಲ್ಲಿ ಜೆಡಿಎಸ್ ಏಕೆ ಸಾಧ್ಯವಿಲ್ಲ ? ಎಂದು ಪ್ರಶ್ನಿಸಿದರು.
ವಿಧಾನಸಭಾ ಚುನಾವಣೆ ಇನ್ನೂ ಮೂರುವರೆ ವರ್ಷ ಇಲ್ಲ. ಯಾವಾಗ ಬೇಕಾದರೂ ಎದುರಾಗಬಹುದು. ಜೆಡಿಎಸ್ ಮಾತ್ರ‌ ಕಷ್ಟದಲ್ಲಿದೆ ಎಂದು ಭಾವಿಸಬೇಡಿ. ಕಾಂಗ್ರೆಸ್ ಸಹ ತೊಂದರೆಯಲ್ಲಿದೆ. ಸರ್ಕಾರದಲ್ಲಿ ಅಭಿವೃದ್ಧಿ ಸ್ಥಗಿತಗೊಂಡಿದೆ‌.
ವಿಧಾನಸೌಧದ ಕೊಠಡಿಗಳು ನೊಣ ಹೊಡೆಯುತ್ತಿರುವುದನ್ನು ನೋಡಿದರೆ ಚುನಾವಣೆ ಯಾವಾಗ ಬೇಕಾದರೂ ಎದುರಾಗಬಹುದೆಂಬುದನ್ನು ಜನರು ಸಹ ಊಹಿಸಿದಂತಿದೆ. ಹೀಗಾಗಿ ಪಕ್ಷ ಸಂಘಟನೆಗೆ ಚುರುಕು ಮುಟ್ಟಿಸಬೇಕು ಎಂದು ಕರೆ ನೀಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಮಾತನಾಡಿ, ಮೈತ್ರಿ‌ ಸರ್ಕಾರ ಯಾವ ಕಾರಣಕ್ಕಾಗಿ ಬಿದ್ದು ಹೋಯಿತೆನ್ನುವುದು ಎಲ್ಲರಿಗೂ ತಿಳಿದ ವಿಚಾರವೇ. ಮೈತ್ರಿ ಸರ್ಕಾರ ಪತನ ಬಳಿಕ ಕಾರ್ಯಕರ್ತರು ಮುಖಂಡರ ಮನಸ್ಸಿಗೆ‌ ಸಹಜವಾಗಿಯೇ ನೋವಾಗಿದೆ. ಮೈತ್ರಿ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಾಲಮನ್ನಾ, ಬಡವರ ಬಂಧು ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನೂ ನೀಡಿದರೂ ಆ ಬಗ್ಗೆ ಜನಾಭಿಪ್ರಾಯ ಮೂಡಿಸುವಲ್ಲಿ ಪಕ್ಷ ಹಿಂದೆ ಬಿದ್ದಿದೆ. ಪಕ್ಷದ ಬಲವರ್ಧನೆಗೆ ಕುಮಾರಸ್ವಾಮಿ ಅವರು ನೀಡಿದ ಯೋಜನೆಗಳು ಜನರನ್ನು ಮುಟ್ಟುವಂತೆ ಮಾಡಬೇಕು ಎಂದು ಹೇಳಿದರು.
ನಿರ್ಣಯ ಮಂಡಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಬಿ‌.ಎಂ.ಫಾರೂಕ್, ಈ ದೇಶ ತೀರಾ ಸಂಕಷ್ಟದಲ್ಲಿದೆ. ಸಮಸ್ಯೆಗಳ ನಡುವೆ ಆರ್ಥಿಕ ಸಂಕಷ್ಟವೂ ಇದೆ. ದಾವೊಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾರತ 151ನೇ ಸ್ಥಾನಕ್ಕೆ ಕುಸಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಎನ್‌ಸಿಆರ್, ಎನ್‌ಪಿಆರ್‌ಗೆ ಜೋಡಿಸುವುದಿಲ್ಲ ಎಂದು ಹೇಳುವ ಕೇಂದ್ರ ಸರ್ಕಾರ ಮೂಲದ ಬಗ್ಗೆ ಮಾಹಿತಿ ಕೇಳುತ್ತಿರುವುದು ಏಕೆ?. ಸಿಎಎ ಜಾರಿ ಆಗುವುದಾದರೆ ಎಲ್ಲಾ‌ ಧರ್ಮದವರಿಗೂ ಜಾರಿಯಾಗಲಿ. ಇದರಲ್ಲಿ ಧರ್ಮದ ತಾರತಮ್ಯ ಬೇಡ ಎಂದು ಹೇಳಿದರು.
ಮೈಸೂರಿನ ಮಹಾಪೌರ ತಸ್ಲೀಮಾ ಸಮಾರಂಭದಲ್ಲಿ ಸನ್ಮಾನ
ಸ್ವೀಕರಿಸಿದ ನಂತರ ಮಾತನಾಡಿ, ಸಿಎಎ, ಎನ್‌ಆರ್‌ಸಿಯಿಂದ‌ ತೊಂದರೆಯಾಗುತ್ತಿರುವ ಇಂತಹ ಸಂದರ್ಭದಲ್ಲಿ ಮುಸ್ಲಿಂ‌ಸಮುದಾಯದ ತಮ್ಮನ್ನು ಗುರುತಿಸಿ ಮೇಯರ್ ಮಾಡಿದ್ದಾರೆ.
ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್ ಬಿಜೆಪಿಯದ್ದು ಬರಿ ಘೋಷಣೆ ಮಾತ್ರ. ನಿಜಕ್ಕೂ ಇದನ್ನು ಪಾಲಿಸುತ್ತಿರುವುದು ಜೆಡಿಎಸ್ ಮಾತ್ರವೇ ಎಂದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.